ಮೆಲ್ಬರ್ನ್: ಟಿ20 ವಿಶ್ವಕಪ್ ಫೈನಲ್ (T20 World Cup 2022) ಪಂದ್ಯದಲ್ಲಿ ಪಾಕಿಸ್ತಾನ (Pakistan) ವಿರುದ್ಧ ಇಂಗ್ಲೆಂಡ್ (England) ತಂಡ ಗೆಲ್ಲಬೇಕಾದರೆ ಮಹತ್ವದ ಪಾತ್ರ ವಹಿಸಿದ ಆಲ್‍ರೌಂಡರ್ ಬೆನ್‍ಸ್ಟೋಕ್ಸ್ (Ben Stokes) ಆಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
Advertisement
ಪಾಕಿಸ್ತಾನ ನೀಡಿದ 138 ರನ್‍ಗಳ ಅಲ್ಪಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಒಂದು ಹಂತದಲ್ಲಿ 45 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್‌ಮ್ಯಾನ್‌ಗಳು ಪೆವಿಲಿಯನ್ ಸೇರಿಕೊಂಡಿದ್ದರು. ಈ ವೇಳೆ ಇಂಗ್ಲೆಂಡ್‍ಗೆ ಬೆನ್ನೆಲುಬಾಗಿ ನಿಂತಿದ್ದು ಬೆನ್‍ಸ್ಟೋಕ್ಸ್ ತಾನು ಬಿಗ್ ಮ್ಯಾಚ್‍ಗಳಲ್ಲಿ ಅಬ್ಬರಿಸುವ ಆಟಗಾರ. ನಾನೇ ಮ್ಯಾಚ್ ವಿನ್ನರ್ ಎಂಬಂತೆ ಹೋರಾಟ ನಡೆಸಿದ ಸ್ಟೋಕ್ಸ್ ತಾಳ್ಮೆಯುತ ಬ್ಯಾಟಿಂಗ್ ಮೂಲಕ ಕೊನೆಯ ವರೆಗೆ ನಿಂತು ಇಂಗ್ಲಂಡ್‍ಗೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಇಂಗ್ಲೆಂಡ್!
Advertisement
Advertisement
ಈ ಪ್ರದರ್ಶನ ಕಂಡ ಪ್ರೇಕ್ಷಕರು ಬೆನ್‍ಸ್ಟೋಕ್ಸ್ ನಿಜವಾದ ಮ್ಯಾಚ್ ವಿನ್ನರ್. ಆತ ಆಡಿದ ಆಟ 2019 ಏಕದಿನ ವಿಶ್ವಕಪ್ ಫೈನಲ್ ಪಂದ್ಯವನ್ನು ನೆನಪಿಸಿತ್ತು ಎಂದು ಹಾಡಿ ಹೊಗಳಿದ್ದಾರೆ.
Advertisement
ಬೆನ್‍ಸ್ಟೋಕ್ಸ್ 2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಇದೇ ರೀತಿ ಆಡಿ ಕೈಜಾರಿದ್ದ ಪಂದ್ಯವನ್ನು ಗೆದ್ದು ಇಂಗ್ಲೆಂಡ್‌ಗೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಆ ಬಳಿಕ ಇದೀಗ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಮತ್ತೊಮ್ಮೆ ಘರ್ಜಿಸಿ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದಾರೆ.
2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಜೇಯ 84 ರನ್ (98 ಎಸೆತ) ಸಿಡಿಸಿದ್ದರು. ಇಂದು ಪಾಕ್ ವಿರುದ್ಧ ಫೈನಲ್‍ನಲ್ಲಿ ಅಜೇಯ 52 ರನ್ (49 ಎಸೆತ) ಚಚ್ಚಿ, ಬೌಲಿಂಗ್‌ನಲ್ಲಿ 1 ವಿಕೆಟ್ ಕಿತ್ತು ಇಂಗ್ಲೆಂಡ್‍ಗೆ ಕಪ್ ತಂದುಕೊಟ್ಟಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸ್ಟೋಕ್ಸ್ ಆಟಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ: ಫೈನಲ್‍ನಲ್ಲಿ ಪಾಕ್‍ಗೆ ಸೋಲು – 12 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್
ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 137 ರನ್‍ಗಳ ಅಲ್ಪಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಪರ ಬೌಲಿಂಗ್‍ನಲ್ಲಿ ಸ್ಯಾಮ್ ಕರನ್ ಮಿಂಚಿದರೆ, ಬ್ಯಾಟಿಂಗ್‍ನಲ್ಲಿ ಬೆನ್‍ಸ್ಟೋಕ್ಸ್ ಆಧಾರವಾದರು. ಪರಿಣಾಮ 19 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 138 ರನ್ ಬಾರಿಸಿ ಇನ್ನೂ 1 ಓವರ್ ಬಾಕಿ ಇರುವಂತೆ 5 ವಿಕೆಟ್‍ಗಳ ಅಂತರದಿಂದ ಇಂಗ್ಲೆಂಡ್ ಗೆದ್ದು ವಿಶ್ವಕಪ್ ಎತ್ತಿ ಹಿಡಿಯಿತು.