ಸಿಡ್ನಿ: ಬ್ಯಾಟ್ಸ್‌ಮ್ಯಾನ್‌ಗಳ ವೈಫಲ್ಯಕ್ಕೆ ಬೆಲೆತೆತ್ತ ದಕ್ಷಿಣ ಆಫ್ರಿಕಾ (South Africa) ಪಾಕಿಸ್ತಾನ (Pakistan) ವಿರುದ್ಧ ಸೋಲುಂಡಿದೆ. ಪಾಕ್ ತಂಡ 33 ರನ್‌ಗಳ ಭರ್ಜರಿ ಜಯದೊಂದಿಗೆ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
Advertisement
186 ರನ್‍ಗಳ ಗುರಿ ಬೆನ್ನಟ್ಟಿದ ಸೌತ್ ಆಫ್ರಿಕಾ 9 ಓವರ್‌ಗಳಲ್ಲಿ 69 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಬಂತು. ಬಳಿಕ 14 ಓವರ್‌ಗಳಿಗೆ ಪಂದ್ಯವನ್ನು ಇಳಿಸಲಾಯಿತು. ದಕ್ಷಿಣ ಆಫ್ರಿಕಾಗೆ 30 ಎಸೆತಗಳಲ್ಲಿ 73 ರನ್ ಟಾರ್ಗೆಟ್ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 14 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 108 ರನ್ ಸಿಡಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿದೆ. ಇದನ್ನೂ ಓದಿ: ಬಾಂಗ್ಲಾ ಸೋತ ಬಳಿಕ ಕೊಹ್ಲಿ ವಿರುದ್ಧ ಫೇಕ್ ಫೀಲ್ಡಿಂಗ್ ಆರೋಪ
Advertisement
Advertisement
ಆಫ್ರಿಕಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಾಗಿತು. ಮೊದಲ ಓವರ್‌ನಲ್ಲೇ ಡಿಕಾಕ್‍ರನ್ನು ಶೂನ್ಯಕ್ಕೆ ಪೆವಿಲಿಯನ್ ಗಟ್ಟುವುದರಲ್ಲಿ ಶಾಹೀನ್ ಅಫ್ರಿದಿ ಯಶಸ್ವಿಯಾದರು. ಆ ಬಳಿಕ ಬಂದ ಬ್ಯಾಟ್ಸ್‌ಮ್ಯಾನ್‌ಗಳು ಆಫ್ರಿಕಾ ಕೈಹಿಡಿಯಲಿಲ್ಲ. ಬವುಮ 36 ರನ್ (19 ಎಸೆತ, 4 ಬೌಂಡರಿ, 1 ಸಿಕ್ಸ್) ಸಿಡಿಸಿದ್ದೆ ಆಫ್ರಿಕಾ ಬ್ಯಾಟಿಂಗ್ ಸರದಿಯ ಹೆಚ್ಚಿನ ಗಳಿಕೆ. ಇತ್ತ ಪಾಕ್ ಪರ ಶಾಹೀನ್ ಅಫ್ರಿದಿ 3 ವಿಕೆಟ್ ಪಡೆದು ಆಫ್ರಿಕಾ ಗೆಲುವಿನ ರೂವಾರಿಯಾದರು. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಕೊಹ್ಲಿ ಕಿಂಗ್ – ನೂತನ ವಿಶ್ವದಾಖಲೆ
Advertisement
ಈ ಮೊದಲು ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಈ ನಿರ್ಧಾರ ಆರಂಭದಲ್ಲೇ ತಲೆಕೆಳಗಾಯಿತು. 38 ರನ್ ಆಗುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್ ಸೇರಿಕೊಂಡರು. ಆ ಬಳಿಕ ಮೊಹಮ್ಮದ್ ಹ್ಯಾರಿಸ್ 28 ರನ್ (11 ಎಸೆತ, 2 ಬೌಂಡರಿ, 3 ಸಿಕ್ಸ್) ಚಚ್ಚಿ ಎಲ್‍ಬಿಡಬ್ಲ್ಯೂ ಬಲೆಗೆ ಬಿದ್ದರು. ನಂತರ ಇಫ್ತಿಕರ್ ಅಹಮದ್ ಪಾಕಿಸ್ತಾನದ ರನ್ ಹೆಚ್ಚಿಸುವ ಜವಾಬ್ಧಾರಿ ವಹಿಸಿಕೊಂಡರು. ಇವರಿಗೆ ಕೆಲ ಕ್ರಮಾಂಕದಲ್ಲಿ ಶಬಾದ್ ಖಾನ್ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದರು.
ಶಬಾದ್ ಖಾನ್ ಸ್ಫೋಟಕ ಇನ್ನಿಂಗ್ಸ್ 52 ರನ್‍ಗೆ (22 ಎಸೆತ, 3 ಬೌಂಡರಿ, 4 ಸಿಕ್ಸ್) ಅಂತ್ಯವಾಯಿತು. ಇವರ ಬೆನ್ನಲ್ಲೇ ಇಫ್ತಿಕರ್ 51 ರನ್ (35 ಎಸೆತ, 3 ಬೌಂಡರಿ, 2 ಸಿಕ್ಸ್) ಸಿಡಿಸಿ 19ನೇ ಓವರ್‌ನ ಮೊದಲ ಎಸೆತದಲ್ಲಿ ರಿಲೀ ರೋಸೌವ್ ಹಿಡಿದ ಅದ್ಭುತ ಕ್ಯಾಚ್‍ಗೆ ಬಲಿಯಾದರು. ಅಂತಿಮವಾಗಿ ಪಾಕಿಸ್ತಾನ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 185 ರನ್ ಒಟ್ಟುಗೂಡಿಸಿತು.