ವಾಷಿಂಗ್ಟನ್: ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಮುಖಾಮುಖಿಯಾಗಲಿವೆ.
Advertisement
2024ರ ಟಿ20 ವಿಶ್ವಕಪ್ ಟೂರ್ನಿಯು ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಜೂನ್ 1 ರಿಂದ ಜೂನ್ 29ರ ವರೆಗೆ ನಡೆಯಲಿದೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್-12 ಹಂತವನ್ನು ಸೂಪರ್-8ಗೆ ಇಳಿಸಲಾಗಿದೆ. ಸೂಪರ್-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಇದನ್ನೂ ಓದಿ: ಕ್ರಿಕೆಟ್ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್, ಸಿದ್ದು
Advertisement
Advertisement
ಜೂನ್ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್ 19 ರಿಂದ 24ರ ವರೆಗೆ ಸೂಪರ್-8 ಪಂದ್ಯಗಳು, ಜೂನ್ 26 ಮತ್ತು ಜೂನ್ 27 ರಂದು ಸೆಮಿಫೈನಲ್ ಪಂದ್ಯಗಳು ನಡಯೆಲಿದ್ದು, ಜೂನ್ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಭಾರತವನ್ನು ನಂ.1 ಪಟ್ಟದಿಂದ ಕೆಳಗಿಳಿಸಿದ ಆಸ್ಟ್ರೇಲಿಯಾ – ಪ್ಯಾಟ್ ಕಮ್ಮಿನ್ಸ್ ನಾಯಕತ್ವಕ್ಕೆ ಮೆಚ್ಚುಗೆ!
Advertisement
ಗುಂಪು ಹಂತದಲ್ಲಿ ಭಾರತ ಎದುರಿಸುವ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳು ನ್ಯೂಯಾರ್ಕ್ ನಗರದಲ್ಲಿ, ಒಂದು ಪಂದ್ಯ ಫ್ಲೋರಿಡಾ ನಗರದಲ್ಲಿ ನಡೆಯಲಿದೆ. ಗುಂಪು ಹಂತದಲ್ಲಿ ಜೂನ್ 5 ರಂದು ಐರ್ಲೆಂಡ್ ವಿರುದ್ಧ, ಜೂನ್ 12 ರಂದು ಯುಎಸ್‌ಎ ವಿರುದ್ಧ, ಜೂನ್ 15 ರಂದು ಕೆನಡಾ ವಿರುದ್ಧ ಭಾರತ ತಂಡ ಸೆಣಸಲಿದೆ. ಇನ್ನೂ ಬಹು ನಿರೀಕ್ಷಿತ ಹೈವೋಲ್ಟೇಜ್ ಕದನದಲ್ಲಿ ಜೂನ್ 9 ರಂದು ಪಾಕಿಸ್ತಾನ ವಿರುದ್ಧ ನ್ಯೂಯಾರ್ಕ್‌ನ ಅಂಗಳದಲ್ಲಿ ಭಾರತ ಸೆಣಸಲಿದೆ. ಇದನ್ನೂ ಓದಿ: ಧೋನಿಗೆ 15 ಕೋಟಿ ರೂ. ದೋಖಾ – ಮಾಜಿ ಪಾಲುದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಮಹಿ
ಯಾವ ಗುಂಪಿನಲ್ಲಿ-ಯಾವ ತಂಡಗಳು?
ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್‌ಎ
ಗ್ರೂಪ್-ಬಿ:
ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್, ಒಮನ್
ಗ್ರೂಪ್-ಸಿ:
ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
ಗ್ರೂಪ್-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್, ನೇಪಾಳ