T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್‌ ಕದನ

Public TV
2 Min Read
T20 World Cup

ವಾಷಿಂಗ್ಟನ್‌: ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಮುಖಾಮುಖಿಯಾಗಲಿವೆ.

01 1

2024ರ ಟಿ20 ವಿಶ್ವಕಪ್‌ ಟೂರ್ನಿಯು ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಜೂನ್‌ 1 ರಿಂದ ಜೂನ್‌ 29ರ ವರೆಗೆ ನಡೆಯಲಿದೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಇದನ್ನೂ ಓದಿ: ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು

T20 World Cup 2

ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಭಾರತವನ್ನು ನಂ.1 ಪಟ್ಟದಿಂದ ಕೆಳಗಿಳಿಸಿದ ಆಸ್ಟ್ರೇಲಿಯಾ – ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವಕ್ಕೆ ಮೆಚ್ಚುಗೆ!

T20 World Cup 3

ಗುಂಪು ಹಂತದಲ್ಲಿ ಭಾರತ ಎದುರಿಸುವ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳು ನ್ಯೂಯಾರ್ಕ್‌ ನಗರದಲ್ಲಿ, ಒಂದು ಪಂದ್ಯ ಫ್ಲೋರಿಡಾ ನಗರದಲ್ಲಿ ನಡೆಯಲಿದೆ. ಗುಂಪು ಹಂತದಲ್ಲಿ ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ, ಜೂನ್‌ 12 ರಂದು ಯುಎಸ್‌ಎ ವಿರುದ್ಧ, ಜೂನ್‌ 15 ರಂದು ಕೆನಡಾ ವಿರುದ್ಧ ಭಾರತ ತಂಡ ಸೆಣಸಲಿದೆ. ಇನ್ನೂ ಬಹು ನಿರೀಕ್ಷಿತ ಹೈವೋಲ್ಟೇಜ್‌ ಕದನದಲ್ಲಿ ಜೂನ್‌ 9 ರಂದು ಪಾಕಿಸ್ತಾನ ವಿರುದ್ಧ ನ್ಯೂಯಾರ್ಕ್‌ನ ಅಂಗಳದಲ್ಲಿ ಭಾರತ ಸೆಣಸಲಿದೆ. ಇದನ್ನೂ ಓದಿ: ಧೋನಿಗೆ 15 ಕೋಟಿ ರೂ. ದೋಖಾ – ಮಾಜಿ ಪಾಲುದಾರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಮಹಿ

ಯಾವ ಗುಂಪಿನಲ್ಲಿ-ಯಾವ ತಂಡಗಳು?
ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ

ಗ್ರೂಪ್‌-ಬಿ:
ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌

ಗ್ರೂಪ್‌-ಸಿ:
ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ

ಗ್ರೂಪ್‌-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ

Share This Article