– ಜೂನ್ 9ರಂದು ನ್ಯೂಯಾರ್ಕ್ನಲ್ಲಿ ಭಾರತ – ಪಾಕ್ ಮುಖಾಮುಖಿ!
ವಾಷಿಂಗ್ಟನ್: ಐಸಿಸಿ ಟಿ20 ವಿಶ್ವಕಪ್ (T20 World Cup 2024) ಟೂರ್ನಿಗೆ ಕೆಲವೇ ದಿನಗಳು ಬಾಕಿಯಿದೆ. ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಚುಟುಕು ಕ್ರಿಕೆಟ್ ಕೂಟವನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಹೊತ್ತಿನಲ್ಲೇ ಅದ್ಧೂರಿ ಕ್ರೀಡಾಕೂಟಕ್ಕೆ ಉಗ್ರರ ಕರಿನೆರಳು ಬಿದ್ದಿದೆ.
ಹೌದು. ಜಾಗತಿಕ ಕ್ರಿಕೆಟ್ ಟೂರ್ನಿಗೆ ಉತ್ತರ ಪಾಕಿಸ್ತಾನದದಿಂದ (North Pakistan) ಭಯೋತ್ಪಾದಕರ ದಾಳಿ ಬೆದರಿಕೆ ಬಂದಿದೆ. ಪ್ರೋ-ಇಸ್ಲಾಮಿಕ್ ಸ್ಟೇಟ್ನಿಂದ ಭದ್ರತಾ ಬೆದರಿಕೆ (Terror Threat) ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮುಂದಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ತಂಡದಿಂದ ರಾಹುಲ್ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್ರೇಟ್ ಬಗ್ಗೆ ರೋಹಿತ್ ಹೇಳಿದ್ದೇನು?
- Advertisement 2
- Advertisement 3
ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ವೆಸ್ಟ್ ಇಂಡೀಸ್ನ ಸಿಇಒ ಜಾನಿ ಗ್ರೇವ್ಸ್, ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದ್ದೇವೆ. ನಮ್ಮ ಕಾರ್ಯಕ್ರಮಕ್ಕೆ ಗುರುತಿಸಲಾದ ಅಪಾಯಗಳನ್ನು ತಗ್ಗಿಸಲು ಸೂಕ್ತವಾದ ಯೋಜನೆಗಳು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಿಷಭ್ ಪಂತ್ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್ ಎಂದು ಪಾಕ್ ಬೌಲರ್ ಹೊಗಳಿದ ಊರ್ವಶಿ ರೌಟೇಲಾ
- Advertisement 4
ಈ ನಡುವೆ ಪ್ರೊ-ಇಸ್ಲಾಮಿಕ್ ಸ್ಟೇಟ್ಸ್ (IS) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ. ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಶಾಖೆಯ ವೀಡಿಯೊ ಸಂದೇಶಗಳು ಸೇರಿವೆ. ಇದು ಹಲವಾರು ದೇಶಗಳಲ್ಲಿ ನಡೆದ ದಾಳಿಗಳನ್ನು ಎತ್ತಿ ತೋರಿಸಿವೆ. ಅಲ್ಲದೇ ಬೆಂಬಲಿಗರನ್ನು ಅವರ ದೇಶಗಳಲ್ಲಿ ಯುದ್ಧಭೂಮಿಗೆ ಸೇರುವಂತೆ ಒತ್ತಾಯಿಸಿರುವುದು ಕಂಡುಬಂದಿದೆ ಎಂದು ತಿಳಿದುಬಂದಿದೆ.
ವಿಶ್ವಕಪ್ ಟೂರ್ನಿ ಎಲ್ಲಿ? ಯಾವಾಗ?
ಜೂನ್ 1 ರಿಂದ ಜೂನ್ 29ರ ವರೆಗೆ ವಿಶ್ವಕಪ್ ಟೂರ್ನಿ ನಡೆಯಲಿದ್ದು, ಜೂನ್ 9ರಂದು ನ್ಯೂಯಾರ್ಕ್ನಲ್ಲಿ ಭಾರತ ಮತ್ತು ಪಾಕ್ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್-12 ಹಂತವನ್ನು ಸೂಪರ್-8ಗೆ ಇಳಿಸಲಾಗಿದೆ. ಸೂಪರ್-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಜೂನ್ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್ 19 ರಿಂದ 24ರ ವರೆಗೆ ಸೂಪರ್-8 ಪಂದ್ಯಗಳು, ಜೂನ್ 26 ಮತ್ತು ಜೂನ್ 27 ರಂದು ಸೆಮಿಫೈನಲ್ ಪಂದ್ಯಗಳು ನಡಯೆಲಿದ್ದು, ಜೂನ್ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಯಾವ ಗುಂಪಿನಲ್ಲಿ-ಯಾವ ತಂಡಗಳು?
ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್ಎ
ಗ್ರೂಪ್-ಬಿ:
ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮನ್
ಗ್ರೂಪ್-ಸಿ:
ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
ಗ್ರೂಪ್-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್, ನೇಪಾಳ