ಭಾರತ, ಪಾಕಿಸ್ತಾನ ಟಿ20 – ಕೆಲವೇ ನಿಮಿಷಗಳಲ್ಲಿ ಟಿಕೆಟ್ ಸೋಲ್ಡ್ ಔಟ್

Public TV
1 Min Read
india pakistan cricket ticket 2

ದುಬೈ: ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ- ಪಾಕಿಸ್ತಾನದ ರಣರೋಚಕ ಪಂದ್ಯ ವೀಕ್ಷಿಸಲು ಪ್ರತಿ ಬಾರಿ ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುತ್ತಾರೆ. ಅದೇ ರೀತಿ ಈ ಬಾರಿ ಸಹ ಮುಗಿಬಿದ್ದು ಟಿಕೆಟ್ ಖರೀದಿಸಿದ್ದಾರೆ. ಟಿಕೆಟ್ ಬುಕ್ಕಿಂಗ್ ಅವಕಾಶ ಸಿಕ್ಕ ಕೆಲವೇ ನಿಮಿಷಗಳಲ್ಲಿ ಎಲ್ಲ ಟಿಕೆಟ್‍ಗಳು ಸೋಲ್ಡ್ ಔಟ್ ಆಗಿವೆ.

india pakistan cricket ticket

ಈ ಬಾರಿಯ ವಿಶ್ವಕಪ್ ಪಂದ್ಯಾವಳಿ ಯುಎಇನಲ್ಲಿ ನಡೆಯುತ್ತಿದ್ದು, ಟಿಕೆಟ್ ಬುಕ್ಕಿಂಗ್‍ಗೆ ಅವಕಾಶ ಕಲ್ಪಿಸಲಾಗಿತ್ತು. ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಬುಕ್ ಮಾಡಿದ್ದಾರೆ. ಹೀಗಾಗಿ ಕೆಲವೇ ನಿಮಿಷಗಳಲ್ಲಿ ಟಿಕೆಟ್‍ಗಳು ಸೋಲ್ಡ್ ಔಟ್ ಆಗಿವೆ. 2019ರ ವಿಶ್ವಕಪ್ ಬಳಿಕ ಎರಡೂ ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯ ವೀಕ್ಷಿಸಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಚೆನ್ನೈ – ಡೆಲ್ಲಿಗೆ 3 ವಿಕೆಟ್ ರೋಚಕ ಜಯ

ಭಾರತ ಹಾಗೂ ಪಾಕಿಸ್ಥಾನ ಗ್ರೂಪ್ 2ನಲ್ಲಿ ಮುಖಾಮುಖಿಯಾಗುತ್ತಿದ್ದು, ಅಕ್ಟೋಬರ್ 24ರಂದು ದುಬೈ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಟಿಕೆಟ್ ಸೋಲ್ಡ್ ಔಟ್ ಆಗಿರುವ ಕುರಿತು ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಜನರಲ್, ಜನರಲ್ ಈಸ್ಟ್, ಪ್ರೀಮಿಯಂ, ಪೆವಿಲಿಯನ್ ಈಸ್ಟ್ ಹಾಗೂ ಪ್ಲಾಟಿನಂ ಎಲ್ಲ ರೀತಿಯ ಟಿಕೆಟ್ ಬುಕ್ ಆಗಿವೆ ಎಂದು ಹೇಳಿದೆ. ಟಿಕೆಟ್ ಬುಕ್ ಮಾಡಲು ಪ್ಲಾಟಿನಂಲಿಸ್ಟ್ ವೆಬ್‍ಸೈಟ್ ಓಪನ್ ಆಗುತ್ತಿಲ್ಲ ಎಂದು ವರದಿ ಮಾಡಿದೆ.

India Pakistan

ಟಿ20 ವಿಶ್ವಕಪ್‍ನ ಟಿಕೆಟ್‍ಗಳನ್ನು ಬುಕ್ ಮಾಡಲು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅವಕಾಶ ನೀಡಿದ್ದೇ ತಡ, ಸಾವಿರಾರು ಕ್ರಿಕೆಟ್ ಅಭಿಮಾನಿಗಳು ವೆಬ್‍ಸೈಟ್‍ಗೆ ಮುಗಿಬಿದ್ದು, ತಮ್ಮ ಸೀಟ್‍ಗಳನ್ನು ಬುಕ್ ಮಾಡಿಕೊಂಡಿದ್ದಾರೆ. ಮಾತ್ರವಲ್ಲದೆ ಹತ್ತಾರು ಸಾವಿರ ಜನ ಒಂದು ಗಂಟೆಗೂ ಅಧಿಕ ಕಾಲ ಆನ್‍ಲೈನ್ ಕ್ಯೂನಲ್ಲಿ ಕಾದಿದ್ದಾರೆ. ಇದನ್ನೂ ಓದಿ: ಪಂಡೋರಾ ಪೇಪರ್ ರಹಸ್ಯ- ಸಚಿನ್ ತೆಂಡೂಲ್ಕರ್ ಹೆಸರು ಉಲ್ಲೇಖ

ಭಾನುವಾರ ರಾತ್ರಿ ಪ್ರೀಮಿಯಂ ಟಿಕೆಟ್ ಬೆಲೆ 30,431 ರೂ. ಇದ್ದರೆ, ಪ್ಲಾಟಿನಂ ಟಿಕೆಟ್ ಬೆಲೆ 52,745 ರೂ. ಇತ್ತು. ಆದರೆ ಸೋಮವಾರ ಬೆಳಗ್ಗೆ ಪ್ಲಾಟಿನಂ ಲಿಸ್ಟ್ ವೆಬ್‍ಸೈಟ್ ನಲ್ಲಿ ಯಾವುದೇ ಟಿಕೆಟ್ ಲಭ್ಯವಿರಲಿಲ್ಲ.

Share This Article
Leave a Comment

Leave a Reply

Your email address will not be published. Required fields are marked *