Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಗೆಲುವಿನೊಂದಿಗೆ ಟಿ20 ವಿಶ್ವಕಪ್ ಅಭಿಯಾನ ಮುಗಿಸಿದ ಭಾರತ

Public TV
Last updated: November 8, 2021 10:38 pm
Public TV
Share
2 Min Read
TEAM INDIA 2 2
SHARE

ದುಬೈ: ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ನಮೀಬಿಯಾ ತಂಡವನ್ನು 9 ವಿಕೆಟ್ ಅಂತರದಲ್ಲಿ ಮಣಿಸಿ ಜಯದೊಂದಿಗೆ ಟಿ20 ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತು.

TEAM INDIA 1 2

ನಮೀಬಿಯಾ ನೀಡಿದ್ದ 133 ರನ್‍ಗಳ ಟಾರ್ಗೆಟ್ ಬೆನ್ನು ಹತ್ತಿದ್ದ ಭಾರತ 15.2 ಓವರ್‍ ಗಳ ಅಂತ್ಯಕ್ಕೆ 136 ರನ್ ಸಿಡಿಸಿ ಗೆದ್ದು, ನಾಯಕನಾಗಿ ಕೊನೆಯ ಪಂದ್ಯವನ್ನಾಡುತ್ತಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿಗೆ ಗೆಲುವಿನ ಬೀಳ್ಕೊಡುಗೆ ನೀಡಿತು. ಇದನ್ನೂ ಓದಿ: IPL ನೂತನ ತಂಡ ಅಹಮದಾಬಾದ್‍ ಕೋಚ್ ಆಗ್ತಾರಂತೆ ರವಿಶಾಸ್ತ್ರಿ?

TEAM INDIA 3

ಭಾರತ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಆರಂಭಿಕ ಜೋಡಿ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮೊದಲ ವಿಕೆಟ್‍ಗೆ 86 ರನ್ (59 ಎಸೆತ) ಜೊತೆಯಾಟವಾಡಿತು. ರೋಹಿತ್ ಶರ್ಮಾ 56 ರನ್ (37 ಎಸೆತ, 7 ಬೌಂಡರಿ, 2 ಸಿಕ್ಸ್) ಬಾರಿಸಿ ಔಟ್ ಆದರು. ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ 25 ರನ್ (19 ಎಸೆತ, 4 ಬೌಂಡರಿ) ಮತ್ತು ರಾಹುಲ್ 54 ರನ್ (36 ಎಸೆತ, 4 ಬೌಂಡರಿ, 2 ಸಿಕ್ಸ್) ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

TEAM INDIA 3 1

ಈ ಮೊದಲು ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಮೀಬಿಯಾ ತಂಡವನ್ನು ಮೊದಲು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ವಿರಾಟ್ ಕೊಹ್ಲಿ ನಿರ್ಧಾರವನ್ನು ಸಮರ್ಥವಾಗಿ ನಿರ್ವಹಿಸಿದ ಭಾರತ ಬೌಲರ್‍ ಗಳು ಆರಂಭದಿಂದಲೇ ವಿಕೆಟ್ ಬೇಟೆ ಆರಂಭಿಸಿದರು.ಇದನ್ನೂ ಓದಿ: ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

TEAM INDIA 4

ಜಡೇಜಾ, ಅಶ್ವಿನ್ ಕಾಂಬಿನೇಷನ್
ತಮ್ಮ ಹಳೆಯ ದಿನಗಳನ್ನು ನೆನಪಿಸಿದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ನಮೀಬಿಯಾ ಬ್ಯಾಟ್ಸ್‍ಮ್ಯಾನ್‍ಗಳನ್ನು ಪೆವಿಲಿಯನ್ ಪರೇಡ್ ನಡೆಸುವಂತೆ ನೋಡಿಕೊಂಡರು. ನಮೀಬಿಯಾ ಪರ ಡೇವಿಡ್ ವೈಸ್ 26 ರನ್ (25 ಎಸೆತ, 2 ಬೌಂಡರಿ), ಸ್ಟೀಫನ್ ಬಾರ್ಡ್ 21 ರನ್ (21 ಎಸೆತ, 1 ಬೌಂಡರಿ, 1 ಸಿಕ್ಸ್) ಮತ್ತು ಜಾನ್ ಫ್ರೈಲಿಂಗ್ 15 ರನ್ (15 ಎಸೆತ) ಈ ಮೂವರನ್ನು ಹೊರತು ಪಡಿಸಿ ಉಳಿದ ಯಾವೊಬ್ಬ ಬ್ಯಾಟ್ಸ್‍ಮ್ಯಾನ್ ಕೂಡ ರನ್ ಗಳಿಸಲು ಮುಂದಾಗಲಿಲ್ಲ. ಅಶ್ವಿನ್ ಮತ್ತು ಜಡೇಜಾ ನಾಮುಂದು- ತಾಮುಂದು  ಎಂಬಂತೆ ತಲಾ 3 ವಿಕೆಟ್ ಕಿತ್ತು ಕುಸಿತಕ್ಕೆ ಕಾರಣರಾದರು. ಅಂತಿಮವಾಗಿ ನಮೀಬಿಯಾ 20 ಓವರ್‍ ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿತು.

TEAM INDIA 5

ಭಾರತ ಪರ ಅಶ್ವಿನ್ ಮತ್ತು ಜಡೇಜಾ ತಲಾ 3 ವಿಕೆಟ್ ಕಿತ್ತು ಮಿಂಚಿದರೆ, ಬುಮ್ರಾ 2 ವಿಕೆಟ್ ಪಡೆದರು. ಇದನ್ನೂ ಓದಿ: ಪಂದ್ಯಕ್ಕೂ ಮೊದಲು ಅಬುಧಾಬಿ ಪಿಚ್‌ ಕ್ಯೂರೇಟರ್‌ ನಿಗೂಢ ಸಾವು

TAGGED:cricketindiaNamibiaPublic TVTeam indiaಕ್ರಿಕೆಟ್ಟಿ20 ವಿಶ್ವಕಪ್ನಮೀಬಿಯಾಪಬ್ಲಿಕ್ ಟಿವಿಭಾರತ
Share This Article
Facebook Whatsapp Whatsapp Telegram

You Might Also Like

DK Shivakumar 4
Districts

ಸರೋಜಾದೇವಿ ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು: ಡಿಕೆಶಿ

Public TV
By Public TV
24 minutes ago
Basava Jaya Mruthyunjaya Swamiji
Bagalkot

ನೀವೆಲ್ಲ ಮಠಕ್ಕೆ ಹೋಗೋಣ ಅಂದ್ರೆ ಬರುತ್ತೇನೆ, ಇಲ್ದಿದ್ರೆ ಭಕ್ತರ ಮನೆಯಲ್ಲೇ ಇರುತ್ತೇನೆ: ಭಾವುಕರಾದ ಜಯ ಮೃತ್ಯುಂಜಯ ಶ್ರೀ‌

Public TV
By Public TV
28 minutes ago
DK Shivakumar
Bengaluru City

ಮಂಗಳೂರು, ಉಡುಪಿಯಲ್ಲಿ ಬಿಜೆಪಿ‌ ಅವರೇ ಗ್ಯಾರಂಟಿಗೆ ಕ್ಯೂ‌ ನಿಂತಿದ್ರು: ಡಿಕೆಶಿ ಟಾಂಗ್‌

Public TV
By Public TV
41 minutes ago
D K Shivakumar 2
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ.ಕೆ.ಶಿವಕುಮಾರ್

Public TV
By Public TV
44 minutes ago
sharana prakash patil
Bengaluru City

ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – ಶರಣ ಪ್ರಕಾಶ ಪಾಟೀಲ್

Public TV
By Public TV
52 minutes ago
Shubhanshu Shukla PM Modi
Latest

ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?