ಭೋಪಾಲ್: T20 ವಿಶ್ವಕಪ್ ಪಂದ್ಯದ ನಂತರ ಪಾಕ್ ಪರ ಹೇಳಿಕೆಗಾಗಿ ದೇಶದ್ರೋಹದ ಆರೋಪದ ಮೇಲೆ ಮಧ್ಯಪ್ರದೇಶದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮೊಹಮ್ಮದ್ ಫಾರೂಕ್(23) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಪಾಕ್‍ಪರ ಘೋಷಣೆ ಕೂಗಿದ ಆರೋಪದ ಮೇಲೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ಅಬ್ಬರ, ವಿಶ್ವಕಪ್‍ನಲ್ಲಿ ಠುಸ್ ಪಠಾಕಿ – ಭಾರತಕ್ಕೆ ಹೀನಾಯ ಸೋಲು
Advertisement
Advertisement
ಇತ್ತೀಚೆಗೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಕ್ರಿಕೆಟ್‍ನಲ್ಲಿ, ಪಾಕ್ ಗೆದ್ದ ಬಳಿಕ ಯುವಕ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ. ಸತ್ನಾ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಜಿಲ್ಲಾ ಕಾರ್ಯದರ್ಶಿ ಅನುರಾಗ್ ಮಿಶ್ರಾ ಮತ್ತು ಇತರರು ನೀಡಿದ ದೂರಿನ ಮೇರೆಗೆ ಮೈಹಾರ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ ಸೋತಿದ್ದು ಎಲ್ಲಿ? ಕಳಪೆ ಪ್ರದರ್ಶನಕ್ಕೆ ಕಾರಣ ಏನು?
Advertisement
Advertisement
ಮೊಹಮ್ಮದ್ ಫಾರೂಕ್ ಭಾರತೀಯ ದಂಡ ಸಂಹಿತೆ 124-ಎ (ದೇಶದ್ರೋಹ), 153-ಬಿ, 504 ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿಸಿದ ನಂತರ, ಫಾರೂಕ್‍ನನ್ನು ಸೋಮವಾರ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ.