ಬೆಂಗಳೂರು: ಟಿ20 ವಿಶ್ವಕಪ್‍ನಲ್ಲಿ ಬದ್ಧವೈರಿ ಪಾಕಿಸ್ತಾನ ವಿರುದ್ಧ ಹೀನಾಯವಾಗಿ ಭಾರತ ತಂಡ ಸೋತ ಬೆನ್ನಲ್ಲೇ ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.
Advertisement
ನಿನ್ನೆ ನಡೆದ ಭಾರತ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ 10 ವಿಕೆಟ್‍ಗಳ ಸೋಲು ಕಂಡಿತು. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾರತದ ಬೌಲಿಂಗ್ ಬಗ್ಗೆ ನೆಟ್ಟಿಗರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮೊಹಮ್ಮದ್ ಶಮಿ ವಿರುದ್ಧ ಗಂಭೀರವಾದ ಆರೋಪಗಳೊಂದಿಗೆ ಶಮಿ ತಮ್ಮ ಪಂಗಡದ ಆಟಗಾರರಿದ್ದ ಪಾಕಿಸ್ತಾನ ತಂಡದ ಪರ ನೆರವಾಗಿದ್ದಾರೆ. ಅವರೊಬ್ಬ ಭಾರತ ತಂಡದಲ್ಲಿರುವ ಪಾಕಿಸ್ತಾನಿ ಪ್ರೇಮಿ ಎಂಬ ಹಲವು ನಿಂದನಾತ್ಮಕ ಕಾಮೆಂಟ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಪಾಕಿಸ್ತಾನಕ್ಕೆ 10 ವಿಕೆಟ್ ಜಯ
Advertisement
Advertisement
ಕೆಲ ಕ್ರಿಕೆಟ್ ಪ್ರೇಮಿಗಳು ಟೀಕೆ ವ್ಯಕ್ತಪಡಿಸಿದರೆ. ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಶಮಿ ಪರ ನಿಂತು ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಶಮಿ 3.5 ಓವರ್ ಬೌಲಿಂಗ್ ಮಾಡಿ ಯಾವುದೇ ವಿಕೆಟ್ ಪಡೆಯದೆ 43 ರನ್ ಬಿಟ್ಟು ಕೊಟ್ಟು ದುಬಾರಿಯಾಗಿದ್ದರು. ಇದರಿಂದಾಗಿ ಶಮಿ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಕುಸಿದು ಬಿದ್ದ ಕೊಡಗಿನ ಕ್ರಿಕೆಟ್ ಅಭಿಮಾನಿ – ಹೃದಯಾಘಾತದಿಂದ ಸಾವು
Advertisement
https://twitter.com/vaikivannavan/status/1452329026027151362
ಶಮಿ ಪರ ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕುವ ಮೂಲಕ ಬೆಂಬಲ ಸೂಚಿಸಿದ್ದು, ಈರೀತಿ ಒಬ್ಬ ಆಟಗಾರನ ಬಗ್ಗೆ ಮಾತನಾಡುವುದು ತಪ್ಪು. ಶಮಿ ಒಬ್ಬರು ಚಾಂಪಿಯನ್ ಬೌಲರ್. ಯಾವುದೇ ಆಟಗಾರ ಭಾರತ ತಂಡದ ಪರ ಆಡಲು ಆರಂಭಿಸಿದರೆ ಆತ ಭಾರತವನ್ನು ತುಂಬಾ ಪ್ರೀತಿಸುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್ ವಿರುದ್ಧ ಭಾರತ ಸೋತಿದ್ದಕ್ಕೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ!
The online attack on Mohammad Shami is shocking and we stand by him. He is a champion and Anyone who wears the India cap has India in their hearts far more than any online mob. With you Shami. Agle match mein dikado jalwa.
— Virender Sehwag (@virendersehwag) October 25, 2021
ಭಾರತ ತಂಡ ನಿಗದಿತ 20 ಓವರ್‍ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಬಾರಿಸಿ ಪಾಕಿಸ್ತಾನ ತಂಡಕ್ಕೆ 152ರನ್‍ಗಳ ಟಾರ್ಗೆಟ್ ನೀಡಿತ್ತು. ಪಾಕಿಸ್ತಾನ 17.5 ಓವರ್ ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 10 ವಿಕೆಟ್‍ಗಳ ಭರ್ಜರಿ ಜಯ ದಾಖಲಿಸಿತು. ಇದನ್ನೂ ಓದಿ: ಟಿ20 ವಿಶ್ವಕಪ್ – ಟ್ರೆಂಡಿಂಗ್ ಆದ ಜಯ್ ಶಾ