CricketLatestLeading NewsMain PostSports

ಸೆಮಿಫೈನಲ್‍ಗೇರಿದ ನಾಲ್ಕು ತಂಡಗಳು – ಯಾರಿಗೆ ಯಾರು ಎದುರಾಳಿ, ಯಾವಾಗ ಪಂದ್ಯ?

ಸಿಡ್ನಿ: ಟಿ20 ವಿಶ್ವಕಪ್ (T20 World Cup) ಪಂದ್ಯದ ಕೊನೆಯ 3 ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಈಗಾಗಲೇ 4 ತಂಡಗಳು ಸೆಮಿಫೈನಲ್‍ಗೆ (Semi Final) ಲಗ್ಗೆ ಇಟ್ಟಿವೆ.

ಗ್ರೂಪ್ 1ರಲ್ಲಿ ನ್ಯೂಜಿಲೆಂಡ್ (New Zealand) ಮತ್ತು ಇಂಗ್ಲೆಂಡ್ (England) ಪ್ರವೇಶ ಪಡೆದರೆ, ಗ್ರೂಪ್ 2ರಲ್ಲಿ ಭಾರತ (India) ಹಾಗೂ ಪಾಕಿಸ್ತಾನ (Pakistan) ತಂಡಗಳು ಪ್ರವೇಶ ಪಡೆದಿದೆ. ಸಿಡ್ನಿ, ಆಡಿಲೇಡ್ ಮತ್ತು ಮೆಲ್ಬರ್ನ್‍ನಲ್ಲಿ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಚೋಕರ್ಸ್ ಹಣೆಪಟ್ಟಿಯೊಂದಿಗೆ ಆಫ್ರಿಕಾ ಮನೆಗೆ – ಪಾಕ್‌ಗೆ ಖುಲಾಯಿಸಿದ ಅದೃಷ್ಟ

ಮೊದಲ ಸೆಮಿಫೈನಲ್‍ನಲ್ಲಿ ಗ್ರೂಪ್ 1ರ ಮೊದಲ ಸ್ಥಾನ ಪಡೆದ ನ್ಯೂಜಿಲೆಂಡ್, ಗ್ರೂಪ್ 2ರ ಎರಡನೇ ಸ್ಥಾನ ಪಡೆದ ಪಾಕಿಸ್ತಾನವನ್ನು ಸಿಡ್ನಿಯಲ್ಲಿ ನ.9 ರಂದು ಎದುರಿಸಲಿದೆ. ಎರಡನೇ ಸೆಮಿಫೈನಲ್‍ನಲ್ಲಿ ಗ್ರೂಪ್ 2ರ ಮೊದಲ ಸ್ಥಾನ ಪಡೆದ ಭಾರತ, ಗ್ರೂಪ್ 1ರ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್ ತಂಡವನ್ನು ಆಡಿಲೇಡ್‍ನಲ್ಲಿ ನ.10 ರಂದು ಎದುರಿಸಲಿದೆ. ಇಲ್ಲಿ ಗೆದ್ದ ಎರಡು ತಂಡಗಳು ಫೈನಲ್ ಪಂದ್ಯವಾಡಲಿದೆ. ಇದನ್ನೂ ಓದಿ: ಭಾರತಕ್ಕೆ 71 ರನ್‍ಗಳ ಭರ್ಜರಿ ಜಯ – ಸೆಮಿಯಲ್ಲಿ ಇಂಗ್ಲೆಂಡ್ ಎದುರಾಳಿ

ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದರೆ, ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಫೈನಲ್ ಪಂದ್ಯ ಮೆಲ್ಬರ್ನ್‍ನಲ್ಲಿ ನ.13 ರಂದು ನಡೆಯಲಿದೆ. ಮಳೆಯಿಂದ ರದ್ದಾದರೆ ಫೈನಲ್ ಪಂದ್ಯಕ್ಕೂ ಮೀಸಲು ದಿನವನ್ನು ಕಲ್ಪಿಸಲಾಗಿದೆ. ಇದನ್ನೂ ಓದಿ: ಒಂದೇ ವರ್ಷದಲ್ಲಿ ಟಿ20ಯಲ್ಲಿ ಗರಿಷ್ಠ ರನ್‌ – ಭಾರತದ ಪರ ದಾಖಲೆ ಬರೆದ ಸೂರ್ಯ

Live Tv

Leave a Reply

Your email address will not be published. Required fields are marked *

Back to top button