ವಾಷಿಂಗ್ಟನ್: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) (Tabla maestro Zakir Hussain) ಅವರು ತೀವ್ರ ಹೃದಯ (Heart) ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುವಿನಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.
ಖ್ಯಾತ ತಬಲ ವಾದಕ ಜಾಕೀರ್ ಹುಸೇನ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ.
Advertisement
Advertisement
ಅವರು ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾವೆಲ್ಲರೂ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಚೌರಾಸಿಯಾ ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ.