Wednesday, 23rd October 2019

12 months ago

ಕೇಂದ್ರ ಸಚಿವ ಅನಂತ ಕುಮಾರ್ ನಿಧನ

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ನಾಳೆ  ಬೆಳಗ್ಗೆ  ನ್ಯಾಷನಲ್ ಕಾಲೇಜು […]

1 year ago

ಎಡಬಿಡಂಗಿ ಸರ್ಕಾರ ಬೀಳುತ್ತೆ, ಜನಾದೇಶ ಪಡೆದ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಅನಂತ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವು ಶುದ್ಧ ಎಡಬಿಡಂಗಿ ಸರ್ಕಾರವಾಗಿದ್ದು, ಇನ್ನೂ ಸ್ವಲ್ಪ ದಿನಗಳಲ್ಲೇ ಅಧಿಕಾರಕಳೆದುಕೊಂಡು ಜನಾದೇಶ ಪಡೆದಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ತಿಳಿಸಿದ್ದಾರೆ. ನಗರದ ಬಸವನಗುಡಿಯ ನಿವಾಸದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ...

24 ಗಂಟೆ ಗಡುವು ನೀಡ್ತೀನಿ, ದಾಖಲೆ ರಿಲೀಸ್ ಮಾಡಿ: ಸಿಎಂಗೆ ಅನಂತ್ ಕುಮಾರ್ ಸವಾಲ್

1 year ago

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಅವರು ಮುಖ್ಯಮುಂತ್ರಿ ಸಿದ್ದರಾಮಯ್ಯಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿಮಾನ ಪ್ರಯಾಣದ ದಾಖಲೆ ಬಿಡುಗಡೆ ಮಾಡುವಂತೆ 24...

ಕೇಂದ್ರ ಸಚಿವ ಅನಂತ್ ಕುಮಾರ್ ಮೈಸೂರು ಪ್ರವಾಸ ದಿಢೀರ್ ರದ್ದು

1 year ago

ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್‍ಕುಮಾರ್ ಮೈಸೂರು ಪ್ರವಾಸ ದಿಢೀರ್ ರದ್ದಾಗಿದೆ. ಶನಿವಾರ ಮೈಸೂರಿನ ವರುಣಾ, ಕೃಷ್ಣರಾಜ, ಚಾಮರಾಜ ಕ್ಷೇತ್ರಗಳಿಗೆ ಭೇಟಿ ನೀಡಿ ಅನಂತ್‍ಕುಮಾರ್ ಪ್ರಚಾರ ನಡೆಸಬೇಕಿತ್ತು. ಅಷ್ಟೇ ಅಲ್ಲದೇ ಮಧ್ಯಾಹ್ನ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು....

ವುಮೆನ್ಸ್ ಡೇ ಗೆ ಮಹಿಳೆಯರಿಗೆ ಗುಡ್‍ನ್ಯೂಸ್- ಇಂದಿನಿಂದ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತೆ ಸ್ಯಾನಿಟರಿ ಪ್ಯಾಡ್

2 years ago

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಮಹಿಳೆಯರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಮಹಿಳೆಯರಿಗೆ ಗಿಫ್ಟ್ ನೀಡಿದೆ. ಅತ್ಯಂತ ಕಡಿಮೆ ಬೆಲೆಯ ಸ್ಯಾನಿಟರಿ ಪ್ಯಾಡ್‍ಗಳನ್ನ ಇಂದು ಸರ್ಕಾರ ಬಿಡುಗಡೆ ಮಾಡಿದೆ. ಸುವಿಧ ಹೆಸರಿನ, ಮಣ್ಣಿನಲ್ಲಿ ಕರಗುವ ಪರಿಸರ ಸ್ನೇಹಿ...

‘ಈ ಏರಿಯಾದಲ್ಲಿ ವಾಸ ಮಾಡೋಕೆ ಆಗ್ತಿಲ್ಲ, ಮಕ್ಕಳು ಶಾಲೆ, ಟ್ಯೂಷನ್‍ಗೆ ಹೋಗೋಕೆ ಆಗ್ತಿಲ್ಲ’

2 years ago

ಬೆಂಗಳೂರು: ಸಂಜೆ ಆರು ಗಂಟೆ ಆದ್ರೆ ಸಾಕು ಮಹಿಳೆಯರು, ಮಕ್ಕಳು ಏರಿಯಾದಲ್ಲಿ ಓಡಾಡೋಕೆ ಆಗುತ್ತಿಲ್ಲ ಎಂದು ಶಿವಾಜಿನಗರದ ಚಿನ್ನಪ್ಪ ಗಾರ್ಡನ್‍ನಲ್ಲಿರುವ ಮಹಿಳೆಯರು ಕೇಂದ್ರ ಸಚಿವ ಅನಂತ್‍ಕುಮಾರ್ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇಂದು ಇತ್ತೀಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಮನೆಗೆ...

ಕೊನೆಗೂ ಲೋಕಸಭೆಯಲ್ಲಿ ಸ್ವಲ್ಪ ಚರ್ಚೆ ಆಯ್ತು ಮಹದಾಯಿ! ವಿಡಿಯೋ ನೋಡಿ

2 years ago

ನವದೆಹಲಿ: ಅಂತು ಇಂತು ಕೊನೆಗೂ ನಮ್ಮ ಸಂಸದರು ಲೋಕಸಭೆಯಲ್ಲಿ ಮಹದಾಯಿ ವಿಚಾರವನ್ನು ಸ್ವಲ್ಪ ಚರ್ಚೆ ಮಾಡಿದ್ದಾರೆ. ಮಹದಾಯಿ ವಿವಾದ ಬಗೆಹರಿಸುವಲ್ಲಿ ಇನ್ನಾದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ವಿವಾದ ಇತ್ಯರ್ಥಗೊಳಿಸಬೇಕು ಎಂದು ತುಮಕೂರು ಸಂಸದ ಮುದ್ದಹನುಮೇಗೌಡ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ವಿಷಯ...

ಜ್ಞಾನ ಪುಸ್ತಕಕ್ಕೆ ಸಿಮೀತವಾಗದೆ ಸಮಾಜಕ್ಕೆ ಕೊಡುಗೆ ನೀಡಬೇಕು: ರಾಮನಾಥ್ ಕೋವಿಂದ್

2 years ago

ರಾಮನಗರ: ಬಿಡದಿ ಸಮೀಪದ ಅಮೃತ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಸೈನ್ಸ್ ಕಾಲೇಜಿನ ನೂತನ ಕ್ಯಾಂಪಸ್ ಕಟ್ಟಡ ಹಾಗೂ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111 ನೇ ವಾರ್ಷಿಕೋತ್ಸವ ಕಾರ್ಯಕ್ರಮವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಿದರು. ಬಿಡದಿಯ ತಿಮ್ಮೇಗೌಡನದೊಡ್ಡಿ ಬಳಿಯಿರುವ...