Wednesday, 18th September 2019

Recent News

1 month ago

ಜನಪ್ರಿಯ ಯೋಜನೆಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ: ಬಿಎಸ್‍ವೈ

ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿದ್ದ ಯೋಜನೆಗಳಿಗೆ ಬಿ.ಎಸ್.ಯಡಿಯೂರಪ್ಪ ಬ್ರೇಕ್ ಹಾಕಲಿದ್ದಾರೆ. ಈ ಮೂಲಕ ಅನೇಕ ಯೋಜನೆಗಳು ರದ್ದು ಆಗಲಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿತ್ತು. ಇದನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿಗಳು ಜನಪರ ಯೋಜನೆಗಳನ್ನು ಮುಂದುವರಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. […]

1 month ago

ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿದರೆ ಸುಮ್ಮನಿರಲ್ಲ- ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಕಡಿತಗೊಳಿಸಿ ಆ ಹಣವನ್ನು ಕೃಷಿ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಬಂದಿದ್ದು, ಸರ್ಕಾರ ಇಂತಹ ನಿರ್ಧಾರ ಕೈಗೊಂಡಲ್ಲಿ ಸದನದ ಹೊರಗೆ ಹಾಗೂ ಒಳಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬಡತನ ರೇಖೆಗಿಂತ ಕೆಳಗಿದ್ದ 4...

ಸಂತ್ರಸ್ತ ಯುವತಿಯರ ಮದ್ವೆಗೆ ತಲಾ 50 ಸಾವಿರ ರೂ. ನೀಡಿದ ಸಚಿವ ಜಮೀರ್ ಅಹ್ಮದ್

1 year ago

ಮಡಿಕೇರಿ: ವಿಶೇಷ ಅನ್ನಭಾಗ್ಯ ಯೋಜನೆಯಡಿ ಕೊಡಗು ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ. ಮೌಲ್ಯದ ಆಹಾರ ಕಿಟ್ ನೀಡಿದ ಬೆನ್ನಲ್ಲೆ ಸಂತ್ರಸ್ತರ ಪೈಕಿ ವಿವಾಹ ನಿಶ್ಚಯವಾಗಿದ್ದ ಇಬ್ಬರು ಯುವತಿಯರಿಗೆ ತಲಾ 50 ಸಾವಿರ ರೂ.ವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ...

ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ.ಮೌಲ್ಯದ ಕಿಟ್ ವಿತರಿಸಿದ್ರು ಸಚಿವ ಜಮೀರ್

1 year ago

ಕೊಡಗು: ವಿಶೇಷ ಅನ್ನಭಾಗ್ಯ ಯೋಜನೆಯಡಿ ಕೊಡಗು ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ. ಮೌಲ್ಯದ ಆಹಾರ ಕಿಟ್ಟನ್ನು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಇಂದು ವಿತರಣೆ ಮಾಡಿದ್ದಾರೆ. ಮಡಿಕೇರಿ ಆರ್‌ಎಂಸಿ ಯಾರ್ಡ್‍ನಲ್ಲಿ 150 ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ...

ಅನ್ನಭಾಗ್ಯ ಗುದ್ದಾಟದ ಮಧ್ಯೆಯೇ ಒಂದಾಗಿ ಶೋ ರೂಮ್ ಉದ್ಘಾಟಿಸಿದ ಎಚ್‍ಡಿಕೆ-ಜಮೀರ್

1 year ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಆಹಾರ ಹಾಗೂ ನಾಗರೀಕ ಸಚಿವ ಜಮೀರ್ ಅಹ್ಮದ್ ಕಳೆದ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಇಂದು ಇಬ್ಬರು ಒಂದಾಗಿಯೇ ಶೋ ರೂಮ್ ಒಂದನ್ನು ಉದ್ಘಾಟನೆ ಮಾಡಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿ ನಿಸಾರ್ ಮೆಟಲ್ಸ್‍ನ ಹೊಸ...

ಅನ್ನಭಾಗ್ಯ ಯೋಜನೆ: ದೋಸ್ತಿಗೆ ತಿರುಗೇಟು ಕೊಟ್ಟ ಸಿಎಂ ಕುಮಾರಸ್ವಾಮಿ

1 year ago

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿ 7 ಕೆಜಿ ನೀಡಲಾಗುತ್ತದೆ ಎಂದಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಜಮೀರ್ ಅಹ್ಮದ್ ಹೇಳಿಕೆಗೂ...

ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ ವಿಚಾರದಲ್ಲಿ ದೋಸ್ತಿಗಳ ನಡುವೆಯೇ ಭಿನ್ನಾಭಿಪ್ರಾಯ!

1 year ago

ಬೆಂಗಳೂರು: ಅನ್ನಭಾಗ್ಯ ಯೋಜನೆಯ 2 ಕೆಜಿ ಅಕ್ಕಿ ಕಡಿತ ವಿಚಾರದ ಬಗ್ಗೆ ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಬಹಿರಂಗವಾಗಿದೆ. ಬಜೆಟ್‍ನಲ್ಲಿ ಕುಮಾರಸ್ವಾಮಿ ಅವರು ಅನ್ನಭಾಗ್ಯ ಯೋಜನೆಯ...

ಅನ್ನಭಾಗ್ಯ ಜಾಹೀರಾತಿನ ಅನ್ನದಾತನೊಂದಿಗೆ ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯ ವರ್ತನೆ

1 year ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅನ್ನದಾತನನ್ನು ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಪಶುವಿನಂತೆ ನೋಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂ.ಸಿ.ರಾಜು ಆಸ್ಪತ್ರೆ ಸಿಬ್ಬಂದಿಯಿಂದ ಅವಮಾನಕ್ಕೊಳದ ರೈತ. ಇವರು ಮೂಲತಃ ಬೆಂಗಳೂರು ಗ್ರಾಮಂತರ ಜಿಲ್ಲೆಯ ಮಾರಹಳ್ಳಿ ನಿವಾಸಿಯಾಗಿದ್ದಾರೆ. ಇವರು...