Saturday, 23rd March 2019

2 days ago

ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಿಯಾಂಕ ವಾದ್ರಾ ಅವಮಾನ – ವಿಡಿಯೋ ಹರಿಬಿಟ್ಟ ಸ್ಮೃತಿ ಇರಾನಿ

ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಿಯಾಂಕ ಗಾಂಧಿ ವಾದ್ರಾ ತಮ್ಮ ಕೊರಳಿನಲ್ಲಿದ್ದ ಹಾರವನ್ನು ತೆಗೆದು ಶಾಸ್ತ್ರಿ ಅವರ ಪುತ್ಥಳಿಗೆ ಹಾಕಿದ್ದಾರೆ. ಈ ವಿಡಿಯೋವನ್ನೇ ಸ್ಮೃತಿ ಇರಾನಿ ಟ್ವೀಟ್ ಮಾಡಿ ಆರೋಪ ಮಾಡಿದ್ದಾರೆ. मुंडी झुकाइएके सर झटकाइएकेगुमान में […]

2 days ago

ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ನಾನು ಪ್ರಧಾನಿ ಅಭ್ಯರ್ಥಿ: ಮಾಯಾವತಿ

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ನಿನ್ನೆಯಷ್ಟೇ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದರು. ಆದರೆ ಈಗ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ನಾನು ಪ್ರಧಾನಿ ಅಭ್ಯರ್ಥಿ ಎಂದು ತಿಳಿಸಿದ್ದಾರೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ತಾವು ಪ್ರಧಾನಿಯಾಗುವ ಬಗ್ಗೆ ಟ್ವೀಟ್‍ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ 1995ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಸಿಎಂ...

ಬಿಜೆಪಿ ಸೋಲಿಸಲು ಕಾಂಗ್ರೆಸ್ ಅವಶ್ಯಕತೆ ನಮಗಿಲ್ಲ: ಮಾಯಾವತಿ

5 days ago

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಸ್‍ಪಿ-ಬಿಎಸ್‍ಪಿ ಮೈತ್ರಿ ಸಾಕು. ದೇಶದಲ್ಲಿ ಕಾಂಗ್ರೆಸ್ ಮೈತ್ರಿಯ ಅವಶ್ಯಕತೆ ನಮಗಿಲ್ಲ ಎಂದು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸ್ಪಷ್ಟ ಸಂದೇಶವನ್ನು ಕೈ ನಾಯಕರಿಗೆ ರವಾನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 7 ಕ್ಷೇತ್ರಗಳನ್ನು ಹೊರತುಪಡಿಸಿ ಎಲ್ಲ ಕಡೆಯೂ ಸ್ಪರ್ಧೆ...

24 ವರ್ಷಗಳ ಬಳಿಕ ಬದ್ಧವೈರಿ ಮುಲಾಯಂ ಪರ ಮಾಯಾವತಿ ಪ್ರಚಾರ

7 days ago

ಲಕ್ನೋ: ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ತಮ್ಮ ರಾಜಕೀಯ ಬದ್ಧವೈರಿಯಾಗಿದ್ದ ಸಮಾಜವಾದಿ ಪಾರ್ಟಿ (ಎಸ್‍ಪಿ) ಸಂಸ್ಥಾಪಕ, ಸಮಾಜವಾದಿ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಪರ 24 ವರ್ಷಗಳ ಬಳಿಕ ಪ್ರಚಾರ ಮಾಡಲಿದ್ದಾರೆ. ಹೌದು. ಉತ್ತರ ಪ್ರದೇಶದಲ್ಲಿ...

ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿಯಿಲ್ಲ: ಮಾಯಾವತಿ

2 weeks ago

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ರಾಜ್ಯದಿಂದಲೂ ನಾವು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸಲು...

ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನ ಜೀವ ಉಳಿಸಿದ ಟ್ಯಾಕ್ಸಿ ಡ್ರೈವರ್

2 weeks ago

ಆಗ್ರಾ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಕಾಲುಜಾರಿ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ಟ್ಯಾಕ್ಸಿ ಚಾಲಕರೊಬ್ಬರು ಕಾಪಾಡಿ ಜೀವ ಉಳಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆ ಹೊತ್ತಿಗೆ ಈ ಘಟನೆ...

ಕಾಶ್ಮೀರಿ ವ್ಯಾಪಾರಿಗಳಿಗೆ ಮನಬಂದಂತೆ ಥಳಿಸಿದ ಸಾಮಾಜಿಕ ಕಾರ್ಯಕರ್ತರು – ವಿಡಿಯೋ

2 weeks ago

ಲಕ್ನೋ: ಕಾಶ್ಮೀರ ಮೂಲದ ಇಬ್ಬರು ವ್ಯಾಪಾರಿಗಳಿಗೆ ಕೆಲ ಸಾಮಾಜಿಕ ಕಾರ್ಯಕರ್ತರು ನಡುರಸ್ತೆಯಲ್ಲೇ ಥಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಬುಧವಾರ ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಲಕ್ನೋನ ಡಾಲಿಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯವನ್ನು...

ಚಪ್ಪಲಿಯಲ್ಲಿ ಬಡಿದಾಡಿದ ಬಿಜೆಪಿಯ ಸಂಸದ ಮತ್ತು ಶಾಸಕ – ವಿಡಿಯೋ ವೈರಲ್

2 weeks ago

ಲಕ್ನೋ: ಸಭೆಯಲ್ಲಿ ಉತ್ತರಪ್ರದೇಶದ ಬಿಜೆಪಿ ಸಂಸದ ಮತ್ತು ಶಾಸಕರು ಚಪ್ಪಲಿಯಲ್ಲಿ ಬಡಿದಾಡಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದಲ್ಲಿರುವ ಕಬಿರ್ ನಗರದಲ್ಲಿ ಇಂದು ವಿವಿಧ ಯೋಜನೆ ಸಂಬಂಧ ಸಭೆಯನ್ನು ಆಯೋಜಿಸಿಲಾಗಿತ್ತು. ಈ ಸಭೆಯ ವರದಿಗೆ...