Monday, 17th June 2019

4 weeks ago

ಪೊಲೀಸ್ ವಾಹನದ ಮುಂದೇ ಧರಣಿ ಕುಳಿತ ಉಮೇಶ್ ಜಾಧವ್

– ‘ಕೈ’ ಮುಖಂಡರಿಂದ ಮತದಾರರಿಗೆ ಹಣ ಹಂಚಿಕೆ ಕಲಬುರಗಿ: ಮತದಾರರಿಗೆ ಹಣ ಹಂಚಲು ಬಂದ ಚಿತ್ತಾಪುರ ಕಾಂಗ್ರೆಸ್ ತಾಲೂಕು ಪಂಚಾಯಿತಿ ಸದಸ್ಯ ನಾಮದೇವ್ ರಾಠೋಡನನ್ನು ಪೊಲೀಸರು ವಶಕ್ಕೆ ಪಡೆದು ಬಿಡಲಾಗಿದೆ. ಇನ್ನು ಈ ಸಂದರ್ಭದಲ್ಲಿ ಪೊಲೀಸರ ನಡೆ ಖಂಡಿಸಿ ಮಾಜಿ ಶಾಸಕ ಉಮೇಶ್ ಜಾಧವ್ ಪೊಲೀಸ್ ವಾಹನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ರೌಡಿಗಳನ್ನು ಕ್ಷೇತ್ರದಲ್ಲಿ ಕರೆತಂದು ಹಣ ಹಂಚಿಕೆ ಮಾಡುತ್ತಿದ್ದಾರೆ. ನಮ್ಮ ಮತದಾರರಿಗೆ ಬಿಜೆಪಿಗೆ ಮತ ಹಾಕದಂತೆ ಬೆದರಿಕೆ ಹಾಕಲಾಗುತ್ತಿದೆ. ಹೀಗಿದ್ದರೂ ಪೊಲೀಸರು […]

1 month ago

ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ. ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ ಅಧ್ಯಕ್ಷರೊಬ್ಬರು ನಡೆಸಿದ್ದಾರೆ ಎನ್ನಲಾಗುವ ಆಡಿಯೋ ಸಂಭಾಷಣೆಯಲ್ಲಿ ಈ ಬಾರಿಯ ಉಪಚುನಾವಣೆಯಲ್ಲಿ ಎರಡು ಪಕ್ಷಗಳು...

ಅಕ್ಕ ಬಳೆ ಕಳಿಸಿ ಕೊಟ್ಟರೆ ಬಹಳ ಸಂತೋಷದಿಂದ ಹಾಕಿಕೊಳ್ಳುತ್ತೇವೆ – ಡಿಕೆಶಿ ವ್ಯಂಗ್ಯ

1 month ago

ಹುಬ್ಬಳ್ಳಿ: ಕುಂದಗೋಳ ಉಪಚುನಾವಣಾ ಮತದಾನಕ್ಕೆ ಮೂರು ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಕ್ಷೇತ್ರದಲ್ಲಿ ರಾಜಕೀಯ ನಾಯಕರ ವಾಗ್ದಾಳಿ ಹೆಚ್ಚಾಗುತ್ತಿದೆ. ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರ ಬಳೆ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಡಿಕೆ ಶಿವಕುಮಾರ್ ಅವರು, ಶೋಭಕ್ಕ ಅವರು ಬಳೆ...

ಈ ಚುನಾವಣೆ ನನ್ನ ಜೀವನದ ಅತಿ ಮುಖ್ಯ ಘಟ್ಟ – ಸುಭಾಷ್ ರಾಥೋಡ್

1 month ago

ಕಲಬುರಗಿ: ಈ ಚುನಾವಣೆ ನನ್ನ ಜೀವನದ ಅತಿ ಮುಖ್ಯ ಘಟ್ಟ ಎಂದು ಚಿಂಚೋಳಿ ಉಪಚುನಾವಣೆಯ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಅವರು ಹೇಳಿದ್ದಾರೆ. ಚಿಂಚೋಳಿಯ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ಉಮೇಶ್ ಜಾಧವ್ ಅವರಿಗೆ ಗರ್ವ...

ಹೆಚ್ಚಾದ ದೋಸ್ತಿ ‘ದಂಗಲ್’ – ಕುಮಾರಸ್ವಾಮಿಯಿಂದ ದಿಢೀರ್ ಎಚ್‍ಡಿಡಿ ಭೇಟಿ

1 month ago

ಬೆಂಗಳೂರು: ರಾಜ್ಯ ದೋಸ್ತಿ ಸರ್ಕಾರದ ನಾಯಕರ ನಡುವೇ ಮಾತಿನ ಸಮರಕ್ಕೆ ಕಾರಣವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರ ಹೇಳಿಕೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಇಂದು ಬೆಂಗಳೂರಿಗೆ ಆಗಮಿಸಿ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ನಗರದ...

ಕಾಂಗ್ರೆಸ್‍ಗೆ 40 ಸೀಟ್ ಬಂದ್ರೆ ಮೋದಿ ನೇಣು ಹಾಕಿಕೊಳ್ಳುತ್ತಾನಾ: ಮಲ್ಲಿಕಾರ್ಜುನ ಖರ್ಗೆ ಕಿಡಿ

1 month ago

ಕಲಬುರಗಿ: ಚಿಂಚೋಳಿ ಉಪಚುನಾವಣಾ ಕದನದ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ 40 ಸ್ಥಾನವನ್ನು ಗೆಲ್ಲುವುದಿಲ್ಲ ಎಂಬ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪ್ರಚಾರ...

ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

1 month ago

ಹುಬ್ಬಳ್ಳಿ: ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲೇ ಇರುತ್ತೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಕುಂದಗೋಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ...

ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!

1 month ago

ಹುಬ್ಬಳ್ಳಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿಗೆ ಆಗಮಿಸುವಂತೆ ಕರೆ ಬಂದಿದ್ದು, ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಮೊಟಕುಗೊಳಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕುಂದಗೋಳ ಉಪಚುನಾವಣೆ ಜವಾಬ್ದಾರಿಯನ್ನ ವಹಿಸಿಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಡಿಕೆ ಶಿವಕುಮಾರ್ ಅವರು, ದೂರವಾಣಿ...