Friday, 15th November 2019

10 months ago

ಮಣಿಕರ್ಣಿಕಾ ವಿರುದ್ಧ ಪ್ರತಿಭಟನೆಗಿಳಿದ ಕರ್ಣಿ ಸೇನಾ!

ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅಭಿನಯದ ಐತಿಹಾಸಿಕ ಕಥನಾಕವುಳ್ಳ ‘ಮಣಿಕರ್ಣಿಕಾ’ ಸಿನಿಮಾ ಜನವರಿ 25ರಂದು ಬಿಡುಗಡೆಯಾಗಲು ಸಿದ್ಧಗೊಂಡಿದೆ. ಝಾನ್ಸಿ ರಾಣಿ ಲಕ್ಷ್ಮಿಬಾಯಿ ಅವರ ಕಥೆಯನ್ನು ಸಿನಿಮಾ ಒಳಗೊಂಡಿದೆ. ಸದ್ಯ ಚಿತ್ರದ ಬಿಡುಗಡೆಯನ್ನು ವಿರೋಧಿಸಿ ಕರ್ಣಿ ಸೇನಾ ಪ್ರತಿಭಟನೆಗೆ ಇಳಿದಿದೆ. ಈ ಹಿಂದೆ ಕರ್ಣಿ ಸೇನಾ ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಸಿನಿಮಾ ವಿರೋಧಿಸಿ ದೇಶಾದ್ಯಂತ ದೊಡ್ಡ ಪ್ರತಿಭಟನೆ ನಡೆಸಿತ್ತು. ವಿರೋಧ ಯಾಕೆ? ಚಿತ್ರದಲ್ಲಿ ರಾಣಿ ಲಕ್ಷ್ಮಿಬಾಯಿ ಮತ್ತು ಬ್ರಿಟಿಷ್ ಅಧಿಕಾರಿ ನಡುವೆ ಪ್ರೇಮ ಕಥೆಯನ್ನು ತೋರಿಸಲಾಗಿದೆ. […]

2 years ago

ಪದ್ಮಾವತ್ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆದ ಕರ್ಣಿ ಸೇನಾ

ಮುಂಬೈ: ಪದ್ಮಾವತ್ ಸಿನಿಮಾದ ವಿರುದ್ಧದ ನಮ್ಮ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತಿದೆ ಎಂದು ಶ್ರೀ ರಜಪೂತ ಕರ್ಣಿ ಸೇನಾ ತನ್ನ ನಿರ್ಧಾರವನ್ನು ಶುಕ್ರವಾರ ತಿಳಿಸಿದೆ. ಮುಂಬೈನ ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ನಾಯಕ ಯೋಗೇಂದ್ರ ಸಿಂಗ್ ಖಟರ್ ಈ ಬಗ್ಗ ನಿರ್ಣಯ ತೆಗೆದುಕೊಂಡಿದ್ದಾರೆ. ಯೋಗೇಂದ್ರ ಸಿಂಗ್ ತಮ್ಮ ನಿರ್ಧಾರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಅಧ್ಯಕ್ಷ...