Tuesday, 20th August 2019

2 weeks ago

ಮೂರು ಮೆಟ್ರೋ ರೈಲುಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು: ಕೆಲ ಕಿಡಿಗೇಡಿಗಳು ಮೂರು ಮೆಟ್ರೋ ರೈಲುಗಳು ಮೇಲೆ ಕಲ್ಲು ತೂರಾಟ ಮಾಡಿದ್ದು, ರೈಲಿನ ಗಾಜಿನ ಪರದೆ ಜಖಂಗೊಂಡಿದೆ. ಮಂತ್ರಿ ಸ್ಕ್ವೈರ್ ಮತ್ತು ಶ್ರೀರಾಂಪುರ ನಿಲ್ದಾಣದ ಮಾರ್ಗ ಮಧ್ಯೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಸುರಂಗ ಮಾರ್ಗದಿಂದ ರೈಲು ಹೊರ ಬರುತ್ತಿದ್ದಂತೆ ಕಲ್ಲು ಎಸೆಯಲಾಗಿದೆ. ಕೆಲವರು ಮೆಟ್ರೋ ರೈಲು ಮಾರ್ಗದ ಮಧ್ಯೆ ಕಸದ ಬ್ಯಾಗ್ ಬಿಸಾಡುತ್ತಿದ್ದು, ಅಧಿಕಾರಿಗಳು ರೈಲು ನಿಲ್ಲಿಸಿ ಬ್ಯಾಗ್ ಗಳ ತೆರವು ಮಾಡುತ್ತಿದ್ದಾರೆ. ಕಿಡಿಗೇಡಿಗಳ ಕೃತ್ಯದಿಂದ ಬೇಸತ್ತ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

3 weeks ago

ಎರಡು ಕುಟುಂಬಗಳ ಮಧ್ಯೆ ಕಲ್ಲು ತೂರಾಟ – 15 ಮಂದಿಗೆ ಗಾಯ

ಬಾಗಲಕೋಟೆ: ಎರಡು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಪರಸ್ಪರ ಕಲ್ಲು ತೂರಾಟದ ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಈ ಘಟನೆ ಬಾಗಲಕೋಟೆ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯ ಇರುವ ಕಾರಣದಿಂದ ಎರಡು ಕುಟುಂಬಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಪರಸ್ಪರ ಕಲ್ಲು ತೂರಾಟ ಮಾಡಿಕೊಂಡಿದ್ದಾರೆ. ಘರ್ಷಣೆಯಲ್ಲಿ ಸುಮಾರು...

ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ – ಉಗ್ರ ನಾಯಕರ ಪೋಸ್ಟರ್ ಹಿಡಿದ ಕಿಡಿಗೇಡಿಗಳು

3 months ago

ಶ್ರೀನಗರ: ರಂಜಾನ್ ಹಬ್ಬದಂದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆದಿದ್ದು, ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಬೆಳ್ಳಂಬೆಳಗ್ಗೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭದ್ರತಾ ಪಡೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ...

ಜೂಜುಕೋರರಿಂದ ಪೊಲೀಸರ ಮೇಲೆ ಹಲ್ಲೆ – ಇಬ್ಬರು ಪೇದೆಗಳು ಆಸ್ಪತ್ರೆಗೆ ದಾಖಲು

3 months ago

ಚಿಕ್ಕಬಳ್ಳಾಪುರ: ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆಯೇ ಜೂಜುಕೋರರು ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಂಗರೇಖನಹಳ್ಳಿ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್‍ಐ ಚೇತನ್ ಸಿಬ್ಬಂದಿಯೊಂದಿಗೆ...

ಗುಂಪುಗಳ ನಡ್ವೆ ಗಲಾಟೆ- ಮನೆಗಳ ಮೇಲೆ ಕಲ್ಲು ತೂರಾಟ

4 months ago

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದ್ದು ಈ ವೇಳೆ ಪರಸ್ಪರ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ಸಂಜೆಯಿಂದ...

ಪೊಲೀಸರಿಗೆ ಕಬ್ಬಿಣದ ಕಡಲೆಯಾದ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ

4 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿರುವ ಪ್ರಕರಣ ಪೊಲೀಸರಿಗೆ ಕಬ್ಬಿಣದ ಕಡಲೆಯಾಗಿದೆ. ದರ್ಶನ್ ಮನೆ ಮೇಲೆ ಕಲ್ಲೇಟು ಹೊಡೆದವನು ಖತರ್ನಾಕ್ ಪ್ಲಾನ್ ಮಾಡಿದ್ದಾನೆ. ಮೊಬೈಲ್ ಇದ್ದರೆ ಪೊಲೀಸರು ಪತ್ತೆ ಹಚ್ಚುತ್ತಾರೆ ಎಂದು ಕಿಡಿಗೇಡಿ ಮೊಬೈಲ್...

ದರ್ಶನ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ..!

5 months ago

ಮಂಡ್ಯ: ಕ್ಷೇತ್ರದ ರಾಜಕಾರಣ ರಾಜ್ಯದ ಜನರ ಗಮನ ಸೆಳೆದಿದ್ದು, ಜಿದ್ದಿನ ರಾಜಕಾರಣಕ್ಕೆ ದಾರಿ ಮಾಡಿದೆ. ಇದರ ನಡುವೆಯೇ ಸುಮಲತಾ ಅವರ ಪರ ಪ್ರಚಾರಕ್ಕೆ ತೆರಳಿದ್ದ ನಟ ದರ್ಶನ್ ಅವರ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕ್ಷೇತ್ರದ ನಾಗಮಂಗಲ ತಾಲೂಕಿನ...

ಯಾರದ್ದೋ ಹೆಸ್ರಲ್ಲಿ ಮಂಡ್ಯದಲ್ಲಿ ಬೇಳೆ ಬೇಯಿಸೋಕೆ ಆಗಲ್ಲ: ಪುಟ್ಟರಾಜು ಟಾಂಗ್

5 months ago

ಮಂಡ್ಯ: ಯಾರದ್ದೋ ಹೆಸರನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಬೇಳೆ ಬೇಯಿಸೋಕೆ ಆಗಲ್ಲ ಎಂದು ನಟರಾದ ದರ್ಶನ್ ಹಾಗು ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರುತ್ತಿರುವ ಸುಮಲತಾರಿಗೆ ಸಚಿವ ಪುಟ್ಟರಾಜು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕತ್ತಲೆಯಲ್ಲಿ ನಿಂತು ಅವಿವೇಕಿಗಳು...