Recent News

3 days ago

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಒಂದೇ ಮಳೆಗೆ ಕಾಲುವೆ ಕುಸಿತ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಕಾಲುವೆ ಕುಸಿತವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೊಡ್ಡ ಕಿಟ್ಟದಹಳ್ಳಿ ಬಳಿ ನಡೆದಿದೆ. ಬರದನಾಡು ಚಿತ್ರದುರ್ಗ ಜಿಲ್ಲೆಯ ಕನಸಿನ ಕೂಸು ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಿಂದ ಈಗಾಗಲೇ ಪ್ರಾಯೋಗಿಕವಾಗಿ ವಾಣಿವಿಲಾಸ ಸಾಗರಕ್ಕೆ ಇದೇ ಕಾಲುವೆಯಿಂದ ನೀರು ಹರಿಸಲಾಗಿತ್ತು. ಆದರೆ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಈ ಕಾಲುವೆ ಕುಸಿತಗೊಂಡಿದೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡ ಕಿಟ್ಟದಹಳ್ಳಿ ಬಳಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ […]

4 weeks ago

ಅಧಿಕಾರಿಗಳ ನಿರ್ಲಕ್ಷ್ಯ – ರೈತರ ನೂರಾರು ಎಕರೆ ಬೆಳೆ ನಾಶ

ರಾಯಚೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ...

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಮತ್ತೆ ರಂಧ್ರ- ರೈತರಲ್ಲಿ ಆತಂಕ

2 months ago

ಕೊಪ್ಪಳ: ಕಾರಟಗಿ ತಾಲೂಕಿನ ಸೋಮನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಮತ್ತೆ ರಂಧ್ರ ಕಾಣಿಸಿಕೊಂಡಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ತುಂಗಭದ್ರಾ ಡ್ಯಾಂನಿಂದ ಎಡದಂಡೆ ಕಾಲುವೆಗೆ 3,000 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಕಾಲುವೆ ಪರಿಶೀಲನೆ ಮಾಡದೆ ಪರಿಣಾಮ ಕಳೆದ...

42 ವರ್ಷದಲ್ಲಿ ಕಟ್ಟಿದ ಕಾಲುವೆ 24 ಗಂಟೆಯೊಳಗೇ ಒಡೆದುಹೋಯ್ತು

2 months ago

– 2500 ಕೋಟಿ ರೂ. ಖರ್ಚು ಮಾಡಿ ಕಾಲುವೆ ನಿರ್ಮಾಣ ರಾಂಚಿ: 42 ವರ್ಷ ಸಮಯ ತೆಗೆದುಕೊಂದು ನಿರ್ಮಾಣವಾಗಿದ್ದ ಕಾಲುವೆ ಉದ್ಘಾಟನೆಯಾದ 24 ಗಂಟೆಯೊಳಗೆ ಕೊಚ್ಚಿಕೊಂಡು ಹೋಗಿರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಜಾರ್ಖಂಡ್‍ನ ಗಿರಿದಿಹ್, ಹಝಾರಿಬಾಘ್ ಮತ್ತು ಬಕಾರೋ ಜಿಲ್ಲೆಗಳ 85...

ತುಂಗಭದ್ರಾ ನದಿ ಮೈದುಂಬಿ ಹರಿದರೂ ಕಾಲುವೆಗೆ ನೀರಿಲ್ಲ

2 months ago

ರಾಯಚೂರು: ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಸಿದ ನದಿಗಳಲ್ಲಿ ತುಂಗಭದ್ರಾ ನದಿ ಕೂಡ ಒಂದು. ಆದರೆ ನದಿ ಮೈತುಂಬಿ ಹರಿಯುತ್ತಿದ್ದರೂ ಕಾಲುವೆಗೆ ಮಾತ್ರ ನೀರಿಲ್ಲ. ಜಲಾಶಯದಿಂದ ಟಿಎಲ್‍ಬಿಸಿ ಕೆಳಭಾಗದ ಕಾಲುವೆಗೆ ಸಮರ್ಪಕ ನೀರು ದೊರೆಯುತ್ತಿಲ್ಲ. ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನೀರಿಲ್ಲದೆ ಭತ್ತದ ಬೆಳೆ ಒಣಗುತ್ತಿದೆ....

ಕಾಲುವೆಯಿಂದ ಬಾವಿಯೊಳಗೆ ಸೇರಿದ್ದ 7 ಅಡಿ ಉದ್ದದ ಮೊಸಳೆ ಸೆರೆ

2 months ago

ಬೆಳಗಾವಿ(ಚಿಕ್ಕೋಡಿ): ಕಾಲುವೆಯಿಂದ ಹೊರಬಂದು ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿನ ಬಾವಿಯೊಂದರಲ್ಲಿ 7 ಅಡಿ ಉದ್ದದ ಮೊಸಳೆ ಸೇರಿಕೊಂಡಿತ್ತು. ಇದನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಬಾಗ ಉಪ ಕಾಲುವೆಯ ನೀರಲ್ಲಿ ಬಂದ ಮೊಸಳೆ ಹೊರವಲಯದಲ್ಲಿದ್ದ 25 ಅಡಿ...

ಕಾಲುವೆ ನೀರಿನ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

2 months ago

ರಾಯಚೂರು: ಕಾಲುವೆ ನೀರಿನ ವಿಚಾರದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ರಂಗಾಪೂರು ಗ್ರಾಮದಲ್ಲಿ ನಡೆದಿದೆ. ಗಲಾಟೆಯ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಿವರುದ್ರಪ್ಪ (65) ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಈ ಗಲಾಟೆಯಲ್ಲಿ...

ಕೊನೆಗೂ ಕಾಲುವೆಗಳಿಗೆ ಹರಿಯಿತು ಕಾವೇರಿ ನೀರು – ನಿಟ್ಟುಸಿರು ಬಿಟ್ಟ ಮಂಡ್ಯ ರೈತರು

3 months ago

ಮಂಡ್ಯ: ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ...