Monday, 16th December 2019

8 months ago

ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೆಲವೊಮ್ಮೆ ಅನಿವಾರ್ಯ: ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ

ಕಲಬುರಗಿ: ರಾಜಕೀಯದಲ್ಲಿ ಕುಟುಂಬ ರಾಜಕಾರಣಕ್ಕೆ ನನ್ನ ವಿರೋಧವಿದೆ. ಅದರೆ ರಾಜಕಾರಣದಲ್ಲಿ ಕೆಲವೊಮ್ಮೆ ಅದು ಅನಿವಾರ್ಯವಾಗುತ್ತದೆ ಎಂದು ಮಾಜಿ ಸಚಿವ, ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸುನೀಲ್ ವಲ್ಯಾಪುರೆ ಹೇಳಿದ್ದಾರೆ. ನಾನು ಬಿಜೆಪಿಯಲ್ಲಿ 25 ವರ್ಷದಿಂದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಚಿಂಚೋಳಿ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ವಲ್ಯಾಪುರೆ ನಡೆಯೇ ನಮ್ಮ ನಡೆ ಎಂದು ಕಾರ್ಯಕರ್ತರು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಟ್ಟು ನಾನು ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದೇನೆ ಎಂದು ಹೇಳಿದರು. […]

9 months ago

ಹೆಚ್‍ಡಿಡಿಗೆ 224 ಮೊಮ್ಮಕ್ಕಳು ಯಾಕಿಲ್ಲ?: ಚಿಂಚನಸೂರು

ಕಲಬುರಗಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮಗೆ 224 ಮೊಮ್ಮಕ್ಕಳಿಲ್ಲ ಯಾಕೆ ಇಲ್ಲ? ಇದಿದ್ದರೆ ಎಲ್ಲರಿಗೂ ಸೀಟು ಕೊಡಿಸಬಹುದಿತ್ತು ಎಂಬ ಚಿಂತೆ ಅವರಿಗೆ ಕಾಡುತ್ತಿದೆ ಎಂದು ಕಲಬುರಗಿಯಲ್ಲಿ ನಡೆದ ಕೋಲಿ ಸಮಾಜ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ವ್ಯಂಗ್ಯವಾಡಿದ್ದಾರೆ. ಸಭೆಯಲ್ಲಿ ಕುಟುಂಬ ರಾಜಕಾರಣ ಬಗ್ಗೆ ಪ್ರಸ್ತಾಪಿಸಿ ಚಿಂಚನಸೂರ್, ದೇವೇಗೌಡರಿಗೆ 224 ಮೊಮ್ಮಕ್ಕಳಿದ್ದಿದ್ದರೆ ಎಲ್ಲ ಕ್ಷೇತ್ರಗಳಲ್ಲಿ...