Tuesday, 16th July 2019

1 day ago

ಅಭಿಮಾನಿಯಿಂದ ಕಿಸ್ – ಈಶ್ವರಪ್ಪ ಫುಲ್ ಖುಷ್

ಬೆಂಗಳೂರು: ಶಾಸಕರ ರಾಜೀನಾಮೆ ಪರ್ವದಿಂದ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಮಡಾ ರೆಸಾರ್ಟ್‍ನಲ್ಲಿ ತಂಗಿರುವ ಬಿಜೆಪಿ ಶಾಸಕರನ್ನು ನೋಡಲು ಬಂದಿದ್ದ ಅಭಿಮಾನಿಯೊಬ್ಬ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪನವರಿಗೆ ಕಿಸ್ ಕೊಟ್ಟಿದ್ದಾನೆ. ಇಂದು ತಮ್ಮ ನೆಚ್ಚಿನ ನಾಯಕರನ್ನು ಭೇಟಿ ಮಾಡಲು ರೆಸಾರ್ಟ್ ಬಳಿ ಅಭಿಮಾನಿಗಳು ಬೀಡು ಬಿಟ್ಟಿದ್ದರು. ರೆಸಾರ್ಟ್ ಬಳಿ ತಮ್ಮ ನೆಚ್ಚಿನ ನಾಯಕರ ಸೆಲ್ಫಿಗಾಗಿ ಕಾರ್ಯಕರ್ತರು ಮುಗಿಬಿಳುತ್ತಿದ್ದರು. ಇದನ್ನು ಗಮನಿಸಿದ ಈಶ್ವರಪ್ಪ ಮತ್ತು ರಾಮದಾಸ್ ರೆಸಾರ್ಟ್ ನಿಂದ ಹೊರಬಂದು ಅಭಿಮಾನಿಗಳನ್ನು ಭೇಟಿ ಮಾಡಿದರು. […]

5 days ago

ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

ಬೆಂಗಳೂರು: ಬಿಜೆಪಿಗೆ ಬೆಂಬಲ ಕೊಡಲು ಜೆಡಿಎಸ್ ಮುಂದೆ ಬಂದಿತೇ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ನಗರದ ಕೆ.ಕೆ.ಗೆಸ್ಟ್ ಹೌಸ್‍ನಿಂದ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಮುರಳೀಧರ್ ರಾವ್ ಅವರು ಹೊರ ಬಂದರು. ಅವರ ಬೆನ್ನಲ್ಲೇ ಜೆಡಿಎಸ್‍ನ ಸಚಿವ ಸಾರಾ ಮಹೇಶ್ ಅವರು ಹೊರ ಬಂದಿದ್ದು ಭಾರೀ ಕುತೂಹಲ ಮೂಡಿಸಿದೆ. ಸಾ.ರಾ.ಮಹೇಶ್ ಅವರ...

ನಮ್ಮ ಶಾಸಕರು ಬಿಜೆಪಿ ಅವರನ್ನು ಆಟ ಆಡಿಸುತ್ತಿದ್ದಾರೆ: ಆರ್.ಬಿ ತಿಮ್ಮಾಪುರ್

4 weeks ago

ಬೆಳಗಾವಿ: ಬಿಜೆಪಿಯವರು ನಾಲ್ಕು ಜನ ಶಾಸಕರನ್ನು ಇಟ್ಟುಕೊಂಡು ಮೀಟಿಂಗ್ ಮಾಡಿದ್ದೆ ಮಾಡಿದ್ದು, ಆದರೆ ಆ ನಾಲ್ಕು ಜನರು ನಮ್ಮ ಕಡೆಯೆ ಇದ್ದಾರೆ. ಸುಮ್ಮನೆ ಬಿಜೆಪಿಯವರನ್ನು ಆಟ ಆಡಿಸುತ್ತಿದ್ದು, ಅದು ಬಿಜೆಪಿಯವರಿಗೆ ಅರ್ಥ ಆಗುತ್ತಿಲ್ಲ ಎಂದು ಸಚಿವ ಆರ್.ಬಿ ತಿಮ್ಮಾಪುರ್ ವ್ಯಂಗ್ಯವಾಡಿದ್ದಾರೆ. ಇಂದು...

ನುಡಿದಂತೆ ಹೋಳಿಗೆ ಊಟ ಹಾಕಿಸಿದ ಕೆ.ಎಸ್.ಈಶ್ವರಪ್ಪ

1 month ago

ಕೊಪ್ಪಳ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ನೂರಾರು ಕಾರ್ಯಕರ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸ್ವತಃ ಕೆ.ಎಸ್.ಈಶ್ವರಪ್ಪ ಅವರು ಕಾರ್ಯಕರ್ತರ ಜೊತೆಗೆ ಕುಳಿತು ಊಟ...

ಜಿಂದಾಲ್, ಐಎಂಎ ಪ್ರಕರಣದ ಕುರಿತು ಮಾಜಿ ಸಿಎಂ, ಸಿಎಂ ಸತ್ಯವನ್ನೇಕೆ ಹೇಳುತ್ತಿಲ್ಲ: ಈಶ್ವರಪ್ಪ

1 month ago

ಬಳ್ಳಾರಿ: ಜಿಂದಾಲ್ ಹಾಗೂ ಐಎಂಎ ಪ್ರಕರಣದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಯಾಕೆ ಬಾಯಿ ಬಿಡುತ್ತಿಲ್ಲ. ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ, ಡ್ಯಾನ್ಸ್ ಮಾಡಿ, ತೊಡೆ ತಟ್ಟಿ ರಾಜ್ಯದ ಆಸ್ತಿ ಉಳಿಸೋರು ನಾವೇ ಎಂದರು. ಆದರೆ 3,667...

ರಾಜ್ಯದಲ್ಲಿ ಸರ್ಕಾರ ಇದ್ಯಾ? ಇದೆ ಎಂದು ಒಪ್ತಿರಾ? – ಮೈತ್ರಿ ಸರ್ಕಾರದ ವಿರುದ್ಧ ಈಶ್ವರಪ್ಪ ವ್ಯಂಗ್ಯ

1 month ago

ಬಾಗಲಕೋಟೆ: ರಾಜ್ಯದಲ್ಲಿ ಸರ್ಕಾರ ಇದೆಯಾ, ಇದೇ ಎಂದು ನೀವು ಒಪ್ಪುತ್ತಿರಾ ಎಂದು ಪ್ರಶ್ನೆ ಮಾಡುವ ಮೂಲಕ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಅವರು ಮೈತ್ರಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಈಶ್ವರಪ್ಪ, ರೋಷನ್ ಬೇಗ್, ರಾಮಲಿಂಗಾರೆಡ್ಡಿ ಏನೇನು ಹೇಳುತ್ತಿದ್ದಾರೆ ಅದನ್ನು...

ಗುರುವಾರ ಶಿವಮೊಗ್ಗದ ಪ್ರತಿ ಮನೆಗೂ ಲಾಡು ವಿತರಣೆ – ಈಶ್ವರಪ್ಪ

2 months ago

ಶಿವಮೊಗ್ಗ: ಇದೇ ತಿಂಗಳು ಮೇ 30 ರಂದು ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರತಿ ಮನೆಗೂ ಲಾಡು ವಿತರಣೆ ಮಾಡಲಾಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿ ಇದ್ದಾರೆ – ಈಶ್ವರಪ್ಪ

2 months ago

ಕಲಬುರಗಿ: ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಹೇಳಿದ್ದಾರೆ. ಚಿಂಚೋಳಿ ತಾಲೂಕಿನ ರೇವಗ್ಗಿಯಲ್ಲಿ ಸುದ್ದಿಗಾರರ ಜೊತೆ ಮತಾನಾಡಿದ ಅವರು ಕಾಂಗ್ರೆಸ್ ಶಾಸಕರನ್ನು ನಮ್ಮ ಪಕ್ಷಕ್ಕೆ ಕರೆತರಲು ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ...