Wednesday, 24th July 2019

1 day ago

ಕೊಡಗಿನಲ್ಲಿ ಮಳೆ – ಮದೆನಾಡು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿತ

ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮತ್ತೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಸ್ತೆಗೆ ಮಣ್ಣು ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಕಷ್ಟವಾಗುತ್ತಿದೆ. ಮದೆನಾಡು ಬಳಿ ರಾತ್ರಿ 12 ಗಂಟೆಗೆ ಮೇಲೆ ಗುಡ್ಡ ಕುಸಿದಿದೆ. ಕಳೆದ ಬಾರಿ ಮದೆನಾಡು ಗ್ರಾಮದಲ್ಲಿ ಕುಸಿದಿದ್ದ ಗುಡ್ಡವೇ ಮತ್ತೆ ಕುಸಿದಿದೆ. ಆದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಗುಡ್ಡ ಕುಸಿದ ತೀವ್ರತೆಗೆ ವಿದ್ಯುತ್ ಕಂಬ ಬಾಗಿದೆ. ಅಲ್ಲದೆ ರಸ್ತೆಯ ಅರ್ಧ ಭಾಗ ಮಣ್ಣಿನಿಂದ ಆವೃತ ಹಿನ್ನೆಲೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಬೀಡು […]

3 days ago

ಕೊಡಗಿನಲ್ಲಿ ಮಳೆರಾಯನ ಅವಾಂತರ- ಎರಡು ಮನೆಗಳ ಮೇಲೆ ಮಣ್ಣು ಕುಸಿತ

ಕೊಡಗು: ಆರೆಂಜ್ ಅಲರ್ಟ್‍ನಲ್ಲಿರೋ ಕೊಡಗಿನ ವಿವಿಧೆಡೆ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ವಿರಾಜಪೇಟೆ ತಾಲೂಕಿನಲ್ಲಿ ಜಿಟಿ ಜಿಟಿ ಮಳೆಯ ಪರಿಣಾಮ ಮಲೆತಿರಕೆ ಬೆಟ್ಟದ ಸಮೀಪ ಇರುವ ಎರಡು ಮನೆಗಳ ಮೇಲೆ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗ್ರಾಮದ ಪುಪ್ಪರಾಜ್ ಮತ್ತು ದಿನೇಶ್ ಎಂಬವರ ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಮನೆಯಲ್ಲಿ ಇದ್ದವರನ್ನು ಸನೀಹದ ಸಮುದಾಯ ಭವನಕ್ಕೆ...

ಲಾರಿಗೆ ಡಿಕ್ಕಿ ಹೊಡೆದ ಕಾರು -ಬೆಂಗ್ಳೂರು ಮೂಲದ ಇಬ್ಬರ ದುರ್ಮರಣ

4 days ago

ಕೊಡಗು: ಕಾರು, ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪದ ಬಾಳೆಕಾಡು ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ 23 ವರ್ಷದ ಕಿರಣ್ ಮತ್ತು 25 ವರ್ಷದ ಶ್ರವಣ್ ಎಂದು ಗುರುತಿಸಲಾಗಿದೆ. ರಾಜು ಮತ್ತು...

ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

4 days ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೇಂದ್ರ ಹವಾಮಾನ ಇಲಾಖೆ ಜುಲೈ 18ರಿಂದ 23 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿತ್ತು. ಈ...

ಇಂದಿನಿಂದ ಜು.23ರ ವರೆಗೆ ಭಾರೀ ಮಳೆ – ಹವಾಮಾನ ಇಲಾಖೆ

4 days ago

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ 23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕರಾವಳಿ ಮತ್ತು ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು...

ಕೊಡಗಲ್ಲಿ 3 ದಿನ ಭರ್ಜರಿ ಮಳೆ – ಆತಂಕದಲ್ಲಿ `ಕರ್ನಾಟಕ ಕಾಶ್ಮೀರ’ದ ಜನ

4 days ago

ಬೆಂಗಳೂರು: ಈ ಬಾರಿ ಮುಂಗಾರು ಲೇಟಾಗಿ ಎಂಟ್ರಿ ಕೊಟ್ಟಿದ್ದರೂ ಮಳೆಯ ಅಬ್ಬರ ಜೋರಾಗಿಯೇ ಇದೆ. ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನಲ್ಲಿ ಈ ಬಾರಿ ಆರಂಭದಲ್ಲಿ ತಣ್ಣಗಿದ್ದ ವರುಣ ಆರೆಂಜ್ ಅಲರ್ಟ್ ಆದ ಬಳಿಕ ಅಂದರೆ ಶುಕ್ರವಾರದಿಂದ...

ರಾಜ್ಯಾದ್ಯಂತ ಮುಂಗಾರು ಮಳೆ ಚುರುಕು – ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

4 days ago

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕು ಪಡೆಯುತ್ತಿದೆ. ನಗರದ ಕೆಲ ಭಾಗಗಳಲ್ಲಿ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಹೆಬ್ಬಾಳ ಫ್ಲೈ ಓವರ್ ಮೇಲೆ ಮಳೆ ನೀರು ನಿಂತಿದ್ದ ಪರಿಣಾಮ ಬಳ್ಳಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ವಾಹನ ಸವಾರರ ಪರದಾಡಿದರು. ಕೊಡಗಿನಲ್ಲಿ ಭಾರೀ...

ಮಳೆಗೆ ಸೇತುವೆಯ ರಸ್ತೆಯೇ ಕೊಚ್ಚಿ ಹೋಯ್ತು-ಬಿಆರ್‌ಟಿಎಸ್ ಕಾರಿಡಾರ್ ಜಲಾವೃತ

6 days ago

ಬೆಂಗಳೂರು: ಬುಧವಾರ ರಾತ್ರಿ ರಾಜ್ಯದ ವಿವಿಧೆಡೆ ಮಳೆ ಅಬ್ಬರ ಜೋರಾಗಿದ್ದು, ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ರಸ್ತೆ ಮೇಲೆ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರಿನ ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್, ಹೆಬ್ಬಾಳ ಸೇರಿದಂತೆ ಹಲವೆಡೆ ಸುರಿದ ಭಾರಿ...