Monday, 17th June 2019

2 weeks ago

ವಿಶ್ವಪರಿಸರ ದಿನದಂದೇ ಬೆಸ್ಕಾಂ ಸಿಬ್ಬಂದಿಯಿಂದ ಮರಗಳ ಮಾರಣಹೋಮ

ಕೋಲಾರ: ಇಂದು ವಿಶ್ವ ಪರಿಸರ ದಿನ. ಎಲ್ಲೆಡೆ ಗಿಡ-ಮರಗಳನ್ನ ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡುತ್ತಿದ್ದರೆ, ಕೋಲಾರದಲ್ಲಿ ಈ ದಿನದಂತೆ ಬೆಸ್ಕಾಂ ಅಧಿಕಾರಿಗಳು ಮರಗಳ ಮಾರಣ ಹೋಮ ಮಾಡಿರುವ ಘಟನೆ ನಡೆದಿದೆ. ಮುಳಬಾಗಿಲು ತಾಲೂಕಿನ ಮೇಲ್‍ತಾಯಲೂರಿನಿಂದ ತಾಯಲೂರಿಗೆ ಇರುವ ರಸ್ತೆ ಬದಿಯಲ್ಲಿರುವ ಮರಗಳನ್ನು ಬೆಸ್ಕಾಂ ಸಿಬ್ಬಂದಿ ನಿರ್ದಾಕ್ಷಣ್ಯವಾಗಿ ಕಡಿದು ಹಾಕಿದ್ದಾರೆ. ಸುಮಾರು ವರ್ಷಗಳಿಂದ ಅರಣ್ಯ ಇಲಾಖೆಯವರು ಬೆಳಸಿದ್ದ ಮರಗಳನ್ನು ವಿದ್ಯುತ್ ತಂತಿಗೆ ತಗುಲುತ್ತವೆ ಎನ್ನುವ ಒಂದೇ ಕಾರಣಕ್ಕೆ ಮರಗಳನ್ನು ಕಡಿದು ಹಾಕಿದ್ದಾರೆ. ರಸ್ತೆಯ ಎರಡೂ ಬದಿಯಲ್ಲಿ ಬೆಳೆಸಲಾಗಿದ್ದ […]

2 weeks ago

ಎತ್ತಿನ ಹೊಳೆಗೂ ದಕ್ಷಿಣ ಕನ್ನಡದ ನೀರಿನ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ – ರಮೇಶ್ ಕುಮಾರ್

ಕೋಲಾರ: ಎತ್ತಿನ ಹೊಳೆ ನೀರಿನ ಯೋಜನೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ನೀರಿ ಸಮಸ್ಯೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರು ಹೇಳಿದ್ದಾರೆ. ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೂ ಮಂಗಳೂರು ಹಾಗೂ ಧರ್ಮಸ್ಥಳದಲ್ಲಿ ಇರುವ ನೀರಿನ ಸಮಸ್ಯೆಗೂ ಯಾವುದೇ...

ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಶವ ಪತ್ತೆ

2 weeks ago

ಕೋಲಾರ: ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಶವ ಪತ್ತೆಯಾಗಿರುವ ಘಟನೆ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸಪುರದ ಜೆ.ವಿ ಕಾಲೋನಿ ನಿವಾಸಿ ವರಲಕ್ಷ್ಮಿ (20) ಹಾಗೂ ಕೋಲಾರ ತಾಲೂಕಿನ ಪಚ್ಚಾರ್ಲಹಳ್ಳಿಯ ಸುರೇಶ್ (24) ಶವವಾಗಿ ಪತ್ತೆಯಾದ ಪ್ರೇಮಿಗಳು. ದೇವರಾಯಸಮುದ್ರ ಗ್ರಾಮದ...

ಒಂದು ರೂ. ಬಂಡವಾಳವಿಲ್ದೆ ಬಡವರಿಂದ ಜನರಿಗೆ ಮಾವಿನ ಸ್ವಾದ!

2 weeks ago

ಕೋಲಾರ: ಒಂದು ರೂಪಾಯಿ ಬಂಡವಾಳ ಇಲ್ಲದೇ ಎಸೆದ ಮಾವಿನಕಾಯಿಗಳಿಂದ ಕೋಲಾರದ ಬಡವರು ಹಾಗೂ ಅಲೆಮಾರಿಗಳು ವರ್ಷಪೂರ್ತಿ ಜನರಿಗೆ ಮಾವಿನ ಸ್ವಾದ ನೀಡುತ್ತಾರೆ. ಕೋಲಾರದ ಮಾವಿನ ಕಣಜ ಎಂದೆ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸಪುರದ ಭಾಗದಲ್ಲಿ ಎಲ್ಲೆಡೆ ಮಾವು ತುಂಬಿ ತುಳುಕುತ್ತಿರುತ್ತವೆ. ಮಾರುಕಟ್ಟೆಯಲ್ಲಿ ಯೋಗ್ಯವಲ್ಲದ...

ವಿದ್ಯುತ್ ತಂತಿ ದುರಸ್ಥಿ ವೇಳೆ ಶಾಕ್ – ಕಂಬದಲ್ಲೇ ನೇತಾಡಿದ ನೌಕರ

2 weeks ago

ಕೋಲಾರ: ವಿದ್ಯುತ್ ತಂತಿ ದುರಸ್ಥಿ ಕಾರ್ಯ ನಡೆಸುತ್ತಿದ್ದ ವೇಳೆ ಶಾಕ್ ಹೊಡೆದು ಗುತ್ತಿಗೆ ನೌಕರ ಕೆಲಕಾಲ ಕಂಬದಲ್ಲೇ ನೇತಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೆಸ್ಕಾಂ ಗುತ್ತಿಗೆ ನೌಕರ ದೀಪಕ್ ಗಂಭೀರ ಗಾಯಗೊಂಡಿದ್ದಾನೆ. ಕೋಲಾರ ನಗರದ ಕೋಲಾರಮ್ಮ ದೇವಾಲಯ...

ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ

3 weeks ago

ಕೋಲಾರ: ರಾಜ್ಯದಲ್ಲಿ ನಗರಸಭೆ, ಪರಸಭೆ ಹಾಗೂ ಪಟ್ಟಣ ಪಂಚಾಯ್ತಿ ಮತ ಎಣಿಕೆ ನಡೆದಿದ್ದು, ಕೋಲಾರದ ಮಾಲೂರು ಪುರಸಭೆ ಚುನಾವಣೆಯಲ್ಲಿ  ಯುವತಿ ಗೆಲುವು ಸಾಧಿಸಿದ್ದಾರೆ. ಸುಮಿತ್ರ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ಸುಮಿತ್ರ ಅವರು ಜೆಡಿಎಸ್ ಅಭ್ಯರ್ಥಿ ವಿರುದ್ಧ 373...

ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣನ ಅಬ್ಬರ

3 weeks ago

ಹಾಸನ/ಮಡಿಕೇರಿ/ಕೋಲಾರ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣ ಅಬ್ಬರಿಸಿದ್ದಾನೆ. ಹಾಸನ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು ಗಾಳಿ ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಈ ಮೂಲಕ ಬಿಸಿಲ ಬೇಗೆಯಿಂದ ಬೆಂದಿದ್ದ ಭೂಮಿಗೆ ತಂಪೆರೆದಂತಾಯಿತು. ಮಳೆಯಿಂದಾಗಿ ಜನಜೀವನ...

ಮೋದಿಯ ಬಿರುಗಾಳಿ ಅಲೆಯಿಂದ ಕೈ ಭದ್ರಕೋಟೆಯಲ್ಲಿ ನನಗೆ ಸೋಲು – ಮುನಿಯಪ್ಪ

3 weeks ago

ಕೋಲಾರ: ಮೋದಿಯ ಬಿರುಗಾಳಿ ಅಲೆ, ಜನತಾದಳದ ಕಾರ್ಯಕರ್ತರು ಪೂರ್ತಿ ಪ್ರಮಾಣದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡದೇ ಇರುವುದು ಹಾಗೂ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರ ಭಿನ್ನಾಭಿಪ್ರಾಯದಿಂದ ನಾನು ಸೋತಿದ್ದೇನೆ ಎಂದು ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ...