4 months ago
ಲಂಡನ್: 2028ರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ವಿಶ್ವ ಕ್ರಿಕೆಟ್ ಸಮಿತಿಯ ಅಧ್ಯಕ್ಷ, ಮಾಜಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಮೈಕ್ ಗ್ಯಾಟಿಂಗ್ ಈ ವಿಚಾರವನ್ನು ಮೊದಲ ಬಾರಿಗೆ ಅಧಿಕೃತವಾಗಿ ತಿಳಿಸಿದ್ದಾರೆ. ಮೇರಿಲೆಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಐಸಿಸಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮನು ಸಾಹ್ನಿ ಅವರು ಬಿಸಿಸಿಐ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ದಳ(ನಾಡಾ) ವ್ಯಾಪ್ತಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಕ್ರೀಡೆಯಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಬೇಕೆಂಬ ಆಗ್ರಹಕ್ಕೆ ಬಲ ಬಂದಿದೆ ಎಂದು ಹೇಳಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ […]