Thursday, 22nd August 2019

7 months ago

1 ಸಾವಿರ ವಿದ್ಯಾರ್ಥಿಗಳಿಂದ ಗುಲಾಬಿ ಹೂವನ್ನಿಟ್ಟು ಶ್ರೀಗಳಿಗೆ ಶ್ರದ್ಧಾಂಜಲಿ

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು ನಮಸ್ಕರಿಸಿದ್ದಾರೆ. 65 ಶಿಕ್ಷಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದು ಶ್ರೀಗಳ ಗದ್ದುಗೆ ದರ್ಶನ ಮಾಡಿಸಿದ್ದಾರೆ. ಇತ್ತ ಜನವರಿ 31 ರಂದು ನಡೆಯಲಿರುವ ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆಯ ಸಕಲ ತಯಾರಿ ನಡೆಯುತ್ತಿದೆ. ಭಕ್ತಾದಿಗಳಿಗಾಗಿ ಭಕ್ಷ್ಯ ಭೋಜನ ತಯಾರಾಗುತ್ತಿದೆ. […]

7 months ago

ಪೂಜೆ ಬಳಿಕ ಭಕ್ತಾಧಿಗಳಿಗೆ ಸಿಗಲಿದೆ ಶ್ರೀಗಳ ಗದ್ದುಗೆಯ ದರ್ಶನ ಭಾಗ್ಯ

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಗದ್ದುಗೆಗೆ ಭಕ್ತರು ಬುಧವಾರವೇ ಭೇಟಿ ನೀಡಬಹುದು. ಈಗ ಸಿದ್ಧಲಿಂಗ ಸ್ವಾಮೀಜಿ ಜೊತೆ ವಿವಿಧ ಮಠಾಧಿಶರು ಪೂಜೆ ನಡೆಸುತ್ತಿದ್ದು, ಪೂಜೆ ಮುಗಿದ ಬಳಿಕ ಭಕ್ತಾಧಿಗಳಿಗೆ ಗದ್ದುಗೆ ದರ್ಶನ ಪಡೆಯಲು ಅವಕಾಶ ನೀಡಲಾಗುತ್ತದೆ. ನಡೆದಾಡುವ ದೇವರು ಲಿಂಗೈಕ್ಯರಾದ ಗದ್ದುಗೆಯಲ್ಲಿ ಇಂದಿನ ಪೂಜಾ ವಿಧಾನಗಳು ಆರಂಭವಾಗಿದೆ. ಈ ಪೂಜೆ ಸಂದರ್ಭದಲ್ಲಿ ಸಿದ್ಧಲಿಂಗೇಶ್ವರ ಸ್ವಾಮಿಗೆ...