Tuesday, 17th September 2019

2 years ago

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ. ಈ ಬಾರಿ ಕರ್ನಾಟಕ ಟ್ಯಾಬ್ಲೋದಲ್ಲಿ ವನ್ಯಜೀವಿಗಳ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ಸ್ತಬ್ಧಚಿತ್ರದಲ್ಲಿ ಏನಿರಲಿದೆ?: ಪ್ರಾಕೃತಿಕವಾಗಿ ಅರಣ್ಯ ಮತ್ತು ವನ್ಯ ಸಂಪತ್ತಿನಿಂದ ಕೂಡಿರುವ ಕರ್ನಾಟಕವನ್ನು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಪ್ರತಿಬಿಂಬಿಸಲಾಗಿದೆ. ಈ ಬಾರಿ ಟ್ಯಾಬ್ಲೋದಲ್ಲಿ ಪ್ರಾಣಿಗಳ ಚಲನೆಯನ್ನು ಅಳವಡಿಸಲಾಗಿದೆ. ಇಡೀ ದೇಶದಲ್ಲಿರೋ […]