Tuesday, 19th November 2019

Recent News

2 days ago

ಸಿಕ್ಕಸಿಕ್ಕವರನ್ನು ಕಚ್ಚಿ, ದಾಳಿ ಮಾಡ್ತಿರೋ ವಾನರ ಸೇನೆ

– 8ರಿಂದ 10 ಮಂದಿ ಮೇಲೆ ದಾಳಿ ಬೀದರ್: ದರೋಡೆಕೋರರಿಗೆ ಹೆದರಿ ಜನರು ಮನೆಯಿಂದ ಹೊರಗೆ ಬಾರದ ಪ್ರಕರಣ ಬಗ್ಗೆ ಕೇಳಿರುತ್ತೇವೆ, ನೋಡಿರುತ್ತೇವೆ. ಆದರೆ ಬೀದರ್‌ನ ಗ್ರಾಮವೊಂದರಲ್ಲಿ ಮಂಗಗಳಿಗೆ ಹೆದರಿ ಗ್ರಾಮಸ್ಥರು ಮನೆಯಲ್ಲಿ ಕೂರುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಜಿಲ್ಲೆಯ ಭಾಲ್ಕಿ ತಾಲೂಕಿನ ಜವಳಗಾ ಗ್ರಾಮಸ್ಥರು ಮಂಗಗಳ ಹಾವಳಿಗೆ ಹೆದರಿ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಜವಳಗಾ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಸುಮಾರು 2 ತಿಂಗಳಲ್ಲಿ ಗ್ರಾಮದ 8 ರಿಂದ 10 ಮಂದಿ ಮೇಲೆ ಮಂಗಗಳು […]

1 week ago

ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ

ಬೆಂಗಳೂರು: ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಎಸ್‍ಪಿ ರವಿ ಡಿ ಚನ್ನಣ್ಣನವರ್ ಗ್ರಾಮ ಸಭೆ ಮಾಡಿ ಅದೇ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ....

ವಿಚಿತ್ರ ಶಬ್ದಕ್ಕೆ ಬೆಚ್ಚಿ ಬಿದ್ದ ಜನ – ಮತ್ತೆ ಜಲಸ್ಫೋಟದ ಆತಂಕ

2 weeks ago

ಮಡಿಕೇರಿ: ಕೊಡಗು ಜಿಲ್ಲೆಯ ಪೇರೂರಿನ ಇಗ್ಗುತ್ತಪ್ಪ ಬೆಟ್ಟದಲ್ಲಿ ನಿಗೂಢ ಶಬ್ದ ಕೇಳಿ ಬರುತ್ತಿದೆ. ಭೂಮಿಯೊಳಗಿನಿಂದ ನದಿಯಲ್ಲಿ ನೀರು ಹರಿಯುವಂತಹ ಶಬ್ದ ಕೇಳುತ್ತಿದ್ದು, ಈ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಮಡಿಕೇರಿ ತಾಲೂಕಿನ ಪೇರೂರಿನಲ್ಲಿರುವ ಕೊಡಗಿನ ಕುಲದೇವರು ಇಗ್ಗುತ್ತಪ್ಪ ಬೆಟ್ಟದಲ್ಲಿ ಈ ಶಬ್ದ ಕೇಳಿ...

ಘಟಪ್ರಭಾ ಪ್ರವಾಹಕ್ಕೆ ನಲುಗಿದ ಬಾಗಲಕೋಟೆ – ಮನೆಗಳಿಲ್ಲದೇ ಡವಳೇಶ್ವರ ಗ್ರಾಮಸ್ಥರ ಪರದಾಟ

2 weeks ago

ಬಾಗಲಕೋಟೆ: ಘಟಪ್ರಭಾ ಪ್ರವಾಹಕ್ಕೆ ಬಾಗಲಕೋಟೆ ನಲುಗಿ ಹೋಗಿದ್ದು, ಮನೆಗಳಿಲ್ಲದೇ ಡವಳೇಶ್ವರ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಡವಳೇಶ್ವರ ಗ್ರಾಮ ಕೃಷ್ಣ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳ ಪ್ರವಾಹಕ್ಕೆ ಸಿಲುಕಿ ಸಂಪೂರ್ಣ ನಲುಗಿ ಹೋಗಿದೆ. ಪ್ರವಾಹದಲ್ಲಿ ಸಿಲುಕಿ ಅನೇಕ...

ಶಾಸಕ ಶ್ರೀನಿವಾಸ್‌ಗೆ ಬೆವರಿಳಿಸಿದ ಗ್ರಾಮಸ್ಥರು

2 weeks ago

ತುಮಕೂರು: ಹಾಗಲವಾಡಿ ಕೆರೆಗೆ ನೀರು ಹರಿಸದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದು, ಶಾಸಕ ಎಸ್.ಆರ್ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ. ಇಂದು ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದ ಸಮುದಾಯ ಭವನ ಉದ್ಘಾಟನೆಗೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್...

4 ದಶಕಗಳ ಹಿಂದೆ ಸತ್ತಿದ್ದ ವ್ಯಕ್ತಿ ಮರಳಿ ಬಂದ- ಚಿತ್ರದುರ್ಗದಲ್ಲಿ ಅಚ್ಚರಿಯ ಘಟನೆ

3 weeks ago

ಚಿತ್ರದುರ್ಗ: ನಾಲ್ಕು ದಶಕಗಳ ಬಳಿಕ ಹಿಂದೆ ಸಾವನ್ನಪ್ಪಿದ್ದ ವ್ಯಕ್ತಿ ಮರಳಿ ಊರಿಗೆ ಬಂದಿರುವ ಅಚ್ಚರಿಯ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿಯಾಗಿದ್ದ ಈರಜ್ಜ ತನ್ನ 32 ವಯಸ್ಸಿನಲ್ಲೇ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಕುಟುಂಬಸ್ಥರು ಈರಜ್ಜರ...

ಹುಲಿ, ಆನೆ ನಂತ್ರ ಸೆರೆಯಾದ ಚಿರತೆ

3 weeks ago

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಯ ಕಾಡಂಚಿನ ಗ್ರಾಮದಲ್ಲಿ ನರಹಂತಕ ಹುಲಿ, ಆನೆ ನಂತರ ಇದೀಗ ಚಿರತೆ ಸೆರೆಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದೊಂದು ತಿಂಗಳಿಂದ ಬನ್ನಿತಾಳಪುರದ ಜಮೀನಿನಲ್ಲಿ ಚಿರತೆ ಹೆಜ್ಜೆಗಳು...

ಒಂದು ಜಿಲ್ಲೆ ಹಲವು ಜಗತ್ತಿಗೆ ಸಾಕ್ಷಿಯಾದ ಕಾಫಿನಾಡು

1 month ago

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಡಂಚಿನ ಗ್ರಾಮ ಬಿದಿರುತಳದಲ್ಲಿ ಕಣ್ಣು ಹಾಯಿಸದಲೆಲ್ಲಾ ಕಾಡು ಪ್ರಾಣಿಗಳ ಹಿಂಡು ಗೋಚರವಾಗುತ್ತಿದೆ. ಗ್ರಾಮದ ಸತೀಶ್ ಎಂಬವರು ತಮ್ಮ ತೋಟಕ್ಕೆ ಹೋಗುವಾಗ ದಾರಿಯುದ್ದಕ್ಕೂ ಪ್ರಾಣಿಗಳು ಕಾಣಿಸಿಕೊಂಡಿದೆ. ಈ ಪ್ರಾಣಿಗಳನ್ನು ನೋಡಿದ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಫೋಟೋಗಳನ್ನು...