Friday, 20th September 2019

Recent News

17 hours ago

ದಂಡ ಹಾಕಿ ರಶೀದಿ ನೀಡದೆ ದುಡ್ಡನ್ನು ಜೇಬಿಗಿಳಿಸಿದ ಪೊಲೀಸ್

ಚಾಮರಾಜನಗರ: ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ ದಂಡದ ಮೊತ್ತ ಹೆಚ್ಚಿಸಿದ ನಂತರ ಸಂಚಾರಿ ಪೊಲೀಸರ ಕಾರ್ಯಾಚರಣೆ ಜೋರಾಗಿದೆ. ಹಾಗೆಯೇ ಸಂಚಾರಿ ನಿಯಮ ಉಲ್ಲಂಘಿಸಿದವರನ್ನು ಹಿಡಿದು ದಂಡ ಹಾಕುತ್ತಿರುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಚಾಮರಾಜನಗರದಲ್ಲಿ ಸಂಚಾರಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ನಂಜಪ್ಪ ಅವರು ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಚೆಕ್ಕಿಂಗ್ ನಡೆಸುತ್ತಿದ್ದರು. ಈ ವೇಳೆ ಅವರು ವಾಹನದ ಚಾಲಕನೊಬ್ಬನಿಗೆ ಅಧಿಕೃತ ರಶೀದಿ ನೀಡದೆ ಆತನಿಂದ ಹಣ ಪಡೆದು ಜೇಬಿಗಿಳಿಸುತ್ತಿರುವುದು ಕಂಡು ಬಂದಿದೆ. ಸಂಚಾರಿ ಎಎಸ್‍ಐ ನಂಜಪ್ಪ ಹಳೆ ಖಾಸಗಿ […]

2 days ago

ಮುಂಗಾರಿನ ಅಭಿಷೇಕಕ್ಕೆ ಹಸಿರು ಹೊದಿಕೆಹೊತ್ತ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ

ಚಾಮರಾಜನಗರ: ಅದು ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವೆ. ಬಿಳಿ ಬಣ್ಣದಂತೆ ಕಾಣುವ ಈ ಬೆಟ್ಟವನ್ನ ಶ್ವೇತಾದ್ರಿ ಎನ್ನುತ್ತಾರೆ. ಈ ಬೆಟ್ಟ ಮುಂಗಾರಿನ ಅಭಿಷೇಕಕ್ಕೆ ಹಸಿರು ಸೀರೆಯುಟ್ಟ ನಾರಿಯಂತೆ ಕಾಣುತ್ತಿದ್ದು, ಅಚ್ಚಹಸಿರಾದ ಬೆಟ್ಟ, ಬೆಟ್ಟಕ್ಕೆ ತಾಕೋ ಮೋಡಗಳು ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿದ್ದು, ಈ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹೌದು. ಇಂತದೊಂದು...

ಹರಿಯುವ ನೀರಿಗೆ ಬ್ರೇಕ್-ಮೂರು ಗ್ರಾಮದ ಕೃಷಿ ಚಟುವಟಿಕೆಗೆ ನೀರಿಲ್ಲದೆ ರೈತರು ಕಂಗಾಲು

7 days ago

-ಕೆಲವರಿಗೆ ಬೆಳೆದ ಬೆಳೆಗೆ ನೀರಿಲ್ಲ -ಹಲವರಿಗೆ ನಾಟಿ ಮಾಡಲು ನೀರಿಲ್ಲ ಚಾಮರಾಜನಗರ: ಕೃಷಿ ಚಟುವಟಿಕೆಗೆ ನೀರು ಇಲ್ಲದೇ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಕಾವುದವಾಡಿ, ಬಸವಟ್ಟಿ ಮತ್ತು ಕಮರವಾಡಿ ಗ್ರಾಮಗಳ ರೈತರು ಪರದಾಡುವಂತಾಗಿದೆ. ಕಬಿನಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಯುತ್ತಿದ್ದರೂ ಮೂರು...

ದೇವರಿಗೆ ಹರಕೆ ನೀಡಿದ್ದ ಹಸುಗಳನ್ನು ಕಸಾಯಿಖಾನೆಗೆ ಸಾಗಾಣಿಕೆ- ಸಿಕ್ಕಿಬಿದ್ದ ಖದೀಮರು

7 days ago

ಚಾಮರಾಜನಗರ: ಶ್ರೀ ಮಲೆ ಮಾದಪ್ಪನಿಗೆ ಭಕ್ತರು ಹರಕೆ ರೂಪದಲ್ಲಿ ನೀಡುವ ಹಸು ಹಾಗೂ ಕರುಗಳನ್ನು ಕಸಾಯಿಖಾನೆಗೆ ಸಾಗಣೆ ಮಾಡುವ ವೇಳೆ ಖದೀಮರು ಸಿಕ್ಕಿಬಿದ್ದಿದ್ದಾರೆ. ಮೂರು ಲಾರಿಗಳಲ್ಲಿ ಶುಕ್ರವಾರ ರಾತ್ರಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆರೋಪಿಗಳು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಾರಿಗಳಲ್ಲಿ...

ಜೈಲಿನಲ್ಲೂ ಹಗಲು ದರೋಡೆ – ಕೈದಿಗಳನ್ನು ನೋಡಲು ಲಂಚ

1 week ago

ಚಾಮರಾಜನಗರ: ಜಿಲ್ಲೆಯಲ್ಲಿರುವ ಜೈಲಿನಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇಲ್ಲಿನ ಉಪಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳನ್ನು ನೋಡಲು ಹಣ ಕೊಡಲೇಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಲಂಚಕೊಟ್ಟರೆ ಮಾತ್ರ ಕೈದಿಗಳನ್ನು ನೋಡಲು ಅವಕಾಶ ನೀಡಲಾಗುತ್ತೆ. ಇಲ್ಲಿನ ಜೈಲಧಿಕಾರಿಗಳು ಕೈದಿಗಳ ಸಂಬಂಧಿಕರಿಂದ ಹಣ ವಸೂಲಿ ಮಾಡುತ್ತಾರೆ. ಕೈದಿಗಳ...

ಬಂಡೀಪುರ ಬೆಂಕಿ ಪ್ರಕರಣ – ಫೈರ್‌ಲೈನ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ

2 weeks ago

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಂದು ವರದಿ ಸಲ್ಲಿಕೆಯಾಗಿದೆ. ಫೈರ್‌ಲೈನ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಬಿದ್ದ ಪರಿಣಾಮ 4419.54...

ಮಾದಪ್ಪನಿಗೆ ಹರಕೆ ತೀರಿಸಿದ ಸೆಂಚುರಿ ಸ್ಟಾರ್ ಶಿವಣ್ಣ

2 weeks ago

ಚಾಮರಾಜನಗರ: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಬೆಳಗ್ಗೆ ಚಲನಚಿತ್ರ ನಿರ್ಮಾಪಕ...

ಹುಲಿ ದಾಳಿಗೆ ರೈತ ಬಲಿ

3 weeks ago

ಚಾಮರಾಜನಗರ: ಹುಲಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ನಡೆದಿದೆ. ಈ ಘಟನೆ ಕಳೆದ ರಾತ್ರಿ ನಡೆದಿದ್ದು, ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ರೈತ ಶಿವಮಾದಯ್ಯ (55) ಹುಲಿದಾಳಿಗೆ ಬಲಿಯಾಗಿದ್ದಾರೆ. ಎತ್ತುಗಳೊಂದಿಗೆ ಕಾಡಂಚಿನಲ್ಲಿ ಬರುತ್ತಿದ್ದಾಗ...