Monday, 18th November 2019

Recent News

6 hours ago

ತಿರುಪತಿಯಿಂದ ಅಯ್ಯಪ್ಪ ಭಕ್ತರ ಜೊತೆ ಹೆಜ್ಜೆ ಹಾಕಿದ ಶ್ವಾನ ಕರ್ನಾಟಕಕ್ಕೆ ಬಂತು – ವಿಡಿಯೋ ನೋಡಿ

ಚಿಕ್ಕಮಗಳೂರು: ಶಬರಿಮಲೆಗೆ ಪಾದಯಾತ್ರೆ ಮಾಡುತ್ತಿರುವ ಭಕ್ತರ ಜೊತೆ ಶ್ವಾನವೊಂದು 480 ಕಿ.ಮೀ ದೂರದಿಂದ ನಡೆದುಕೊಂಡು ಬರುತ್ತಿದೆ. ಆಕ್ಟೋಬರ್ 31 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ತೋಡಾರು ಗ್ರಾಮದ ನಿವಾಸಿ ರಾಜೇಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ಆರು ಜನ ಅಯ್ಯಪ್ಪನ ಭಕ್ತರು ಮಾಲೆ ಧರಿಸಿ ತಿರುಪತಿಯ ತಿರುಮಲದಿಂದ ಬರಿಗಾಲಿನಲ್ಲಿ ಪಾದಯಾತ್ರೆ ಶುರು ಮಾಡಿದ್ದಾರೆ. ಈ ವೇಳೆ ಇವರ ಜೊತೆ ಸೇರಿಕೊಂಡಿರುವ ನಾಯಿಯೊಂದು 480 ಕಿ.ಮೀ ನಡೆದು ಭಾನುವಾರ ಚಿಕ್ಕಮಗಳೂರಿನ ಕೊಟ್ಟಿಗೆಹಾರ ತಲುಪಿದೆ. ನಾಯಿಯ ಅಯ್ಯಪ್ಪ ಮೇಲಿನ ಭಕ್ತಿ […]

8 hours ago

ಕೋಣದ ಜೊತೆ ಕಾದಾಟ – ಒಂದು ಹೆಜ್ಜೆ ಇಡಲು ಬಿಡದೇ ರಸ್ತೆಯಿಂದ ಓಡಿಸಿದ ನಾಯಿ

ಚಿಕ್ಕಮಗಳೂರು: ಜೀಪಿಗೆ ಅಡ್ಡ ಬಂದ ಕೋಣದ ಜೊತೆ ನಾಯಿ ಕಾದಾಟ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಮಾಲೀಕ ತನ್ನ ನಾಯಿಯ ಜೊತೆ ಕಾಫಿ ತೋಟಕ್ಕೆ ಹೋಗುತ್ತಿದ್ದರು. ಈ ವೇಳೆ ಜೀಪಿಗೆ ಕಾಡು ಕೋಣ ಅಡ್ಡ ಬಂದು ನಿಂತುಕೊಂಡಿದೆ. ಇದನ್ನು ನೋಡಿದ ನಾಯಿ ಆ ಕೋಣದ ಜೊತೆ...

ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿಯನ್ನು ನೋಡಿ ಮಂತ್ರಮುಗ್ಧರಾದ ಪ್ರವಾಸಿಗರು

6 days ago

ಚಿಕ್ಕಮಗಳೂರು: ಚಳಿಗಾಲ ಆರಂಭವಾಗಿದ್ದು, ಕಾಫಿನಾಡಿನ ಫಾಲ್ಸ್‌ಗಳಿಗೆ ಜೀವಕಳೆ ಬಂದು ಗಿರಿಯ ಪ್ರಕೃತಿ ವಿಸ್ಮಯವನ್ನು ವರ್ಣಿಸುವುದಕ್ಕೆ ಪದಗಳೇ ಸಾಲದು. ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿ ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಚಳಿಯ ಗಾಳಿಯೊಂದಿಗಿನ ಮಂಜಿನಾಟ ನೋಡುಗರಿಗೆ ರಸದೌತಣ. ಇಲ್ಲಿನ ಮನಮೋಹಕ ತಾಣಗಳಿಗೆ ಫಿದಾ ಆಗಿರುವ ಪ್ರವಾಸಿಗರಿಗೆ ಕಾಫಿನಾಡೆಂದರೆ...

ಡಿಸಿಎಂಗಾಗಿ 4 ಬಾರಿ ಝೀರೋ ಟ್ರಾಫಿಕ್ – ಬಿಸಿಲಿನಲ್ಲಿ ನಿಂತು ಹೈರಾಣದ ಜನತೆ

1 week ago

ಚಿಕ್ಕಮಗಳೂರು: ದೋಸ್ತಿ ಸರ್ಕಾರದಲ್ಲಿ ಡಿಸಿಎಂ ಪರಮೇಶ್ವರ್ ಝೀರೋ ಟ್ರಾಫಿಕ್ ಸೌಲಭ್ಯ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಝೀರೋ ಟ್ರಾಫಿಕ್ ಪಡೆದು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ್‍ಗಾಗಿ ಪೊಲೀಸರು ಒಂದಲ್ಲ...

ಕಾಫಿನಾಡಿನಲ್ಲಿ ತೊಡೆ ತಟ್ಟಿ ನಿಂತು ಕುಸ್ತಿಯಾಡಿದ ಬಾಲಕ-ಬಾಲಕಿಯರು

1 week ago

– ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪೋರಿಯರು ಚಿಕ್ಕಮಗಳೂರು: ಕುಸ್ತಿಯನ್ನ ನೋಡೋದೇ ಒಂದು ಕುತೂಹಲ. ಕುಸ್ತಿಯಲ್ಲಿ ಬಾಲಕ-ಬಾಲಕಿಯರು ತೊಡೆ ತಟ್ಟಿ ನಿಂತರೆ ನೋಡುಗರ ಮೈ ಝುಮ್ ಅನ್ನಿಸದೆ ಇರಲಾರದು. ಮೂರು ದಿನಗಳ ಕಾಲ ಕಾಫಿನಾಡಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ನೋಡಗರ ಮೈ...

ಅಳುತ್ತಿದ್ದ ಮಗುವನ್ನ ನಾಲೆಗೆ ಎಸೆದ ತಾಯಿ

2 weeks ago

ಚಿಕ್ಕಮಗಳೂರು: ಮೂರು ತಿಂಗಳ ಗಂಡು ಮಗುವನ್ನ ಹೆತ್ತ ತಾಯಿಯೇ ನಾಲೆಗೆ ಎಸೆದು ಕೊಂದ ಅಮಾನವೀಯ ಘಟನೆ ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಕಡೂರು ತಾಲೂಕಿನ ನಿಡಘಟ್ಟ ನಿವಾಸಿ ಕಮಲ ಮಗುವನ್ನು ನಾಲೆಗೆ ಎಸೆದ ತಾಯಿ. ಮೂರು ತಿಂಗಳ ತೇಜಸ್ ಮೃತ ಕಂದಮ್ಮ ಎಂದು...

ಪುನರ್ವಸತಿ ಹೆಸರಲ್ಲಿ ಮಲೆನಾಡಿಗರ ಬದುಕು ನಾಶ – ಸರ್ಕಾರದ ನಿಯಮಗಳಿಗೆ ಜನ ಕಂಗಾಲು

2 weeks ago

ಚಿಕ್ಕಮಗಳೂರು: ರಾಜ್ಯ ಸರ್ಕಾರ, ಪರಿಹಾರ-ಪುನರ್ವಸತಿ ಹೆಸರಲ್ಲಿ ಮಲೆನಾಡಿಗರ ಬದುಕನ್ನೇ ಸರ್ವನಾಶ ಮಾಡಲು ಹೊರಟಿದೆ. ಏಕೆಂದರೆ ಮಹಾಮಳೆಗೆ ನಿರ್ಗತಿಕರಾದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಆಲೇಖಾನ್ ಹೊರಟ್ಟಿ, ಮಧುಗುಂಡಿ, ದುರ್ಗದಹಳ್ಳಿ, ಮೇಗೂರು, ಮಲೆಮನೆ ಗ್ರಾಮಗಳ ಸ್ಥಳಾಂತರಕ್ಕೆ ಮುಂದಾಗಿದೆ. ಅಲ್ಲದೆ ದಾಖಲೆ ಇರುವವರಿಗಷ್ಟೇ ಜಮೀನು. ಒತ್ತುವರಿದಾರರಿಗೆ...

ನಿಮ್ಮ ಬೇಜವಾಬ್ದಾರಿಯಿಂದ ಒಂದು ಹೆಣ್ಣುಮಗಳ ಪ್ರಾಣ ಹೋಯ್ತು – ಸಿಟಿ ರವಿಗೆ ಜನಸಾಮಾನ್ಯರ ತರಾಟೆ

2 weeks ago

ಚಿಕ್ಕಮಗಳೂರು: ಭಾನುವಾರ ರಸ್ತೆ ಗುಂಡಿಗೆ ಬಿದ್ದು ಯುವತಿ ಸಾವನ್ನಪ್ಪಿದ್ದ ಪ್ರಕರಣದಿಂದ ಜನಸಾಮಾನ್ಯರು ಸಿಟ್ಟಿಗೆದ್ದಿದ್ದು, ಸಚಿವ ಸಿ.ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಸಚಿವರ ವಿರುದ್ಧ ಮಹಿಳೆಯೊಬ್ಬರು ಕಿಡಿಕಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಸಿಟಿ ರವಿ...