Recent News

3 years ago

ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ 1.30 ಕೋಟಿ ರೂ. ಹಳೇ ನೋಟ್‍ಗಳು ಜಪ್ತಿ- 3 ಮಹಿಳೆಯರು ವಶಕ್ಕೆ

ಉತ್ತರ ಕನ್ನಡ: ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 30 ಲಕ್ಷ ರೂ. ಮೌಲ್ಯದ ನಿಷೇಧಿತ 500 ಮತ್ತು 1 ಸಾವಿರ ಮುಖಬೆಲೆಯ ನೋಟುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಹಣ ಸಾಗಿಸುತ್ತಿದ್ದ ಮೂವರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಡಗೋಡು ಮೂಲದ ಜಯಶ್ರೀ ಹನುಮಂತಗೌಳಿ, ಭವಾನಿ ಹಾಗೂ ಮೀನಾಕ್ಷಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದವರು. ಗೋವಾದ ಮಡಗಾಂ ನಿಂದ ಮುಂಡಗೋಡಿಗೆ ಹಣ ಸಾಗಿಸುತ್ತಿರುವಾಗ ಕಾರವಾರದ ಮಾಜಾಳಿ ಚೆಕ್ ಪೋಸ್ಟ್ ಬಳಿ ಚಿತ್ತಾಕುಲ ಪೊಲೀಸರು ಹಣ ಜಪ್ತಿ ಮಾಡಿ ಮಹಿಳೆಯರನ್ನು ವಶಕ್ಕೆ […]

3 years ago

ಬೇರೊಬ್ಬ ಮೌಲ್ವಿಯ ಉಪದೇಶ ಆಲಿಸಿದಕ್ಕೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಫತ್ವಾ

ಕಾರವಾರ: ಬೇರೊಬ್ಬ ಮೌಲ್ವಿಯ ಉಪದೇಶವನ್ನು ಆಲಿಸಿದ ಕಾರಣಕ್ಕಾಗಿ ಜಿಲ್ಲೆಯ ಚಿತ್ತಾಕುಲದ ಮಾಲ್ದಾರವಾಡದ ಗ್ರಾಮದಲ್ಲಿ 12 ಮುಸ್ಲಿಂ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿ ಮೌಲ್ವಿಯೊಬ್ಬರು ಫತ್ವಾ ಹೊರಡಿಸಿದ್ದಾರೆ. ಗ್ರಾಮದ ಅನ್ವರ್ ಮಹಮದ್ ಖಾನ್, ಅಬ್ದುಲ್ ಸಲಾಂ ಸೇರಿದಂತೆ 12 ಕುಟುಂಬಗಳು ಆಂಧ್ರಪ್ರದೇಶದ ದಾವಲ್-ಅಲಿ-ಶಾಹಾರ್ ಎಂಬ ಮೌಲ್ವಿಯ ಉಪದೇಶವನ್ನ ಕೇಳಿ ಅವರನ್ನು ಅನುಸರಿಸುತ್ತಿದ್ದರು. ಈ ಕಾರಣದಿಂದಾಗಿ ಚಿತ್ತಾಕುಲದ ಮಸೀದಿ...