Wednesday, 17th July 2019

Recent News

2 weeks ago

ಈಗ ಆನಂದ್ ಸಿಂಗ್ ಸರದಿ, ಸರ್ಕಾರ ಯಾವುದೇ ಸಮಯದಲ್ಲಿ ಪತನ – ಶೆಟ್ಟರ್ ಭವಿಷ್ಯ

ಹುಬ್ಬಳ್ಳಿ: ಈಗ ಅನಂದ್ ಸಿಂಗ್ ಸರದಿ, ಎಷ್ಟು ಜನ ಶಾಸಕರು ಬರುತ್ತಾರೆ ಎಂಬುವುದನ್ನು ಕಾದು ನೋಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರ ನನಗೂ ಈಗ ಮಾಹಿತಿ ಬಂದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‍ನಲ್ಲಿ ಬಹಳಷ್ಟು ಶಾಸಕರಿಗೆ ಅಸಮಾಧಾನ ಇದೆ ಎಂದು ಹೇಳಿದರು. ಎರಡೂ ಪಕ್ಷದ ಧುರೀಣರ ನಡುವೆ ಒಳಜಗಳ ಇದ್ದು ಆರೋಪ ನಡೆದಿದೆ. ದೊಡ್ಡ ಪ್ರಮಾಣದ ಸಮಸ್ಯೆ ಈ ಸರ್ಕಾರದಲ್ಲಿ […]

4 weeks ago

ಅರ್ಜಿ ತೆಗೆದುಕೊಂಡು ಬಂದರೆ ಏನೂ ಅಗಲ್ಲ – ಗ್ರಾಮ ವಾಸ್ತವ್ಯಕ್ಕೆ ಶೆಟ್ಟರ್ ವ್ಯಂಗ್ಯ

– ಗ್ರಾಮಕ್ಕೆ ಹೋಗಿ ವಾಸ್ತವ್ಯ ಮಾಡುವುದರಿಂದ ಅಭಿವೃದ್ಧಿಯಾಗಲ್ಲ ಹುಬ್ಬಳ್ಳಿ: ಸಿಎಂ ಗ್ರಾಮ ವಾಸ್ತವ್ಯ ಮಾಡಿ ಕೇವಲ ಅರ್ಜಿ ತೆಗೆದುಕೊಂಡು ಬಂದರೆ ಅಭಿವೃದ್ಧಿಯಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಇಂದು ಹುಬ್ಬಳ್ಳಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಮಾಡೋ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಒಂದು ಗ್ರಾಮಕ್ಕೆ ಹೋಗಿ ವಾಸ್ತವ್ಯ...

ರಾಜ್ಯದಲ್ಲಿ ಸರ್ಕಾರವಿದೆ ಅನ್ನೋದು ಜನರಿಗೆ ಗೊತ್ತಿಲ್ಲ: ಶೆಟ್ಟರ್

2 months ago

ಬೆಂಗಳೂರು: ರಾಜ್ಯದಲ್ಲಿ ಸರ್ಕಾರವಿದೆ ಎನ್ನುವುದು ಜನರಿಗೆ ಗೊತ್ತಿಲ್ಲ, ಇದು ಅಪವಿತ್ರ ಮೈತ್ರಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮೈತ್ರಿ ಸರ್ಕಾರ ರಾಜ್ಯದಲ್ಲಿ ಆಡಳಿತ ಮಾಡಲು...

ಬಿಜೆಪಿ ಗೋಡ್ಸೆಯನ್ನು ಎಂದೂ ಒಪ್ಪಿಕೊಂಡಿಲ್ಲ, ಗೋಡ್ಸೆ ಸಮಾಜಕ್ಕೆ ಕಪ್ಪು ಚುಕ್ಕಿ – ಶೆಟ್ಟರ್

2 months ago

ಹುಬ್ಬಳ್ಳಿ: ಬಿಜೆಪಿ ಎಂದೂ ಗೋಡ್ಸೆಯನ್ನು ಒಪ್ಪಿಕೊಂಡಿಲ್ಲ. ಗೋಡ್ಸೆ ಸಮಾಜಕ್ಕೆ ಒಂದು ಕಪ್ಪು ಚುಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಡ್ಸೆ ಮತ್ತು ಬಿಜೆಪಿ ಕುರಿತು ರಾಹುಲ್ ಗಾಂಧಿ ಟ್ವೀಟ್ ವಿಚಾರ ಬಗ್ಗೆ...

ಸಾವಿನ ರಾಜಕಾರಣ: ಬಳ್ಳಾರಿ ಕಳೆದುಕೊಂಡಂತೆ ಕುಂದಗೋಳವನ್ನ ಕಳೆದುಕೊಳ್ಳುತ್ತಾ ಬಿಜೆಪಿ?

2 months ago

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಆಡಿದ್ದ ಮಾತು ಬಿಜೆಪಿಗೆ ಮುಳುವಾಗಿತ್ತು. ಜನಾರ್ದನ ರೆಡ್ಡಿ ಅವರ ಮಾತಿನಿಂದಲೇ ಬಳ್ಳಾರಿ ಉಪ ಕದನಲ್ಲಿ ಬಿಜೆಪಿ ಸೋತಿತು ಎಂಬ ಮಾತುಗಳು ಫಲಿತಾಂಶದ...

ಕಮಲ ಕಾರ್ಯಕರ್ತರಿಗೆ ಕೈ ಹಾಕಿದ್ರೆ ನೆಟ್ಟಗಿರಲ್ಲ- ಡಿಕೆಶಿಗೆ ಶೆಟ್ಟರ್ ಖಡಕ್ ಎಚ್ಚರಿಕೆ

2 months ago

ಹುಬ್ಬಳ್ಳಿ: ಸಚಿವ ಡಿಕೆ ಶಿವಕುಮಾರ್ ಅವರಿಗೆ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ಕೊಟ್ಟಿದ್ದಾರೆ. ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರೇ ಇಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರನ್ನು ಕರೆಯುತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಕೈ ಹಾಕಿದರೆ ಅದರ ಪರಿಣಾಮ ನೆಟ್ಟಗೆ ಇರುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್...

ಎಚ್‍ಡಿಕೆ ಬೇಸರ ಹೊರಹಾಕಿದ್ರೂ ಹೇಳಿಕೆ ಸಮರ್ಥಿಸಿಕೊಂಡ್ರು ಜಗದೀಶ್ ಶೆಟ್ಟರ್

3 months ago

ಧಾರವಾಡ: ತಮ್ಮ ತಾಯಿಯ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬೇಸರ ಹೊರಹಾಕಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜಿಲ್ಲೆಯ ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ. ದೇವೇಗೌಡರ...

ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರು: ಜಗದೀಶ್ ಶೆಟ್ಟರ್ ಲೇವಡಿ

3 months ago

ಹುಬ್ಬಳ್ಳಿ: ಜೆಡಿಎಸ್ ಕುಟುಂಬ ರಾಜಕಾರಣದ ಸಂಕೇತವೇ ಕಣ್ಣೀರಾಗಿದೆ. ಸಿಎಂ ಕುಮಾರಸ್ವಾಮಿ ಅವರು ಸೋಲುವ ಭೀತಿಯಿಂದ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ದೇವೇಗೌಡರು ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ...