Monday, 19th August 2019

Recent News

7 days ago

 ಸೆ.5 ರಿಂದ ಜಿಯೋ ಬ್ರಾಡ್‍ಬ್ಯಾಂಡ್ ಕಮಾಲ್ – ಬೆಲೆ ಎಷ್ಟು? ವಿಶೇಷತೆ ಏನು?

ಮುಂಬೈ: ಬ್ರಾಡ್‍ಬ್ಯಾಂಡ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಲಿರುವ ಜಿಯೋ ಫೈಬರ್ ಸೆಪ್ಟೆಂಬರ್ 5 ರಂದು ಅಧಿಕೃತವಾಗಿ ಆರಂಭವಾಗಲಿದೆ. ರಿಲಯನ್ಸ್ ಕಂಪನಿಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಈ ವಿಚಾರವನ್ನು ತಿಳಿಸಿದ್ದು ಅಮೆರಿಕದಲ್ಲಿರುವ ವೇಗದ ಡೇಟಾಕ್ಕಿಂತಲೂ ನಾವು ವೇಗದ ಡೇಟಾ ಸೇವೆ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಅಮೆರಿಕದಲ್ಲಿ ಸಾಧಾರಾಣ ಡೇಟಾ ಸ್ಪೀಡ್ 90 ಎಂಬಿಪಿಎಸ್(ಮೆಗಾ ಬೈಟ್ಸ್ ಪರ್ ಸೆಕೆಂಡ್) ಇದ್ದರೆ, ಜಿಯೋದ ಕಡಿಮೆ ಸ್ಪೀಡ್ 100 ಎಂಬಿಪಿಎಸ್ ಇರಲಿದೆ. ಮುಂದೆ 1 ಜಿಬಿಪಿಎಸ್(ಗಿಗಾ ಬೈಟ್ಸ್ ಪರ್ ಸೆಕೆಂಡ್) […]

4 weeks ago

ಜಿಯೋಗೆ ಮೋಸ – ಏರ್ ಟೆಲ್, ವೊಡಾಫೋನ್‍ಗೆ 3050 ಕೋಟಿ ದಂಡ

ನವದೆಹಲಿ: ಜಿಯೋಗೆ ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದಕ್ಕೆ ಡಿಜಿಟಲ್ ಕಮ್ಯೂನಿಕೇಷನ್ ಕಮಿಷನ್(ಡಿಸಿಸಿ) ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ 3,050 ಕೋಟಿ ರೂ. ದಂಡ ವಿಧಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ತನ್ನ ಸೇವೆ ಆರಂಭಗೊಂಡ ಸಮಯದಲ್ಲಿ ಈ ಟೆಲಿಕಾಂ ಕಂಪನಿಗಳು ಅಂತರ್ ಸಂಪರ್ಕ ನೀಡದೇ ಲೋಪ ಎಸಗುತ್ತಿವೆ ಎಂದು ಆರೋಪಿಸಿ ಜಿಯೋ ಭಾರತೀಯ ದೂರಸಂಪರ್ಕ...

15 ತಿಂಗಳ ನಂತ್ರ ಲಾಭಕ್ಕೆ ಮರಳಿದ ಜಿಯೋ- ಏರ್ ಟೆಲ್ ಆದಾಯ ಕುಸಿತ

2 years ago

ಮುಂಬೈ: ಸೇವೆ ಆರಂಭಗೊಂಡ ಬಳಿಕ ನಷ್ಟದಲ್ಲಿದ್ದ ರಿಲಯನ್ಸ್ ಜೀಯೋ 15 ತಿಂಗಳ ಬಳಿಕ ಇದೇ ಮೊದಲ ಬಾರಿ ಲಾಭದ ಫಲಿತಾಂಶ ದಾಖಲಿಸಿದೆ. ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಯೋ 504 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಮಾತೃಸಂಸ್ಥೆ ರಿಲಯನ್ಸ್ ಇಂಡಸ್ಟ್ರಿಸ್...

ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?

2 years ago

ಮುಂಬೈ: ರಿಲಯನ್ಸ್ ಜಿಯೋ ಟೆಲಿಕಾಂ ಪ್ರವೇಶಿಸಿದ ಮೇಲೆ ಭಾರತದಲ್ಲಿದ್ದ ಟೆಲಿಕಾಂ ಕಂಪೆನಿಗಳ ಆದಾಯಕ್ಕೆ ಹೊಡೆತ ಬಿದ್ದಿರುವುದು ಹಳೆಯ ಸುದ್ದಿ. ಈಗ ಈ ಕ್ಷೇತ್ರದಲ್ಲಿ ಆರಂಭವಾಗಿರುವ ಭಾರೀ ಸ್ಪರ್ಧೆಯಿಂದಾಗಿ ಉದ್ಯೋಗಿಗಳ ಉದ್ಯೋಗಕ್ಕೂ ಕುತ್ತು ಬಂದಿದ್ದು, ಒಟ್ಟು 75 ಸಾವಿರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ....

2020ರ ವೇಳೆಗೆ ಭಾರತದಲ್ಲಿ ಬರುತ್ತೆ 5ಜಿ: ನೆಟ್ ಸ್ಪೀಡ್ ಎಷ್ಟು ಗೊತ್ತಾ?

2 years ago

ನವದೆಹಲಿ: 2020ರ ವೇಳೆಗೆ ದೇಶದಲ್ಲಿ 5ಜಿ ತಂತ್ರಜ್ಞಾನ ಸೇವೆ ಆರಂಭಗೊಳ್ಳಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಸಮಿತಿ ರಚಿಸಿದೆ. 3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ನಾವು ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿದ್ದೇವು. ಆದರೆ ವಿಶ್ವದಲ್ಲಿ 5ಜಿ ಮಾನದಂಡ ಸಿದ್ಧತೆ ಮಾಡುವ...

ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

2 years ago

ಬೆಂಗಳೂರು: 2016 ಸೆಪ್ಟೆಂಬರ್ ನಲ್ಲಿ ಆರಂಭಗೊಂಡ ರಿಲಿಯನ್ಸ್ ಜಿಯೋಗೆ ಈಗ ಒಂದು ವರ್ಷ ಪೂರ್ಣಗೊಂಡಿದೆ. ಜಿಯೋ ಆರಂಭವಾದ ಬಳಿಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಏನು ಬದಲಾವಣೆಯಾಗಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. 1. ಮೊಬೈಲ್ ಡೇಟಾ ಬಳಕೆ: ಆಗಸ್ಟ್...

ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮುಖೇಶ್ ಅಂಬಾನಿ: ಸಂಪತ್ತು ಎಷ್ಟಿದೆ ಗೊತ್ತಾ?

2 years ago

ಮುಂಬೈ: ಜಿಯೋ ಮೂಲಕ ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಈಗ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮುಖೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ 12.1 ಶತಕೋಟಿ ಡಾಲರ್(ಅಂದಾಜು 77...

ಜಿಯೋಗೆ ಮಾರ್ಚ್ ನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಸೇರ್ಪಡೆ

2 years ago

ನವದೆಹಲಿ: ಮಾರ್ಚ್ ತಿಂಗಳಿನಲ್ಲಿ ಜಿಯೋ ಗೆ ಹೊಸದಾಗಿ 60 ಲಕ್ಷ ಗ್ರಾಹಕರು ಮಾತ್ರ ಸೇರ್ಪಡೆಯಾಗಿದ್ದಾರೆ ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ತಿಳಿಸಿದೆ. ಸೆಪ್ಟೆಂಬರ್‍ನಲ್ಲಿ ಅಧಿಕೃತವಾಗಿ ಬಿಡುಗಡೆಯಾದ ಬಳಿಕದ ಮಾರ್ಚ್ ತಿಂಗಳಿನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದಾರೆ ಎಂದು...