Monday, 22nd July 2019

24 hours ago

ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ

ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಲಿನ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಕುರಿತು ಕ್ಯಾತಸಂದ್ರದ ತಮ್ಮ ನಿವಾಸದಲ್ಲಿ ಪಬ್ಲಿಕ್ ಟಿ.ವಿ ಜೊತೆ ಮಾತನಾಡಿದ ಅವರು, ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ತಾವು ಸೋತಿದ್ದರಿಂದ ಈ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಅವರ ಕುಟುಂಬ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. ಇದರಿಂದ ನಾನು ಕುಗ್ಗಲ್ಲ. ಮತ್ತೇ […]

1 day ago

ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ವಿರುದ್ಧ ಸೇಡು?

ತುಮಕೂರು: ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅನ್ನು ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ ಹೊರಡಿಸಿದೆ. ಸೂಪರ್ ಸೀಡ್ ಆದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಬ್ಯಾಂಕಿನ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸೂಪರ್ ಸೀಡ್ ಮಾಡಿರುವುದನ್ನು ಅಧಿಕೃತವಾಗಿ...

ಎಚ್‌ಡಿಡಿ, ಸಿಎಂಗೆ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆ

6 days ago

ತುಮಕೂರು: ಮಾಜಿ ಪ್ರಧಾನಿ ದೇವೇಗೌಡರು ನಾಯಕ ಸಮುದಾಯದ ನಾಯಕರನ್ನ ತುಳಿಯುವ ಪ್ರಯತ್ನ ಮಾಡಬಾರದು ಎಂದು ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಹಾಗೂ ಸಿಎಂ ಅವರಿಗೆ ನಾಯಕ ಸಮುದಾಯದ ಮತ ಬೇಕು. ಹೀಗಾಗಿ ಕೆ.ಎನ್.ರಾಜಣ್ಣರಂತಹ...

ರೆಸಾರ್ಟ್ ರಾಜಕಾರಣ ವಿರುದ್ಧ ರೈತರಿಂದ ಛೀ.. ಥೂ.. ಚಳುವಳಿ

7 days ago

ತುಮಕೂರು: ರಾಜ್ಯದ ಜನತೆಯ ಹಿತಾಸಕ್ತಿಯನ್ನು ಮರೆತು ಅಧಿಕಾರಕೋಸ್ಕರ ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಜನಪ್ರತಿನಿಧಿಗಳ ವಿರುದ್ಧ ರೈತರು ಛೀ…ಥೂ.. ಚಳುವಳಿ ಕೈಗೊಂಡಿದ್ದಾರೆ. ತುಮಕೂರು ಜಿಲ್ಲೆಯಾದ್ಯಂತ ರಾಜ್ಯ ರೈತ ಸಂಘದ ಕಾರ್ಯಕರ್ತರು ರೆಸಾರ್ಟ್ ರಾಜಕಾರಣ ಮಾಡುತಿರುವ ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಎಲೆ ಅಡಿಕೆಯ ಎಂಜಲನ್ನು ಉಗಿದು...

ರಾವಣ ಅಂತ ಇಡ್ಬೇಕಿತ್ತು, ಅದ್ಯಾಕೋ ಅವ್ರಪ್ಪ ರೇವಣ್ಣ ಎಂದು ಹೆಸ್ರಿಟ್ಟಿದ್ದಾರೆ: ಕೆ.ಎನ್.ರಾಜಣ್ಣ

1 week ago

-ಬಹುಮತ ಸಾಬೀತಿನ ಬಗ್ಗೆ ಸಾವಿತ್ರಮ್ಮ ಚೌಲ್ಟ್ರಿ ಹತ್ರ ಗಿಣಿ ಶಾಸ್ತ್ರ ಕೇಳಿ – ನಾನು ಲಕ್ಷ್ಮಣ ಸವದಿ 25 ವರ್ಷದ ಸ್ನೇಹಿತರು ತುಮಕೂರು: ಹೆಸರು ಮಾತ್ರ ರೇವಣ್ಣ, ಅವರ ಕಾರ್ಯಕ್ರಮವೆಲ್ಲ ರಾವಣನ ರೀತಿ. ರಾವಣ ಎಂದು ಹೆಸರು ಇಡಬೇಕಿತ್ತು. ಅದು ಯಾಕೋ...

ಇಂದಿನ ರಾಜಕೀಯ ಬೆಳವಣಿಗೆಯಲ್ಲಿ ಆಪರೇಷನ್ ಕಮಲದ ಪಾತ್ರವಿಲ್ಲ- ರಾಜಣ್ಣ

2 weeks ago

ತುಮಕೂರು: ಸಿದ್ದರಾಮಯ್ಯರನ್ನು ಮತ್ತೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಮೈತ್ರಿ ಸರ್ಕಾರ ಉಳಿಯಲಿದೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ರಾಜಕೀಯ ಬೆಳವಣಿಗೆಯಲ್ಲಿ ಆಪರೇಷನ್ ಕಮಲದ ಪಾತ್ರವಿಲ್ಲ....

ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವದ ಸೌಂದರ್ಯ ಎಂದ ಖಾದರ್

2 weeks ago

ತುಮಕೂರು: ಮೈತ್ರಿ ಸರ್ಕಾರದ 12 ಜನ ಶಾಸಕರುಗಳು ರಾಜೀನಾಮೆ ನೀಡುತ್ತಿದ್ದಾರಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ “ಇವೆಲ್ಲಾ ಪ್ರಜಾಪ್ರಭುತ್ವದ ಸೌಂದರ್ಯ” ಎಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡಿದ್ದಾರಲ್ಲ ಎಂಬ ಪ್ರಶ್ನೆಗೆ, ಈ ರೀತಿಯ ಕೆಲವು ವಿಚಾರಗಳು ಬರುತ್ತವೆ....

ಕ್ರಿಕೆಟ್ ನಂತ್ರ ಮಕ್ಕಳ ಜೊತೆ ವಾಲಿಬಾಲ್ ಆಡಿದ ಸಿದ್ದಲಿಂಗ ಶ್ರೀ

2 weeks ago

ತುಮಕೂರು: ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತೊಮ್ಮೆ ಮಕ್ಕಳ ಜೊತೆ ಆಟವಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಸಿದ್ದಲಿಂಗ ಶ್ರೀಗಳು ಮಕ್ಕಳ ಜೊತೆ ವಾಲಿಬಾಲ್ ಆಡುವ ಮೂಲಕ ಅವರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಪ್ರತಿ ದಿನ ಮಕ್ಕಳು ಶಾಲೆ ಮುಗಿಸಿ ಮೈದಾನದಲ್ಲಿ ಆಟವಾಡುತ್ತಿದ್ದರು....