Monday, 16th December 2019

7 months ago

ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಗೆಲುವು: ತೇಜಸ್ವಿನಿ ಅನಂತ್‍ಕುಮಾರ್

ಬೆಂಗಳೂರು: ಈ ಬಾರಿಯೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ ಎಂದು ದಿ.ಅನಂತ್‍ಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1991ರಲ್ಲಿ ಅನಂತ್‍ಕುಮಾರ್ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟವನ್ನು ಹಾರಿಸಿದ್ದರು. 1996ರಿಂದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅನಂತ್‍ಕುಮಾರ್ ತಮ್ಮ ಪರಿಶ್ರಮ ಮತ್ತು ಸ್ವಚ್ಛ ಆಡಳಿತದಿಂದಾಗಿ 6 ಬಾರಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದರು. ಸದ್ಯ ಸ್ಪರ್ಧೆ ಮಾಡಿರುವ ತೇಜಸ್ವಿ ಸೂರ್ಯ ಅವರಿಗೆ ಒಳ್ಳೆಯದಾಗಲಿ ಎಂದು ಶುಭಕೋರಿ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್ ಮಾಡಿದ್ದಾರೆ. […]

8 months ago

ರಾಜ್ಯ ರಾಜಕಾರಣದಲ್ಲಿ ಡಿಎನ್‍ಎ ದಂಗಲ್? – ಮೋದಿ ಬಂದಾಗ ಸಾಲು ಸಾಲು ಡಿಎನ್‍ಎ ಪ್ರತ್ಯಕ್ಷ!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ‘ಡಿಎನ್‍ಎ’ ದಂಗಲ್ ಆರಂಭವಾಗಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಸ್ವಾಗತಿಸಿದ ‘ಡಿಎನ್‍ಎ’ ನಾಯಕರಿಂದಾಗಿ ಈ ಪ್ರಶ್ನೆ ಈಗ ಎದ್ದಿದೆ. ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡದ ಸಂಬಂಧ ಕೇಳಲಾದ ಪ್ರಶ್ನೆಗೆ, ಪಕ್ಷ ಸಂಘಟನೆ ಮುಖ್ಯ. ಡಿಎನ್‍ಎಗಳನ್ನು ನೋಡಿ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು...

ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ

9 months ago

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ನಗರದ  ಬನಶಂಕರಿಗೆ ಅಮಿತ್ ಶಾ ಅವರು ರಾತ್ರಿ 9 ಗಂಟೆಗೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಮೊಬೈಲ್ ಲೈಟ್ ಆನ್ ಮಾಡಿ ಅವರನ್ನು...

ನಮ್ಮಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಎಂಬ ಭೇದಭಾವವಿಲ್ಲ: ಬಿಎಸ್‍ವೈ

9 months ago

– ತೇಜಸ್ವಿನಿ, ರಮೇಶ್ ಕತ್ತಿಗೆ ಸೂಕ್ತ ಸ್ಥಾನಮಾನ ಕೊಡಲಾಗುತ್ತೆ – ಮೊದಲು ತುಮಕೂರಿನಲ್ಲಿ ಗೆದ್ದು ಬನ್ನಿ, ಆಮೇಲೆ ಮಾತಾಡಿ ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರಿಗೆ ಟಿಕೆಟ್ ಕೊಡುವಲ್ಲಿ ವ್ಯತ್ಯಾಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ನಗರದ...

ಕರ್ನಾಟಕದಲ್ಲಿ 7 ಮೋದಿ ರ‍್ಯಾಲಿ – ಏ.8ಕ್ಕೆ ಮೈಸೂರು, ಚಿತ್ರದುರ್ಗದಲ್ಲಿ ಪ್ರಚಾರ

9 months ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ಮತ್ತು ಚಿತ್ರದುರ್ಗದಲ್ಲಿ ಏಪ್ರಿಲ್ 8 ರಂದು ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ...

ತೇಜಸ್ವಿನಿ ಅನಂತ್‍ಕುಮಾರ್ ಟಿಕೆಟ್ ಕೈತಪ್ಪಿದಕ್ಕೆ ಕಾರಣವೇನು ಎಂಬುವುದು ಗೊತ್ತಾಗಬೇಕು: ವಿ ಸೋಮಣ್ಣ

9 months ago

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ ಹಿಂದಿನ ಕಾರಣವೇನು ಎಂಬುವುದು ಗೊತ್ತಾಗಬೇಕಿದೆ ಎಂದು ಪಕ್ಷದ ಮುಖಂಡ ವಿ ಸೋಮಣ್ಣ ಹೇಳಿದ್ದಾರೆ. ಬಸವನಗುಡಿಯ ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ...

ಮೈತ್ರಿ ಸರ್ಕಾರ ಪತನವಾಗುತ್ತೆ ಅಂತ ಎರಡು ಗೂಳಿಗಳು ಒಂದಾಗಿವೆ: ಈಶ್ವರಪ್ಪ ವ್ಯಂಗ್ಯ

9 months ago

ಬಾಗಲಕೋಟೆ: ಮುಂಚೆ ಹಾವು ಮುಂಗಸಿ ರೀತಿಯಲ್ಲಿದ್ದ ಗೂಳಿಗಳು ಈಗ ಒಂದಾಗಿವೆ. ಮೈತ್ರಿ ಸರ್ಕಾರ ಪತನವಾಗುತ್ತೆ ಅಂತಾ ಎರಡು ಗೂಳಿಗಳು ಜಾಗೃತಿಯಾಗಿ ಒಂದಾಗಿವೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತೇವೆ ಅಂತ ಸಿಎಂ ಕುಮಾರಸ್ವಾಮಿ, ಮಂತ್ರಿ ಸ್ಥಾನ ಕಳೆದುಕೊಂಡರೆ ಭವಿಷ್ಯ ಮುಗೀತು ಅಂತ ಸಚಿವ ಡಿಕೆ...

ತೇಜಸ್ವಿ ಸೂರ್ಯ ಯಾರ ಆಯ್ಕೆ ಗೊತ್ತಿಲ್ಲ: ಆರ್.ಅಶೋಕ್

9 months ago

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಯಾರ ಆಯ್ಕೆ ಗೊತ್ತಿಲ್ಲ. ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಬಸವನಗುಡಿಯಲ್ಲಿರುವ ತೇಜಸ್ವಿನಿ ಅನಂತ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ...