Wednesday, 19th June 2019

Recent News

1 week ago

15,000 ಟನ್ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿ ಗೆದ್ದ ಭಾರತೀಯ ಬಾಲೆ

ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. […]