Tuesday, 18th June 2019

Recent News

7 days ago

15,000 ಟನ್ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿ ಗೆದ್ದ ಭಾರತೀಯ ಬಾಲೆ

ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ. ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. […]

2 weeks ago

ದುಬೈಯಲ್ಲಿ ಬಸ್ ಅಪಘಾತ – 8 ಭಾರತೀಯರು ಸೇರಿ 17 ಮಂದಿ ಸಾವು

ದುಬೈ: ಬಸ್ಸೊಂದು ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಭಾರತೀಯರು ಸೇರಿದಂತೆ 17 ಜನರು ಮೃತಪಟ್ಟ ಘಟನೆ ದುಬೈನಲ್ಲಿ ನಡೆದಿದೆ. ರಾಜಗೋಪಾಲನ್, ಫಿರೋಜ್ ಖಾನ್ ಪಠಾಣ್, ರೆಶ್ಮಾ ಫಿರೋಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದೀನ್ ಅರಕ್ಕವೀತಿಲ್, ಕಿರಣ್ ಜಾನಿ, ವಾಸುದೇವ್ ಮತ್ತು ತಿಲಕ್ರಂ ಜವಾಹರ್ ಠಾಕೂರ್ ಮೃತ ಭಾರತೀಯರು ಎಂದು...

ಬಿಸಿಸಿಐ ವಿರುದ್ಧ ಐಸಿಸಿಗೆ ದೂರು ನೀಡಿದ್ದ ಪಾಕ್‍ಗೆ ಬಿತ್ತು ಭಾರೀ ದಂಡ

3 months ago

ದುಬೈ: ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಯಲ್ಲಿ ಬಿಸಿಸಿಐ ವಿರುದ್ಧ ದೂರಿನ ಪ್ರಕರಣದಲ್ಲಿ ಸೋಲುಂಡಿದ್ದು,ಪರಿಣಾಮ 1.6 ಮಿಲಿಯನ್ ಡಾಲರ್ (ಸುಮಾರು 11 ಕೋಟಿ ರೂ.) ದಂಡವನ್ನು ಬಿಸಿಸಿಐಗೆ ಪಾವತಿಸಿದೆ. ಈ ಕುರಿತು ಪಾಕಿಸ್ತಾನದ ಕ್ರಿಕೆಟ್ ಬೋರ್ಡಿನ ಅಧ್ಯಕ್ಷ ಈಶನ್ ಮಣಿ ಮಾಹಿತಿ...

ಆರ್ಮಿ ಕ್ಯಾಪ್ ಧರಿಸಿದಕ್ಕೆ ಬಿಸಿಸಿಐ ವಿರುದ್ಧ ದೂರು – ಐಸಿಸಿ ಎದುರು ಪಾಕಿಗೆ ಮುಖಭಂಗ!

3 months ago

ದುಬೈ: ಆಸ್ಟ್ರೇಲಿಯಾ ವಿರುದ್ಧದ ರಾಂಚಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ವಿಶೇಷ ಆರ್ಮಿ ಕ್ಯಾಪ್ ಧರಿಸಿ ಆಡಿರುವುದರ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಧಿಕೃತವಾಗಿ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಪಾಕಿಸ್ತಾನ ನಿಲುವಿಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ...

ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಮೀನುಗಾರರು ದುಬೈನಲ್ಲಿ ಪತ್ತೆ?

4 months ago

ಉಡುಪಿ: ಮಲ್ಪೆಯ ಕಡಲ ಬಂದರಿನಿಂದ ನಾಪತ್ತೆಯಾಗಿದ್ದ 7 ಮೀನುಗಾರರು ದುಬೈನಲ್ಲಿ ಪತ್ತೆಯಾಗಿರುವ ಮಾಹಿತಿ ಲಭಿಸಿದೆ ಎಂದು ಬಿಜೆಪಿ ಸಂಸದೆ, ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ತಿಳಿಸಿದ್ದಾರೆ. ನಮೋ ಭಾರತ್ ಸಂಘಟನೆಯಿಂದ ಪಾಂಚಜನ್ಯ ಸಮಾವೇಶ ವೇಳೆ ಭಾಷಣ ಮಾಡಿದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು,...

ಮತ್ತೊಂದು ಚಾನ್ಸ್: ಐಸಿಸಿ ಕ್ರಿಕೆಟ್ ಕಮಿಟಿ ಅಧ್ಯಕ್ಷರಾಗಿ ಅನಿಲ್ ಕುಂಬ್ಳೆ

4 months ago

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಕಮಿಟಿ ಅಧ್ಯಕ್ಷರಾಗಿ ಟೀಂ ಇಂಡಿಯಾ ಮಾಜಿ ಆಟಗಾರ, ಕನ್ನಡಿಗ ಅನಿಲ್ ಕುಂಬ್ಳೆ ಮತ್ತೊಮ್ಮೆ ಆಯ್ಕೆ ಆಗಿದ್ದಾರೆ. ದುಬೈನಲ್ಲಿ ನಡೆದ 6 ದಿನಗಳ ಐಸಿಸಿಯ ಸಭೆಯಲ್ಲಿ ಈ ನಿರ್ಣಯವನ್ನು ಮಾಡಲಾಗಿದೆ. ಈಗಾಗಲೇ 2 ಅವಧಿಗಳಲ್ಲಿ ಐಸಿಸಿ ಸಮಿತಿಯ ಅಧ್ಯಕ್ಷರಾಗಿರುವ...

ಬಾಂಗ್ಲಾದಲ್ಲಿ ವಿಮಾನ ಹೈಜಾಕ್ ಯತ್ನ – ತುರ್ತು ಲ್ಯಾಂಡಿಂಗ್, ಪ್ರಯಾಣಿಕರ ರಕ್ಷಣೆ

4 months ago

ಢಾಕಾ: ಪುಲ್ವಾಮಾ ದಾಳಿಯ ಬಳಿಕ ಭಾರತ ವಿಮಾನ ಹೈಜಾಕ್ ಮಾಡಲಾಗುವುದು ಎನ್ನುವ ಬೆದರಿಕೆ ಬಂದ ಬೆನ್ನಲ್ಲೇ ಬಾಂಗ್ಲಾದೇಶದ ದುಬೈ ಮೂಲದ ವಿಮಾನವನ್ನು ಅಪಹರಿಸುವ ಪ್ರಯತ್ನ ನಡೆದಿದೆ. ಹೈಜಾಕ್ ಮಾಡಲು ಯತ್ನಿಸಿದ ಪರಿಣಾಮ ಬಾಂಗ್ಲಾದೇಶದ ಚಿತ್ತಗಾಂಗ್ ಶಾ ಅಮಾನತ್ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ...

ಐಸಿಸಿ ರ‍್ಯಾಂಕಿಂಗ್‌- ಸ್ಮೃತಿ ಮಂದಾನಗೆ ನಂ.1 ಪಟ್ಟ

5 months ago

ದುಬೈ: ಏಕದಿನ ಕ್ರಿಕೆಟ್ ರನ್ ಗಳಿಕೆಯಲ್ಲಿ ಅಮೋಘ ಸಾಧನೆ ಮಾಡಿದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ 751 ಅಂಕಗಳೊಂದಿಗೆ ನಂ.1 ಸ್ಥಾನ ಪಡೆದಿದ್ದಾರೆ. ಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮೂರು...