Tuesday, 22nd October 2019

Recent News

5 months ago

ನಗರಸಭೆ ಚುನಾವಣೆಗೂ ಮುನ್ನವೇ ಖಾತೆ ತೆರೆದ ಜೆಡಿಎಸ್!

ಚಿತ್ರದುರ್ಗ: ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ […]

1 year ago

ವೋಟ್ ಹಾಕದವರು ಮತ ಕೇಳಲು ಅರ್ಹರಲ್ಲ: ರಮ್ಯಾ ವಿರುದ್ಧ ಕೈ ಕಾರ್ಯಕರ್ತರ ಕಿಡಿ

ಮಂಡ್ಯ: ಮತದಾನ ಮಾಡದವರು, ಚುನಾವಣೆಗೆ ನಿಲ್ಲಲು ಅಥವಾ ಮತ ಕೇಳಲು ಅರ್ಹರಲ್ಲ ಎಂದು ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಂಸದೆ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ. ಇಂದು ನಡೆದ ನಗರಸಭೆ ಚುನಾವಣೆಯಲ್ಲಿ ಕೊನೆಗೂ ಮತದಾನ ಮಾಡದ ರಮ್ಯಾ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ. ಮಂಡ್ಯ ನಗರಸಭೆಯ 11 ನೇ ವಾರ್ಡ್ ವ್ಯಾಪ್ತಿಯಲ್ಲಿ ಸಂಸದೆ ರಮ್ಯಾ...