Sunday, 16th June 2019

6 days ago

ಗಿರೀಶ್ ಕಾರ್ನಾಡ್ ಕೊನೆಯ ಆಸೆಯಂತೆ ಅಂತ್ಯಕ್ರಿಯೆ

ಬೆಂಗಳೂರು: ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು […]

1 month ago

ಅಳಿವಿನಂಚಿನಲ್ಲಿರುವ ಗ್ರಾಮೀಣ ರಂಗಕಲೆಗೆ ಜೀವ ತುಂಬಿದ ಜನಪ್ರತಿನಿಧಿಗಳು

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೋಡಿಗೆ ಒಳಗಾಗಿರುವ ಯುವಕರನ್ನು ಪೌರಾಣಿಕತೆ ಕಡೆಗೆ ಮುಖಮಾಡಲು ನೆಲಮಂಗಲದ ಗ್ರಾಮಪಂಚಾಯತ್ ಸದಸ್ಯರ ತಂಡವೊಂದು ವಿಭಿನ್ನ ಪ್ರಯತ್ನ ಮಾಡಿದೆ. ಅಳಿವಿನಂಚಿನಲ್ಲಿರುವ ಗ್ರಾಮೀಣ ಪೌರಾಣಿಕ ರಂಗಕಲೆಗೆ ಯುವಕರು ಒತ್ತು ನೀಡಿದ್ದಾರೆ. ಅಲ್ಲದೆ ಮಹಾಭಾರತದ ನೀತಿಸಾರುವ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ಅಭಿನಯಿಸಿದ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಾಟಕದ ನಡುವೆಯು ಶಿಕ್ಷಣದ ಮಹತ್ವ...

ಅಸಭ್ಯ ವರ್ತನೆ- ನಾಟಕ ಕಲಾವಿದೆಯಿಂದ ಯುವಕನಿಗೆ ಚಪ್ಪಲಿ ಏಟು!

2 months ago

ಬಾಗಲಕೋಟೆ: ನಾಟಕ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಲಾವಿದೆ ಜೊತೆ ಅನುಚಿತವಾಗಿ ವರ್ತಿಸಿದ ಯುವಕನೊಬ್ಬ ಚಪ್ಪಲಿ ಏಟು ತಿಂದ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಹಿಪ್ಪರಗಿ ಗ್ರಾಮದಲ್ಲಿ “ಸೇಡಿಗಾಗಿ ಸಿಡಿದೆದ್ದ ಬಡವ” ಎಂಬ ನಾಟಕ ಪ್ರದರ್ಶನ...

ನಾಟಕದ ವೇದಿಕೆಯ ಮೇಲೆಯೇ ಮೈ ಮರೆತು ಜೋಡಿಯಿಂದ ಲಿಪ್‍ಲಾಕ್

2 months ago

ಭೋಪಾಲ್: ಜೋಡಿಯೊಂದು ವೇದಿಕೆಯ ಮೇಲೆ ನಾಟಕವಾಡುವಾಗ ಕಿಸ್ ಮಾಡುವ ದೃಶ್ಯವಿಲ್ಲದಿದ್ದರೂ ಮೈ-ಮರೆತೂ ಒಬ್ಬರಿಗೊಬ್ಬರು ಲಿಕ್‍ಲಾಕ್ ಮಾಡಿರುವ ಘಟನೆ ನಡೆದಿದೆ. ಭೋಪಾಲ್ ನ ರವೀಂದ್ರ ರಂಗಮಂದಿರದಲ್ಲಿ ಈ ಘಟನೆ ನಡೆದಿದೆ. ರೋಮಿಯೋ-ಜೂಲಿಯಟ್ ನಾಟಕದ ದೃಶ್ಯದ ವೇಳೆ ಲಿಪ್ ಲಾಕ್ ಮಾಡಲಾಗಿದೆ. ನಿಶಾಂತ್ ರಘವಂಶಿ...

ಶಾಸಕನ ಶ್ರೀಕೃಷ್ಣನ ಪಾತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ

2 months ago

ಕೋಲಾರ: ಇಷ್ಟು ದಿನ ಜನಪ್ರತಿನಿಧಿಗಳು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಜನರ ಗಮನ ಸೆಳೆದಿದ್ದರು. ಆದ್ರೆ ಈಗ ಶಾಸಕರೊಬ್ಬರು ನಾಟಕವೊಂದಕ್ಕೆ ಬಣ್ಣ ಹಚ್ಚಿ ಶ್ರೀಕೃಷ್ಣನ ಪಾತ್ರದಲ್ಲಿ ಸಖತ್ ಮಿಂಚಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದ ಪೌರಾಣಿಕ ನಾಟಕದಲ್ಲಿ ಇಲ್ಲಿನ...

ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು

4 months ago

ಚಿತ್ರದುರ್ಗ: ಪೊಲೀಸರು ಅಂದರೆ ಕೇವಲ ಕಾನೂನು ಪಾಲಕರು ಅಷ್ಟೇ ಅಂತ ಭಾವಿಸಿದ್ದೇವೆ. ಆದರೆ ಪೊಲೀಸರಲ್ಲೂ ಅದ್ಭುತ ಕಲಾವಿದರಿದ್ದಾರೆ ಎಂಬುದನ್ನ ಚಿತ್ರದುರ್ಗ ಪೊಲೀಸರು ಸಾಬೀತುಪಡಿಸಿದ್ದಾರೆ. ದಿನ ನಿತ್ಯ ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಅವರ ದೈನಂದಿನ ಒತ್ತಡದ ಬದುಕನ್ನು ಬದಿಗಿಟ್ಟು, ಮುಖಕ್ಕೆ ಬಣ್ಣ ಹಚ್ಚಿ...

ನಷ್ಟದಲ್ಲಿದ್ದ ನಾಟಕ ಕಂಪನಿಯ ಕೈ ಹಿಡಿದ ನಟಿ ಉಮಾಶ್ರೀ – ದೊಡ್ಡಬಳ್ಳಾಪುರದಲ್ಲಿ ಹೌಸ್‍ಫುಲ್ ಪ್ರದರ್ಶನ

6 months ago

ಚಿಕ್ಕಬಳ್ಳಾಪುರ: ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮಾಜಿ ಸಚಿವೆ ಉಮಾಶ್ರೀ ಅವರು ನಷ್ಟದಲ್ಲಿದ್ದ ನಾಟಕ ಕಂಪನಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮತ್ತೆ ಚಾಮುಂಡೇಶ್ವರಿ ಪಾತ್ರಕ್ಕೆ ಬಣ್ಣ ಹಚ್ಚಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಮೂಲತಃ ರಂಗಭೂಮಿ ಕಲಾವಿದೆಯಾಗಿರುವ ಉಮಾಶ್ರೀ ಅವರು, ಕುಮಾರೇಶ್ವರ ನಾಟಕ ಮಂಡಳಿಯ...

9.6 ಲಕ್ಷ ದರೋಡೆಯ ನಾಟಕವಾಡಿ ಕೊನೆಗೆ ತಾನೇ ಪೊಲೀಸ್ ಬಲೆಗೆ ಬಿದ್ದ!

6 months ago

ಹಾಸನ: ದರೋಡೆ ನಾಟಕವಾಡಿ 9.5 ಲಕ್ಷ ರೂ. ಹಣವನ್ನು ಗುಳುಂ ಮಾಡಲು ಕ್ರಿಮಿನಲ್ ಐಡಿಯಾ ಮಾಡಿದ್ದ ಚಾಲಕಿ ವ್ಯಕ್ತಿಯೊಬ್ಬ ತಾನೇ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ಹೊರವಲಯದ ಹೊಸ ಕೊಪ್ಪಲು ನಿವಾಸಿಯಾಗಿರುವ ಕೋಳಿ ಫಾರಂ...