Sunday, 21st July 2019

8 months ago

ಪ್ರಾರ್ಥನಾ ಮಂದಿರದಲ್ಲಿ ಬಾಂಬ್ ಸ್ಫೋಟ- ಮೂವರ ಸಾವು

ಚಂಡೀಗಢ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಂಜಾಬ್‍ನ ಅಮೃತಸರ ಸಮೀಪದ ರಾಜಸಾನ್ಸಿ ಗ್ರಾಮದಲ್ಲಿ ಇಂದು ನಡೆದಿದೆ. ಅಮೃತಸರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 8 ಕಿ.ಮೀ. ಅಂತರದಲ್ಲಿ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ 10 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದಂತೆ ಮೂವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಐಜಿ ಸುರೇಂದ್ರ ಪಾಲ್ ಸಿಂಗ್ ಪರ್ಮರ್ ತಿಳಿಸಿದ್ದಾರೆ. ಆಗಿದ್ದೇನು?: ಪ್ರತಿ ಭಾನುವಾರ 500ಕ್ಕೂ ಹೆಚ್ಚು ಜನರು ನಿರಂಕಾರಿ […]

8 months ago

ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ: ಪ್ರಯಾಣಿಕರು ಪಾರು, ಟ್ರ್ಯಾಕ್ಟರ್ ಚಾಲಕ ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಭಾರೀ ಅನಾಹುತ ತಪ್ಪಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾನಗಲ್ ತಾಲೂಕು ಆಡೂರು ಗ್ರಾಮದ ಮೈನುದೀನ್ (26) ಮೃತ ಚಾಲಕ. ಶಿಗ್ಗಾಂವಿ ತಾಲೂಕು ನೀರಲಗಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ...