Sunday, 22nd September 2019

2 weeks ago

ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

ಹಾಸನ: ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಸೆಪ್ಟಂಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಲಾಗಿದೆ. ದೂರುದಾರ ಮಾಜಿ ಸಚಿವ ಎ.ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಅವರು ಪ್ರತ್ಯೇಕವಾಗಿ ದಾಖಲಿಸಿರುವ ಪ್ರಕರಣಗಳ ವಿಚಾರಣೆಗೆ ಸೆ.30ರಂದು ಬೆಳಗ್ಗೆ 10.30ಕ್ಕೆ ಖುದ್ದಾಗಿ ಇಲ್ಲವೇ ವಕೀಲರ ಮೂಲಕ ಹಾಜರಾಗುವಂತೆ […]

1 month ago

ಟೆಲಿಫೋನ್ ಕದ್ದಾಲಿಕೆ ಹೇಳಿಕೆ- ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಮಾಜಿ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ತಾವು ಯಾವುದೇ ಹೇಳಿಕೆ ನೀಡಿಲ್ಲ. ಆದರೆ ತಾವು ಮಾಜಿ ಗೃಹ ಸಚಿವ ಆರ್. ಅಶೋಕ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ್ದ ಆರೋಪವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಟೆಲಿಪೋನ್ ಕದ್ದಾಲಿಕೆ ವಿಚಾರದಲ್ಲಿ...