Saturday, 20th July 2019

Recent News

2 days ago

ವೈದ್ಯರ ಮೇಲೆ ಹಲ್ಲೆ – ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಬಂದ್

ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ರೋಗಿಯ ಸಂಬಂಧಿಕರು ವೈದ್ಯ ಡಾ.ಅರ್ಜುನ್ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ಖಂಡಿಸಿ ಇಂದು […]

6 days ago

ರೆಸಾರ್ಟ್ ರಾಜಕಾರಣದ ವಿರುದ್ಧ ಏಕಾಂಗಿಯಾಗಿ ವೃದ್ಧನಿಂದ ಪ್ರತಿಭಟನೆ

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯವನ್ನು ವಿರೋಧಿಸಿ ವೃದ್ಧರೊಬ್ಬರು ಮೈಕ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆಯ ಅಶೋಕ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದ ಮಂಜುನಾಥಯ್ಯ, ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಪರದಾಡುವಂತಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ರಾಜ್ಯದಲ್ಲಿ ಈ...

ಕರ್ನಾಟಕ, ಗೋವಾ ರಾಜಕೀಯ ಹೈಡ್ರಾಮ ಖಂಡಿಸಿ ಸೋನಿಯಾ, ರಾಹುಲ್ ಪ್ರತಿಭಟನೆ

1 week ago

– ಬಿಜೆಪಿ ವಿರುದ್ಧ ಸಂಸತ್ತಿನ ಮುಂದೆ ಕೈ ಸಂಸದರ ಪ್ರತಿಭಟನೆ ನವದೆಹಲಿ: ಕರ್ನಾಟಕ ಹಾಗೂ ಗೋವಾದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮವನ್ನು ಖಂಡಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ಸಿನ ಈ ಪರಿಸ್ಥಿತಿಗೆ ಬಿಜೆಪಿಯೇ ಕಾರಣವೆಂದು...

ನನ್ನನ್ನು ಬಲವಂತವಾಗಿ ಹೊರ ಹಾಕಿದ್ದಾರೆ – ಮುಂಬೈ ಪೊಲೀಸರ ವಿರುದ್ಧ ಡಿಕೆಶಿ ಕಿಡಿ

1 week ago

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಲು ಬಂದಿದ್ದ ನನ್ನನ್ನು ಮುಂಬೈ ಪೊಲೀಸರು ಬಲವಂತವಾಗಿ ಹೊರ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಬರುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ನಮ್ಮ ಶಾಸಕರನ್ನು ಭೇಟಿ ಮಾಡಲು ಬಂದಿದ್ದೆವು. ಅಲ್ಲಿದ್ದ...

ನಾಗೇಶ್ ಫೋಟೋ ಮೇಲೆ ಹಣ ಚೆಲ್ಲಿ, ಚಪ್ಪಲಿಯಿಂದ ಹೊಡೆದ ರೈತರು

1 week ago

ಕೋಲಾರ: ಮುಳಬಾಗಿಲು ಪಕ್ಷೇತರ ಶಾಸಕ ಎಚ್.ನಾಗೇಶ್ ವಿರುದ್ಧ ಕ್ಷೇತ್ರದ ಜನರು ರೊಚ್ಚಿಗೆದ್ದಿದ್ದು, ಶಾಸಕರ ಫೋಟೋಗೆ ಚಪ್ಪಲಿಯಿಂದ ಹೊಡೆದು ಹಣವನ್ನು ಚೆಲ್ಲಿ ವಿಚಿತ್ರವಾಗಿ ಪ್ರತಿಭಟನೆ ಮಾಡಿದ್ದಾರೆ. ಅಧಿಕಾರದ ಆಸೆಗೆ ಹಣ ಪಡೆದು ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಎಂದು ಶಾಸಕ ನಾಗೇಶ್ ವಿರುದ್ಧ ಆರೋಪಿಸಿ,...

ಸ್ಪೀಕರ್ ಮೇಲೆ ಒತ್ತಡ ಹೇರಲು ಬಿಜೆಪಿ ತಂತ್ರ – ರಾಜಭವನಕ್ಕೆ ಮುತ್ತಿಗೆ ಹಾಕಲು `ಕೈ’ ಪ್ಲಾನ್

1 week ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿದ್ದರೆ ಇತ್ತ ಇಷ್ಟು ದಿನ ತೆರೆಮರೆಯಲ್ಲಿ ನಿಂತು ದಾಳ ಉರುಳಿಸುತ್ತಿದ್ದ ಬಿಜೆಪಿ ಇಂದಿನಿಂದ ಅಧಿಕೃತವಾಗಿ ಅಖಾಡಕ್ಕೆ ಇಳಿಯುತ್ತಿದೆ. ಸ್ಪೀಕರ್ ಮೇಲೆ ಒತ್ತಡ ಹೇರುವ ಸಲುವಾಗಿ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ...

ಸೊಫಿಟೆಲ್ ಹೋಟೆಲ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

2 weeks ago

ಮುಂಬೈ: ಸಮ್ಮಿಶ್ರ ಸರ್ಕಾರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಿಜೆಪಿ ಶಾಸಕರನ್ನು ಖರೀದಿಸುವ ಮೂಲಕ ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ಆರೋಪಿಸಿ ಮುಂಬಯಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು...

ರೈತರಿಂದ ಖರೀದಿಸಿದ ಬೆಳೆಯ ಹಣ ಸರ್ಕಾರ ನೀಡಿದ್ರೂ ಬ್ಯಾಂಕ್ ನೀಡ್ತಿಲ್ಲ

2 weeks ago

ಯಾದಗಿರಿ: ಸರ್ಕಾರದಿಂದ ರೈತರ ಖಾತೆಗೆ ತೊಗರಿ ಮಾರಾಟದ ಹಣ ಜಮೆ ಆಗಿದ್ದರೂ ಬ್ಯಾಂಕ್ ಅಧಿಕಾರಿಗಳು ರೈತರಿಗೆ ನೀಡುತ್ತಿಲ್ಲ, ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಕೊಡೆಕಲ್‍ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ನೂರಾರು...