Wednesday, 18th September 2019

Recent News

18 hours ago

ತಾಯಿ ಜೊತೆ ಭೋಜನ ಸೇವಿಸಿ ಹುಟ್ಟುಹಬ್ಬ ಆಚರಿಸಿದ ಮೋದಿ

ಗಾಂಧಿನಗರ: ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದು, ಅವರ ತಾಯಿ ಹೀರಾಬೆನ್ ಅವರ ಮನೆಗೆ ಭೇಟಿ ನೀಡಿ, ಅವರೊಂದಿಗೆ ಭೋಜನ ಸೇವಿಸಿದ್ದಾರೆ. ಇಂದು ಬೆಳಗ್ಗೆ ಸರ್ದಾರ್ ಸರೋವರ ಅಣೆಕಟ್ಟು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದರು. ನಂತರ ಗುಜರಾತ್‍ನ ಗಾಂಧಿನಗರದಲ್ಲಿರುವ ತಾಯಿ ಹೀರಾಬೆನ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಮಧ್ಯಾಹ್ನದ ಊಟವನ್ನು ಮಾಡುವ ಮೂಲಕ ತಮ್ಮ 69ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. Gujarat: Prime Minister Narendra Modi meets his mother Heeraben […]

21 hours ago

ಮೋದಿ ಹುಟ್ಟುಹಬ್ಬ – ಬೆಂಬಲಿಗರೊಂದಿಗೆ ಐಸಿಯುಗೆ ನುಗ್ಗಿ ರೋಗಿಗಳಿಗೆ ಹಣ್ಣು ವಿತರಿಸಿದ ಸಚಿವ ಪ್ರಭು ಚೌವ್ಹಾಣ್

ಬೀದರ್: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಗಮನಸೆಳೆಯುತ್ತಿದ್ದಾರೆ. ಅದೇ ರೀತಿ ರೋಗಿಗಳಿಗೆ ಹಣ್ಣು ಹಂಚುವ ಸಂದರ್ಭದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಎಡವಟ್ಟು ಮಾಡಿದ್ದು, ಹತ್ತಾರು ಬೆಂಬಲಿಗರೊಂದಿಗೆ ತುರ್ತುನಿಗಾ ಘಟಕ(ಐಸಿಯು)ಕ್ಕೆ ನುಗ್ಗಿ ಹಣ್ಣು ಹಂಚಿದ್ದಾರೆ. ಮೋದಿ ಜನ್ಮ ದಿನ ಆಚರಣೆ ಅಂಗವಾಗಿ...

ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ – ಮಮತಾ ಬ್ಯಾನರ್ಜಿ

3 days ago

ಕೊಲ್ಕತ್ತಾ: ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದ್ದು, ಸಂವಿಧಾನ ಕೊಡಮಾಡಿದ ಹಕ್ಕು ಹಾಗೂ ಸ್ವಾತಂತ್ರ್ಯ ರಕ್ಷಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಶುಭಕೋರಿ ಟ್ವೀಟ್ ಮಾಡಿರುವ...

ಪ್ರಧಾನಿ ಮೋದಿ ಹಾದಿ ಅನುಸರಿಸಿದ ಸಚಿವ ಸುರೇಶ್ ಕುಮಾರ್

4 days ago

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅನುಸರಿಸುತ್ತಿದ್ದಾರಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿದೆ. ಪ್ರಧಾನಿ ಮೋದಿ 2019ರ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕೇದಾರನಾಥ ದೇವಾಲಯ...

100 ಕೋಟಿ ನೀಡಿದ್ರೆ ಬಿಜೆಪಿಯಲ್ಲಿ ಮಂತ್ರಿ ಸ್ಥಾನ – ಉಗ್ರಪ್ಪ ಆರೋಪ

4 days ago

ಬಳ್ಳಾರಿ: ನೂರು ಕೋಟಿ ಕೊಟ್ಟರೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಬಹುದು. ಬಿಜೆಪಿಯಲ್ಲಿ ಮಂತ್ರಿ ಸ್ಥಾನ, ಉಪಮುಖ್ಯಮಂತ್ರಿ ಸ್ಥಾನ ವ್ಯಾಪಾರಕ್ಕಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ಕೋಟಿ ಕೊಟ್ಟರೆ...

ಪ್ರಧಾನಿ ಮೋದಿ ಬಂದಿದ್ದೇ ಇಸ್ರೋಗೆ ಅಪಶಕುನ: ಎಚ್‍ಡಿಕೆ

6 days ago

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬಂದಿದ್ದೇ ಇಸ್ರೋಗೆ ಅಪಶಕುನ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಪ್ರಚಾರಕ್ಕಾಗಿ ಚಂದ್ರಯಾನ್-2ನ ವಿಕ್ರಂ ಲ್ಯಾಂಡರ್ ಚಂದ್ರಸ್ಪರ್ಶದ ವೇಳೆ ಇಸ್ರೋ ಕಚೇರಿಗೆ...

ಪಿಕ್ಚರ್ ಅಭಿ ಬಾಕಿ ಹೈ – ಭ್ರಷ್ಟಾಚಾರಿಗಳ ವಿರುದ್ಧ ಮೋದಿ ಗುಡುಗು

6 days ago

– ಮೋದಿ ಸರ್ಕಾರಕ್ಕೆ ನೂರರ ಸಂಭ್ರಮ ರಾಂಚಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಅವಧಿಯ ಆಡಳಿತ 100 ದಿನಗಳನ್ನು ಪೂರೈಸಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ರಾಂಚಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದೇ...

ಮಹಿಳೆಯರೊಂದಿಗೆ ಕಸದಿಂದ ಪ್ಲಾಸ್ಟಿಕ್ ಹೆಕ್ಕಿದ ಪ್ರಧಾನಿ

7 days ago

ಮಥುರಾ: ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ಲಾಸ್ಟಿಕ್ ಬೇರ್ಪಡಿಸುವ ಮಹಿಳೆಯರೊಂದಿಗೆ ಕುಳಿತು ಕಸದಿಂದ ಪ್ಲಾಸ್ಟಿಕ್ ವಸ್ತುಗಳನ್ನು ಬೇರ್ಪಡಿಸಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಇಂದು...