Sunday, 22nd July 2018

Recent News

2 weeks ago

30ಕ್ಕೂ ಅಧಿಕ ಪ್ರಯಾಣಿಕರಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರು: ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ಬೆಂಗಳೂರಿನಿಂದ ಮಾಲೂರಿಗೆ ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಬಸ್ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

3 weeks ago

ಸರ್ಕಾರಿ ಬಸ್ ಹಳ್ಳಕ್ಕೆ ಉರುಳಿ 11 ಮಂದಿಗೆ ಗಾಯ!

ಹಾವೇರಿ: ಸರ್ಕಾರಿ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು ಹನ್ನೊಂದು ಜನರಿಗೆ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಹಿರೇಮೊರಬ ಗ್ರಾಮದ ಬಳಿ ನಡೆದಿದೆ. 11 ಜನ ಗಾಯಾಳುಗಳಿಗೆ ಮಾಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಏಳು ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಸರ್ಕಾರಿ ಬಸ್ ಚಾಲಕನ ನಿಯಂತ್ರಣ...

ಚಲಿಸುತ್ತಿದ್ದ ರೈಲಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ

2 months ago

ರಾಮನಗರ: ಭಾರೀ ಗಾಳಿ ಮಳೆಯಿಂದ ಚಲಿಸುತ್ತಿದ್ದ ರೈಲಿನ ಮೇಲೆ ಮರವೊಂದು ಮುರಿದು ಬಿದ್ದ ಕಾರಣ 2 ಗಂಟೆಗಳ ಕಾಲ ಚಾಮುಂಡಿ ಎಕ್ಸ್ ಪ್ರೆಸ್ ರೈಲು ಕೆಟ್ಟು ನಿಂತ ಘಟನೆ ರಾಮನಗರ ತಾಲೂಕಿನ ಕೆಂಗಲ್ ಸಮೀಪ ಬಳಿ ನಡೆದಿದೆ. ರೈಲು ಮಾರ್ಗದ ಪವರ್...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

2 months ago

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ನೀಡಲು ನಮ್ಮ ಮೆಟ್ರೋ ಕಾತುರದಿಂದ ಕಾಯುತ್ತಿದೆ. ಇಷ್ಟು ದಿನ ಮೆಟ್ರೋದಲ್ಲೂ ಜಾಗ ಸಿಗದೆ ತಿಕ್ಕಾಟದ ನಡುವೆ ಆಫೀಸ್ ಗೆ ಹೋಗುತ್ತಿದ್ದ ಜನಕ್ಕೆ ರಿಲೀಫ್ ಸಿಗಲಿದೆ. ಹೌದು, ಇನ್ನು ಮುಂದೆ ಮೆಟ್ರೋ ಟ್ರೈನ್...

ಮೆಟ್ರೋ ಪ್ರಯಾಣಿಕರಿಗೆ ಕಾಯಿನ್ ಬದಲು ಕಾಗದದ ಟಿಕೆಟ್ ಸಿಕ್ತು!

2 months ago

ಬೆಂಗಳೂರು: ಬುಧವಾರ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದ್ದರಿಂದ ಕಾಯಿನ್ ಬದಲು ಕಾಗದದ ಟಿಕೆಟ್ ವಿತರಿಸಲಾಗಿದೆ. ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ವಿಧಾನಸೌಧ ಮುಂದಿನ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿತ್ತು. ಕಾರ್ಯಕ್ರಮ...

ಮತದಾನದ ಬಿಸಿ- ಮೆಜೆಸ್ಟಿಕ್ ನಲ್ಲಿ ಬಸ್‍ ಗಾಗಿ ಪ್ರಯಾಣಿಕರು ಗರಂ

2 months ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಆದರೆ ಪ್ರಯಾಣಿಕರು ಕೆಎಸ್‍ಆರ್ ಟಿಸಿ ಮತ್ತು ಬಿಎಂಟಿಸಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡಿದ ಸ್ಥಿತಿ ನಗರದ ಮೆಜೆಸ್ಟಿಕ್ ನಲ್ಲಿ ಕಂಡು ಬಂದಿದೆ. ರಾತ್ರಿಯಿಂದಲೇ ಊರಿಗೆ...

ರೈಲಿನಿಂದ ಬೀಳುತ್ತಿದ್ದವರ ರಕ್ಷಣೆಗೆ ತೆರಳಿ ಇಬ್ಬರು ಕೂಲಿಗಳ ದುರ್ಮರಣ!

3 months ago

ಮುಂಬೈ: ಇಲ್ಲಿನ ವಸಾಯಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕರನ್ನು ರಕ್ಷಿಸಲು ತೆರಳಿ ಇಬ್ಬರು ಕೂಲಿಗಳು ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ 66 ವರ್ಷದ ಎಸ್ ಪಂಗಟಿ ರಾಜ್ ನಾಯ್ಡು ಎಂಬ ಪ್ರಯಾಣಿಕರೊಬ್ಬರು ತುಂಬಿ ತುಳುಕುತ್ತಿದ್ದ ರೈಲಿನಿಂದ...

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

5 months ago

ಬೆಳಗಾವಿ: ಚಾಲನೆ ಮಾಡುವಾಗಲೇ ತಲೆ ತಿರುಗುತ್ತಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ತಕ್ಷಣ ಬಸ್ಸಿಗೆ ಬ್ರೇಕ್ ಹಾಕಿ ಪಕ್ಕಕ್ಕೆ ನಿಲ್ಲಿಸಿ ಚಾಲಕರೊಬ್ಬರು ಭಾರೀ ಅನಾಹುತವನ್ನು ತಪ್ಪಿಸಿದ ಘಟನೆ ಅಥಣಿಯಿಂದ ತೆಲಸಂಗ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದಾಗ ತೆಲಸಂಗ ಗ್ರಾಮದ ಬಳಿ ನಡೆದಿದೆ. ನಾಗಪ್ಪ ಮಲ್ಲಪ್ಪ ಹುರ್ಕಿ(33)...