Recent News

8 months ago

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ

ಹಾಸನ: ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ರಂ ಪಾಷಾ ಅವರು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಂ ಪಾಷಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಆಗ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಹಾನಸ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷಾ ಬಂದಿದ್ದಾರೆ. […]

1 year ago

ಉಡುಪಿಯಲ್ಲಿ ದಾಖಲೆ ಇಲ್ಲದ ಎರಡು ಚೀಲದಲ್ಲಿದ್ದ 1.65 ಕೋಟಿ ರೂ. ವಶ

ಉಡುಪಿ: ಶಿವಮೊಗ್ಗ ಉಪಚುನಾವಣೆ ಹಿನ್ನೆಲೆಯಲ್ಲಿ ಕೋಟಿ ಕೋಟಿ ಕಾಂಚಾಣ ಹರಿದಾಡುತ್ತಿದೆ ಎಂಬ ಮಾತು ಕೇಳಿ ಬರುತ್ತಿತ್ತು. ಇಂತಹ ಆರೋಪಕ್ಕೆ ಪುಷ್ಟಿ ನೀಡುವಂತೆ ಉಡುಪಿ ರೈಲ್ವೇ ರಕ್ಷಣಾ ದಳ ಪೊಲೀಸರು ದಾಖಲೆ ಇಲ್ಲದ 1.65 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. 1.65 ಕೋಟಿ ರೂ. ಮೊತ್ತ ಶಿವಮೊಗ್ಗ ಉಪ ಚುನಾವಣೆ ಹಂಚಿಕೆಗೆ ಬಂದಿತ್ತಾ ಎಂಬ ಸಂಶಯ ಶುರುವಾಗಿದೆ. ಉಡುಪಿ...