Thursday, 14th November 2019

2 months ago

ಕುಮಾರಸ್ವಾಮಿಯಂತಹ ವಿಶ್ವಾಸದ್ರೋಹ ಯಾರೂ ಮಾಡಿಲ್ಲ- ಬಿ.ಸಿ.ಪಾಟೀಲ್

ಹಾವೇರಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸದ್ರೋಹಿ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆದರು, ಒಬ್ಬರಿಗಾದರೂ ಧನ್ಯವಾದ ಹೇಳಿದರಾ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ಜಿಲ್ಲೆಯ ಹಿರೇಕೆರೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಕುಮಾರಸ್ವಾಮಿ ವಿಶ್ವಾಸದ್ರೋಹ ಮಾಡಿದ್ದಾರೆ. ಒಬ್ಬ ಮುಖ್ಯಮಂತ್ರಿಯನ್ನು ಬದಲಾಯಿಸುವ ಶಕ್ತಿ ನಮ್ಮ ತಾಲೂಕಿಗೆ ಇದೆ. ಎಲ್ಲ ಜನರ ಕಾಣಿಕೆ ಹಣ ತೆಗೆದುಕೊಂಡು ಚುನಾವಣೆಗೆ ಡೆಪಾಸಿಟ್ ಮಾಡಿದ್ದೆ. ಈಗಲೂ ಕಾರ್ಯಕರ್ತರ ಹಣವೇ ಡಿಪಾಸಿಟ್ ಆಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು. […]

2 months ago

ನಾಮಪತ್ರ ಸಲ್ಲಿಸದಿದ್ದರೆ ವಿಷ ಕುಡಿತೀವಿ ಅಂತಿದ್ದಾರೆ ಕಾರ್ಯಕರ್ತರು, ಧರ್ಮ ಸಂಕಟದಲ್ಲಿದ್ದೇನೆ – ಬಿಜೆಪಿ ಟಿಕೆಟ್ ಆಕಾಂಕ್ಷಿ

ಹಾವೇರಿ: ಸೋಮವಾರ ನಾಮಪತ್ರ ಸಲ್ಲಿಸದೇ ಇದ್ದಲ್ಲಿ ವಿಷ ಕುಡಿಯುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ನಾನೀಗ ಧರ್ಮ ಸಂಕಟದಲ್ಲಿದ್ದೇನೆ. ಮತದಾರರ ಮಾತು ಕೇಳಬೇಕೋ ಅಥವಾ ನಾಯಕರ ಮಾತು ಕೇಳಬೇಕೋ ಎನ್ನುವ ಗೊಂದಲದಲ್ಲಿದ್ದೇನೆ ಎಂದು ಹಿರೇಕೆರೂರು ಮಾಜಿ ಶಾಸಕ, ಬಿಜೆಪಿ ಟಿಕೆಟ್ ಆಕಾಂಕ್ಷಿ ಯು.ಬಿ.ಬಣಕಾರ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕರು ಹೊಂದಿಕೊಂಡರೆ ಕಾರ್ಯಕರ್ತರು ಹೊಂದಿಕೊಳ್ಳಲು...

ಬಿಜೆಪಿ ಸೇರುವ ಬಗ್ಗೆ ಅನರ್ಹ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದೇನು?

3 months ago

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ನನ್ನ ಕ್ಷೇತ್ರಕ್ಕೆ ನಾಲ್ಕು ಬಾರಿ ಹೋಗಿ ಬಂದಿದ್ದೇನೆ. ಕ್ಷೇತ್ರದ ಜನರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಅನರ್ಹ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದಾರೆ....

ಪುತ್ರಿಯೊಂದಿಗೆ ಸಿಎಂ ಭೇಟಿ – ಕುತೂಹಲ ಕೆರಳಿಸಿದ ಕೌರವನ ನಡೆ

3 months ago

ಬೆಂಗಳೂರು: ಒಂದು ವೇಳೆ ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದರೆ ಹಿರೆಕೇರೂರು ಕ್ಷೇತ್ರದಿಂದ ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಕಣಕ್ಕೆ ಇಳಿಯುತ್ತಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಡಾಲರ್ಸ್ ಕಾಲೋನಿಯ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮಗಳೊಂದಿಗೆ...

1 ತಿಂಗ್ಳ ಬಳಿಕ ರಾಜ್ಯಕ್ಕೆ ಅನರ್ಹ ಶಾಸಕ ಬಿಸಿ ಪಾಟೀಲ್ ವಾಪಸ್

3 months ago

– ಮೈತ್ರಿ ಸರ್ಕಾರ, ಎಚ್‍ಡಿಕೆ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ಬೆಂಗಳೂರು: ಅನರ್ಹಗೊಂಡಿದ್ದ ಅತೃಪ್ತ ಶಾಸಕ ಬಿ.ಸಿ.ಪಾಟೀಲ್ ಅವರು ಬರೋಬ್ಬರಿ ಒಂದು ತಿಂಗಳ ಬಳಿಕ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಇಂದು ಸಂಜೆ 05.45ರ ವೇಳೆಗೆ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...

ಸ್ಪೀಕರ್ ಆದೇಶದ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ: ಬಿ.ಸಿ.ಪಾಟೀಲ್

4 months ago

ಹಾವೇರಿ: ಸ್ಪೀಕರ್ ತೀರ್ಪಿನಿಂದ ಅನರ್ಹಗೊಂಡ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಈ ತೀರ್ಪು ನ್ಯಾಯ ಸಮ್ಮತವಾಗಿಲ್ಲ, ತಲೆ ಕೆಡಿಸಿಕೊಳ್ಳಬೇಡಿ ಎಂದು ಪೋಸ್ಟ್ ಮಾಡಿ ತಿಳಿಸಿದ್ದಾರೆ. ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಅವರ ತೀರ್ಪಿಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ. ಈ...

ಯಾವುದೇ ಅನರ್ಹ ಭೀತಿ ಇಲ್ಲ, ಆರಾಮಾಗಿದ್ದಾರೆ: ಬಿ.ಸಿ.ಪಾಟೀಲ್ ಪುತ್ರಿ

4 months ago

ಹಾವೇರಿ: ಕಾಂಗ್ರೆಸ್ ನಾಯಕರು ಮೊದಲು ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಮೂರನೇ ಬಾರಿ ಅವರು ಕೇಳಲಿಲ್ಲ. ಆದರೂ ಅವರೇ ಕರೆದು ಸಚಿವ ಸ್ಥಾನ ನೀಡುವ ಭರವಸೆ ಕೊಟ್ಟಿದ್ದರು. ಕೊನೆಗೆ ಮೋಸ ಮಾಡಿದರು ಎಂದು ರಾಜೀನಾಮೆ ನೀಡಿದ ಅತೃಪ್ತ ಶಾಸಕ ಬಿ.ಸಿ...

ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ, ಪತಿಯ ನಡೆಗೆ ನಾವು ಬದ್ಧ – ಬಿ.ಸಿ ಪಾಟೀಲ್ ಪತ್ನಿ

4 months ago

ಹಾವೇರಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಸೇರಿರುವ ಹಿರೇಕೆರೂರಿನ ಕ್ಷೇತ್ರದ ಶಾಸಕ ಬಿ.ಸಿ ಪಾಟೀಲ್ ಜನರ ಒಪ್ಪಿಗೆ ಪಡೆದು ರಾಜೀನಾಮೆ ನೀಡಿದ್ದಾರೆ. ಅವರ ಈ ತೀರ್ಮಾನಕ್ಕೆ ನಾವು ಬದ್ಧ ಎಂದು ಅವರ ಧರ್ಮಪತ್ನಿ ವನಜಾ ಪಾಟೀಲ್ ಅವರು ಹೇಳಿದ್ದಾರೆ. ಇಂದು...