Tag: ಬುಜ್ಜಿ

  • ‘ಕಲ್ಕಿ’ ಚಿತ್ರ ತಂಡ ಬುಜ್ಜಿಗೆ ಖರ್ಚು ಮಾಡಿದ್ದು ಎಷ್ಟು ಕೋಟಿ?.. ಸಿಕ್ತು ಉತ್ತರ

    ‘ಕಲ್ಕಿ’ ಚಿತ್ರ ತಂಡ ಬುಜ್ಜಿಗೆ ಖರ್ಚು ಮಾಡಿದ್ದು ಎಷ್ಟು ಕೋಟಿ?.. ಸಿಕ್ತು ಉತ್ತರ

    ಪ್ರಭಾಸ್ ನಟನೆಯ ಕಲ್ಕಿ (Kalki) ಸಿನಿಮಾದಲ್ಲಿ ಕಥಾನಾಯಕನ ಜೊತೆ ರೋಬೊ ರೀತಿಯ ಕಲ್ಕಿ ವಾಹನವಿದೆ. ಇದೊಂದು ರೀತಿಯಲ್ಲಿ ವಿಚಿತ್ರ ವಾಹನ. ಕಾರಿನ ರೀತಿಯಲ್ಲಿ ಅದು ಕಂಡರೆ, ಅದಕ್ಕೆ ಮೂರೇ ಮೂರು ಚಕ್ರ. ಆ ಚಕ್ರ ಕೂಡ ಸಾಮಾನ್ಯವಾಗಿಲ್ಲ. ಒಬ್ಬರೇ ಒಬ್ಬರು ಕುಳಿತುಕೊಳ್ಳಬಹುದಾದ ಬುಜ್ಜಿ ವಾಹನವು ವಿಶೇಷ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಈ ವಾಹನಕ್ಕೆ ಬರೋಬ್ಬರಿ ಏಳು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ.

    Kalki

    ಇದೊಂದು ಮ್ಯಾನ್‍್ಮೇಡ್ ವಿಶೇಷ ಕಾರು ಆಗಿದ್ದು, ಮಹೇಂದ್ರ ಕಂಪೆನಿಯು ಈ ವಿಶೇಷ ವಾಹನದ ವಿನ್ಯಾಸ ಮಾಡಲಾಗಿದೆ. ಈ ವಾಹನವನ್ನು ಓಡಿಸೋದು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಆದರೂ, ಪ್ರಭಾಸ್, ನಾಗಚೈತನ್ಯ ಸೇರಿದಂತೆ ಹಲವು ಕಲಾವಿದರು ಈ ಬುಜ್ಜಿ ಸವಾರಿ ಮಾಡಿದ್ದಾರೆ. ಅಲ್ಲದೇ, ಈ ಕಾರನ್ನು ಸಿನಿಮಾದ ಬಳಕೆಗೂ ತೆಗೆದುಕೊಂಡು ಹೋಗಲಾಗುತ್ತಿದೆ.

    Kalki

    ಬುಜ್ಜಿ ಚಿಕ್ಕ ಸ್ವರೂಪದ ಕಾರುಗಳನ್ನು ರೆಡಿ ಮಾಡಿಸಿ, ಕಲಾವಿದರ ಮಕ್ಕಳಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ ಪ್ರಭಾಸ್. ರಾಮ್ ಚರಣ್ ಅವರ ಪುತ್ರಿಗೆ ಚಿಕ್ಕದೊಂದು ಕಾರು ಮತ್ತು ಸಂದೇಶದ ಕಾರ್ಡ್ ನೀಡಿದ್ದಾರೆ. ಈ ವಿವರವನ್ನು ರಾಮ್ ಚರಣ್ ಪತ್ನಿ ಉಪಾಸನಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾರೆ.

    ‘ಕಲ್ಕಿ’ ಸಿನಿಮಾದಲ್ಲಿ ಬುಜ್ಜಿಗೆ ಸಾಕಷ್ಟು ಮಹತ್ವವನ್ನು ನೀಡಲಾಗಿದೆಯಂತೆ. ಬುಜ್ಜಿಗಾಗಿಯೇ ಸಿನಿಮಾ ತಂಡ ಮೊನ್ನೆಯಷ್ಟೇ ವಿಶೇಷ ಕಾರ್ಯಕ್ರವನ್ನೂ ಆಯೋಜನೆ ಮಾಡಿತ್ತು. ಆ ಬುಜ್ಜಿಗೆ ಧ್ವನಿದಾನ ಮಾಡಿದ್ದಾರಂತೆ ನಟಿ ಕೀರ್ತಿ ಸುರೇಶ್ (Keerthi Suresh). ಬುಜ್ಜಿ ಕೂಡ ಪಾತ್ರದಂತೆ ಚಿತ್ರದುದ್ದಕ್ಕೂ ಇರಲಿದೆಯಂತೆ.

  • ಒಟಿಟಿಯಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್ ಸಿರೀಸ್

    ಒಟಿಟಿಯಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್ ಸಿರೀಸ್

    2024 ರ ಭಾರತೀಯ ಮಹಾಕಾವ್ಯ ವೈಜ್ಞಾನಿಕ ಕಾಲ್ಪನಿಕ ಸಾಹಸ ಚಲನಚಿತ್ರ ಹಾಗೂ ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ (Kalki) ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ‌.  ಪ್ರಭಾಸ್ (Prabhas) ಈ ಚಿತ್ರದಲ್ಲಿ ಭೈರವನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭೈರವನ ನಂಬಿಕಸ್ಥ ಗೆಳೆಯನಾಗಿ ಬುಜ್ಜಿ(ವಿಶೇಷ ಕಾರ್)ಪಾತ್ರವಿದೆ‌. ಈ ಎರಡು ಪಾತ್ರಗಳನಿಟ್ಟುಕೊಂಡು ಚಿತ್ರತಂಡ “B&B” ಎಂಬ ಹದಿನೈದು ಹದಿನೈದು ನಿಮಿಷಗಳ ಎರಡು ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಿದೆ.

    Kalki 3 1

    ದೇಶದ ಪ್ರಮುಖ ನಗರಗಳ ಚಿತ್ರಮಂದಿರಗಳಲ್ಲಿ ಈ ಅನಿಮೇಷನ್‌ ಸಿರೀಸ್ ಏಕಕಾಲಕ್ಕೆ ಬಿಡುಗಡೆಯಾಗಿದೆ‌. ಈ ಎರಡು ಭಾಗಗಳು ಮೇ 31 ರಿಂದ ಅಮೇಜಾನ್ ಪ್ರೈಮ್ ನಲ್ಲಿ ನೋಡಲು ಲಭ್ಯವಿದೆ. ಈ ಅನಿಮೇಷನ್‌ ಸೀರಿಸ್ ನಲ್ಲಿರುವ ಭೈರವ ಹಾಗೂ ಬುಜ್ಜಿಯ ಜುಗಲ್ ಬಂದಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇದು ಚಿತ್ರದ ಪ್ರಚಾರಕಷ್ಟೇ ಮಾಡಿರುವ ಅನಿಮೇಷನ್‌ ಸಿರೀಸ್. ಚಿತ್ರದ ಕಥೆಯೆ ಬೇರೆ. ಇದೇ ಬೇರೆ  ಎಂದು ನಿರ್ದೇಶಕ ನಾಗ್ ಅಶ್ವಿನ್ ತಿಳಿಸಿದ್ದಾರೆ.

    Kalki 2 1

    ಕಳೆದ ಅರ್ಧ ಶತಕದಿಂದ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವೈಜಯಂತಿ ಮೂವೀಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದ್ದು, ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಮಾಡುತ್ತಿದೆ. ಬೆಂಗಳೂರಿನಲ್ಲೂ “ಕಲ್ಕಿ 2898 AD” ಚಿತ್ರದ ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆ.ವಿ.ಎನ್ ಪ್ರೊಡಕ್ಷನ್ ನ ಸುಪ್ರೀತ್ ಅವರು ಈ ಅನಿಮೇಷನ್‌ ಸಿರೀಸ್ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ‌‌. ಎರಡು ಭಾಗಗಳಲ್ಲಿ ಇಂಗ್ಲೀಷ್ ಹಾಗೂ ತೆಲುಗು ಭಾಷೆಗಳಲ್ಲಿ ಮೂಡಿಬಂದಿರುವ ಈ ಅನಿಮೇಷನ್‌ ಸಿರೀಸ್ ಅನ್ನು ಅಮೇಜಾನ್ ಪ್ರೈಮ್ ನಲ್ಲಿ ವೀಕ್ಷಿಸಬಹುದು ಎಂದರು.

    ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ.  ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ಕಲ್ಕಿ ಬುಜ್ಜಿಗೆ ಧ್ವನಿಯಾಗಿದ್ದಾರೆ ನಟಿ ಕೀರ್ತಿ ಸುರೇಶ್

    ಕಲ್ಕಿ ಬುಜ್ಜಿಗೆ ಧ್ವನಿಯಾಗಿದ್ದಾರೆ ನಟಿ ಕೀರ್ತಿ ಸುರೇಶ್

    ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾದಲ್ಲಿ ಬುಜ್ಜಿಗೆ ಸಾಕಷ್ಟು ಮಹತ್ವವನ್ನು ನೀಡಲಾಗಿದೆ.  ಬುಜ್ಜಿಗಾಗಿಯೇ ಮೊನ್ನೆಯಷ್ಟೇ ವಿಶೇಷ ಕಾರ್ಯಕ್ರವನ್ನೂ ಆಯೋಜನೆ ಮಾಡಿತ್ತು ಚಿತ್ರತಂಡ. ಈಗ ಆ ಬುಜ್ಜಿಗೆ ಧ್ವನಿದಾನ ಮಾಡಿದ್ದಾರಂತೆ ನಟಿ ಕೀರ್ತಿ ಸುರೇಶ್ (Keerthi Suresh). ಬುಜ್ಜಿ ಕೂಡ ಪಾತ್ರದಂತೆ ಚಿತ್ರದುದ್ದಕ್ಕೂ ಇರಲಿದೆಯಂತೆ.

    Kalki

    ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ (Kalki)  2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ. ಈಗ ಇದೇ ಸಿನಿಮಾದಿಂದ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ ಚಿತ್ರತಂಡ. ಹೌದು, ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍ ಪ್ರಭಾಸ್‍ (Prabhas,) ಅಭಿನಯದ ಕಲ್ಕಿ 2898 AD ಬಿಡುಗಡೆಗೆ ಹೆಚ್ಚು ದಿನಗಳು ಉಳಿದಿಲ್ಲ. ಹೀಗಿರುವಾಗಲೇ ಇದೇ ಕಲ್ಕಿ ಚಿತ್ರದ ಐದನೇ ಸೂಪರ್‍ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಿದೆ ಚಿತ್ರತಂಡ.

    Kalki 2

    ಆ ಐದನೇ ಸೂಪರ್‌ಸ್ಟಾರ್‌ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ಅನ್ನು ಮೇ 22ರಂದು ಅನಾವರಣ ಮಾಡಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ.

    Kalki 3

    ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.

    ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ವಿಡಿಯೋ ರಿಲೀಸ್

    ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ವಿಡಿಯೋ ರಿಲೀಸ್

    ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ (Kalki)  2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ. ಈಗ ಇದೇ ಸಿನಿಮಾದಿಂದ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ ಚಿತ್ರತಂಡ. ಹೌದು, ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍ ಪ್ರಭಾಸ್‍ (Prabhas,) ಅಭಿನಯದ ಕಲ್ಕಿ 2898 AD ಬಿಡುಗಡೆಗೆ ಹೆಚ್ಚು ದಿನಗಳು ಉಳಿದಿಲ್ಲ. ಹೀಗಿರುವಾಗಲೇ ಇದೇ ಕಲ್ಕಿ ಚಿತ್ರದ ಐದನೇ ಸೂಪರ್‍ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಿದೆ ಚಿತ್ರತಂಡ.

    Kalki 3

    ಆ ಐದನೇ ಸೂಪರ್‌ಸ್ಟಾರ್‌ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ಅನ್ನು ಮೇ 22ರಂದು ಅನಾವರಣ ಮಾಡಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ.

    Kalki 1

    ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.

    ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ‘ಕಲ್ಕಿ 2898 AD : ಮೇ 22 ರಂದು ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ

    ‘ಕಲ್ಕಿ 2898 AD : ಮೇ 22 ರಂದು ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ

    ‘ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ (Kalki) ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಬೆಟ್ಟದಷ್ಟು ನಿರೀಕ್ಷೆ ಮತ್ತು ಕುತೂಹಲವಿದೆ. ಈಗ ಚಿತ್ರದ ಐದನೇ ಸೂಪರ್‍ ಸ್ಟಾರ್ ಅನ್ನು ಇದೇ ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದ್ದು, ಆ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ.Kalki

    ಈ ಐದನೇ ಸೂಪರ್‍ ಸ್ಟಾರ್‍ ಯಾರು? ಈ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ.  ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ. ಈ ಗೆಳೆಯನ ಕುರಿತು ಯೂಟ್ಯೂಬ್‍ನ ವೈಜಯಂತಿ ನೆಟ್‍ವರ್ಕ್ ಚಾನಲ್‍ನಲ್ಲಿ ಹೊಸ ವೀಡಿಯೋ ಬಿಡುಗಡೆ ಮಾಡಲಾಗಿದೆ. ‘From Skratch: Building A Superstar’ ಹೆಸರಿನ ಈ ವೀಡಿಯೋದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿದೆ. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವೀಡಿಯೋದಲ್ಲಿ ತೋರಿಸಲಾಗಿದೆ. ಭೈರವನ ಅಚ್ಚುಮೆಚ್ಚಿನ ಗೆಳೆಯನ ಕುರಿತು ಸಾಕಷ್ಟು ಬಿಲ್ಡಪ್‍ ನೀಡಲಾಗಿದ್ದು, ಈ ಐದನೇ ಸೂಪರ್‍ ಸ್ಟಾರ್‍ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಬುಜ್ಜಿ ಯಾರು ಎಂಬ ಪ್ರಶ್ನೆಗೆ, ಎರಡು ನಿಮಿಷ 22 ಸೆಕೆಂಡ್‍ನ ಈ ವೀಡಿಯೋದಲ್ಲಿ ಚಿತ್ರಕ್ಕೆ ದುಡಿದ ಹಲವು ತಂತ್ರಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ. ಇಷ್ಟಕ್ಕೂ ಬುಜ್ಜಿ ಯಾರು? ಉತ್ತರಕ್ಕಾಗಿ ಮೇ 22ರವರೆಗೂ ಕಾಯಬೇಕು.

    Kalki 3

    ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‍ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

    ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‍ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.