Monday, 22nd July 2019

Recent News

11 hours ago

ದಳ ತೊರೆದು ಕೈ ಸೇರ್ಪಡೆ- ಅಂದಿನ ಘಟನೆ ವಿವರಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಚರ್ಚೆಯ ವೇಳೆ ಶಾಸಕ ಸಿ.ಟಿ ರವಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ಶಾಸಕರ ಪಕ್ಷಾಂತರ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ ಕಥೆಯನ್ನು ಬಿಚ್ಚಿಟ್ಟರು. 2006ರಲ್ಲಿ ಸಿದ್ದರಾಮಯ್ಯನವರು ಜನತಾ ದಳದ ಉಪಮುಖ್ಯಮಂತ್ರಿಯಾಗಿದ್ದರು. ಅವರನ್ನು ಏನು ಕೊಟ್ಟು ಕರೆದುಕೊಂಡು ಹೋಗಿದ್ದೀರಿ ಎಂದು ನಾವು ಕೇಳಿಲ್ಲ ಎಂದು ಸಿಟಿ ರವಿ ಕಾಂಗ್ರೆಸ್ ನಾಯಕರ ಆಪರೇಷನ್ ಕಮಲದ ಆರೋಪಕ್ಕೆ ತಿರುಗೇಟು ನೀಡಿದರು. ಈ ವೇಳೆ ಎದ್ದುನಿಂತ ಸಿದ್ದರಾಮಯ್ಯ, ರವಿಗೆ […]

12 hours ago

ಅದ್ಭುತ, ಅದ್ಭುತ, ಅದ್ಭುತ – ಚಿನ್ನದ ಹುಡುಗಿ ಹಿಮಾದಾಸ್‍ಗೆ ಸಿನಿ ತಾರೆಯರ ವಿಶ್

ಬೆಂಗಳೂರು: ಭಾರತದ ಹೆಮ್ಮೆಯ ಆಟಗಾರ್ತಿ ಹಿಮಾದಾಸ್ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಲು ಸಾಲು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ಸಾಧನೆಗೆ ಇಡೀ ದೇಶವೇ ಸಂತೋಷ ಪಡುತ್ತಿದ್ದು, ಸಿನಿಮಾ ತಾರೆಯರು ಕೂಡ ಶುಭಾಶಯ ಕೋರುತ್ತಿದ್ದಾರೆ. ಹಿಮಾದಾಸ್ ಅವರು 19 ದಿನದಲ್ಲಿ ಬರೋಬ್ಬರಿ 5 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟ್ಸ್ ನಲ್ಲಿ ಹಿಮಾದಾಸ್...

ಬಿರಿಯಾನಿ ಕಥೆ ಹೇಳಿದ ಸಿಟಿ ರವಿ- ಖಡಕ್ ಉತ್ತರ ಕೊಟ್ಟ ಸಿಎಂ

13 hours ago

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಚರ್ಚೆಯ ವೇಳೆ ಬಿಜೆಪಿ ಶಾಸಕ ಸಿಟಿರವಿ ಅವರು ಬಿರಿಯಾನಿ ಕಥೆಯನ್ನು ಪ್ರಸ್ತಾಪ ಮಾಡಿದರು. ಈ ವೇಳೆ ಶಾಸಕರ ಕಥೆಗೆ ಸಿಎಂ ಅವರು ಖಡಕ್ ಉತ್ತರ ನೀಡಿದ ಪ್ರಸಂಗ ನಡೆಯಿತು. ಐಎಂಎ ಕಂಪನಿ ಬಗ್ಗೆ ಈ ಹಿಂದೆಯೇ...

ಚಂದಿರನ ಅಂಗಳಕ್ಕೆ ಜಿಗಿದ ‘ಬಾಹುಬಲಿ’ – ಜಿಎಸ್‍ಎಲ್‍ವಿ ಮಾರ್ಕ್-3 ಉಡಾವಣೆ ಯಶಸ್ವಿ

13 hours ago

ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಚಂದ್ರಯಾನ 2 ಅಧಿಕೃತವಾಗಿ ಆರಂಭವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ ಇಂದು ಮಧ್ಯಾಹ್ನ 2.41ಕ್ಕೆ ನಭಕ್ಕೆ ಚಿಮ್ಮಿದೆ. ಈ ಮೂಲಕ ಈ ಸಾಧನೆ ಮಾಡುತ್ತಿರುವ ಜಗತ್ತಿನ 4ನೇ ರಾಷ್ಟ್ರ ಎಂಬ...

ಇಂದು ಸಿಎಂ ವಿಶ್ವಾಸಮತಯಾಚನೆ ಮಾಡುವ ವಿಶ್ವಾಸ ಇದೆ – ಕರಂದ್ಲಾಜೆ

14 hours ago

ಬೆಂಗಳೂರು: ಇಂದು ಸಂಜೆಯೊಳಗೆ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸದನ ಮುಕ್ತಾಯದ ವೇಳೆ ಸೋಮವಾರ...

ಸಚಿವರೊಬ್ಬರು ಕರೆ ಮಾಡಿ ನನ್ನನ್ನೇ ಕೇಳಿದ್ರು- ಅರವಿಂದ ಲಿಂಬಾವಳಿ

15 hours ago

ಬೆಂಗಳೂರು: ಇತ್ತೀಚೆಗೆ 2 ಬಾರಿ ಸಚಿವರಾಗಿದ್ದವರು ದೂರವಾಣಿ ಕರೆ ಮಾಡಿ ನನ್ನನ್ನೇ ಕೇಳುವ ಮಟ್ಟಕ್ಕೆ ಬಂದಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಎಷ್ಟರಮಟ್ಟಿಗೆ ತಮ್ಮತ್ತ ಸೆಳೆಯಲು ಪ್ರಯತ್ನ ಮಾಡುತ್ತಿದೆ ಎಂಬುದು ತಿಳಿಯುತ್ತದೆ ಎಂದು ಶಾಸಕ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ವಿಕ್ಟೋರಿಯಾ ಆಸ್ಪತ್ರೆಗೆ ಮಾನ್ಸೂರ್ ಖಾನ್ ದಾಖಲು

19 hours ago

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಐಎಂಎ ಪ್ರಕರಣದ ಆರೋಪಿ ಮಾನ್ಸೂರ್ ಖಾನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸದ್ಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮನ್ಸೂರ್ ನನ್ನು ವಿಚಾರಣೆ ನಡೆಸುತ್ತಿದ್ದು, ಇಡಿ ಕಚೇರಿಯಲ್ಲಿಯೇ ಆತನನ್ನು ಇರಿಸಲಾಗಿದೆ. ಮನ್ಸೂರ್ ಭಾನುವಾರ ಎದೆ ನೋವು ಎಂದು ಹೇಳಿದ ಹಿನ್ನೆಲೆಯಲ್ಲಿ...

ದಕ್ಷಿಣ ಕನ್ನಡ, ಉಡುಪಿ, ಕೊಡಗಿನಲ್ಲಿ ಮಳೆ ಜೋರು- ಎಲ್ಲೆಲ್ಲಿ ಏನಾಗಿದೆ?

19 hours ago

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆ ಆಗುತ್ತಿದೆ. ಮಡಿಕೇರಿ, ವಿರಾಜಪೇಟೆಯಲ್ಲಿ ಮಳೆ ಆಗುತ್ತಿದ್ದು, ಭಾಗಮಂಡಲದ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ...