Recent News

1 month ago

ಪ್ರಮುಖ ಎಲ್‍ಇಟಿ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಪಾಕಿಸ್ತಾನ ಲಷ್ಕರ್-ಇ-ತೊಯ್ಬಾ(ಎಲ್‍ಇಟಿ) ಉಗ್ರ ಸಂಘಟನೆಯ ಪ್ರಮುಖ ಉಗ್ರನನ್ನು ಜಮ್ಮು ಮತ್ತು ಕಾಶ್ಮೀರದ ಸೊಪೋರ್‌ನಲ್ಲಿ ಭಾರತೀಯ ಸೇನೆ ಎನ್‍ಕೌಂಟರ್ ಮಾಡಿ ಹೊಡೆದುರುಳಿಸಿದೆ. ಮೃತ ಉಗ್ರನನ್ನು ಎಲ್‍ಇಟಿ ಉಗ್ರ ಸಂಘಟನೆಯ ಆಸಿಫ್ ಮಕ್ಬುಲ್ ಭಟ್ ಎಂದು ಗುರುತಿಸಲಾಗಿದ್ದು, ಸೊಪೋರ್‌ನಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರ ಕುಟುಂಬದ ಮೂವರು ಸದಸ್ಯರ ಮೇಲೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಈತ ಭಾಗಿಯಾಗಿದ್ದ ಎನ್ನಲಾಗಿದೆ. ಗಾಯಗೊಂಡವರಲ್ಲಿ ಅಸ್ಮಾ ಜನ್ ಎಂಬ ಯುವತಿಯೂ ಸೇರಿದ್ದಾಳೆ. ಸೊಪೋರ್‌ನ ವಲಸೆ ಕಾರ್ಮಿಕ ಶಫಿ ಆಲಂ ಮೇಲೆ ಗುಂಡು ಹಾರಿಸಲು ಆಸಿಫ್ […]

3 months ago

ಕಾಶ್ಮೀರದಲ್ಲಿ ಉಗ್ರರ ದಾಳಿ ಭೀತಿ – ಅಧಿಕಾರಿಗಳೊಂದಿಗೆ ಅಮಿತ್ ಶಾ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಉಗ್ರರು ಮುಂದಾಗಿದ್ದಾರೆ ಎನ್ನುವ ಸೂಚನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ ಅವರೊಂದಿಗೆ ಸಭೆ ನಡೆಸಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಭಯೋತ್ಪಾದಕರ ದಾಳಿ ಬೆದರಿಕೆ ಹಿನ್ನಲೆ ಇತ್ತೀಚೆಗಷ್ಟೇ ಕಾಶ್ಮೀರದ ಕಣಿವೆಗೆ...

ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತ

4 months ago

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ದರಂದೋರಾ ಕೀಗಮ್‍ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಭಯೋತ್ಪಾದಕರು ತಂಗಿರುವ ಕುರಿತ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಶೋಪಿಯನ್ ಜಿಲ್ಲೆಯಲ್ಲಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಭಯೋತ್ಪಾದಕರು ಭದ್ರತಾ ಪಡೆಯ ಮೇಲೆ...

ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಯ ಯೋಗಾಭ್ಯಾಸ

4 months ago

ಭುವನೇಶ್ವರ: ಜೂನ್ 21ರಂದು ನಡೆಯುವ 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತೀಯ ಭದ್ರತಾ ಪಡೆಯ ಯೋಧರು ಒಡಿಶಾದ ನಕ್ಸಲ್ ಪೀಡಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು. ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಭದ್ರತಾ...

ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ – ಉಗ್ರ ನಾಯಕರ ಪೋಸ್ಟರ್ ಹಿಡಿದ ಕಿಡಿಗೇಡಿಗಳು

5 months ago

ಶ್ರೀನಗರ: ರಂಜಾನ್ ಹಬ್ಬದಂದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆದಿದ್ದು, ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಬೆಳ್ಳಂಬೆಳಗ್ಗೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭದ್ರತಾ ಪಡೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ...

ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ

8 months ago

ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದೆ. ಅಲ್ಲದೇ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಕುಪ್ವಾರದಲ್ಲೂ ಉಗ್ರರ ಉಪಟಳ ಮುಂದುವರಿದಿದ್ದು, ಮೂವರು ಲಷ್ಕರ್...

ಜೈಶ್ ಉಗ್ರರಿಬ್ಬರನ್ನು ಹತ್ಯೆಗೈದ ಭದ್ರತಾ ಪಡೆ

8 months ago

ಶ್ರೀನಗರ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತದ ಭದ್ರತಾ ಪಡೆ ಎನ್‍ಕೌಂಟರ್ ಮಾಡಿದೆ. ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಶೊಪಿಯಾನ್ ಎಂಬಲ್ಲಿ ಈ ಎನ್‍ಕೌಂಟರ್ ನಡೆದಿದೆ. ಶೊಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವದಿಂದಲೇ ಗುಂಡಿನ ಸದ್ದು ಕೇಳತೊಡಗಿತ್ತು....

ಮಾಜಿ ಸಿಎಂ ಮನೆಗೆ ಕಾರು ನುಗ್ಗಿಸಿದವನ ಮೇಲೆ ಭದ್ರತಾ ಪಡೆ ಗುಂಡಿನ ದಾಳಿ

1 year ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಅನುಮಾನಾಸ್ಪದವಾಗಿ ಕಾರು ನುಗ್ಗಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯ ಮೇಲೆ ಭದ್ರತಾ ಪಡೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಅಪರಿಚಿತ ವ್ಯಕ್ತಿಯೋರ್ವ ನಿರಾಯುಧನಾಗಿ...