Sunday, 19th August 2018

Recent News

20 hours ago

ಕೇರಳ, ಕೊಡಗಿನಲ್ಲಿ ಭಾರೀ ಮಳೆ-ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಪ್ರವಾಹ

ಬೆಂಗಳೂರು: ಕೇರಳ, ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಮೈಸೂರಿನಲ್ಲಿ ನೆರೆ ಸೃಷ್ಟಿಸಿದೆ. ಕಬಿನಿ, ಕೆಆರ್‍ಎಸ್‍ಗೆ ನೀರಿನ ಹರಿವು ಹೆಚ್ಚಾಗಿದ್ದು, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಪ್ರವಾಹ ಉಂಟಾಗಿದೆ. ಮಡಿಕೇರಿಯಲ್ಲಿ ವರುಣ ಅಬ್ಬರಿಸುತ್ತಿರೋದ ನೇರ ಪರಿಣಾಮ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆ ಮೇಲಾಗಿದೆ. ತುಂಬಿ ತುಳುಕುತ್ತಿರೋ ಕೆಆರ್‍ಎಸ್ ಮತ್ತು ಕಬಿನಿ ಜಲಾಶಯಗಳಿಂದ 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗ್ತಿದೆ. ಪರಿಣಾಮ ಎಲ್ಲೆಲ್ಲೂ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಪಿಲಾ ನದಿ ಪ್ರವಾಹಕ್ಕೆ ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರ ನಲುಗಿ ಹೋಗಿದೆ. […]

2 days ago

ಕಾವೇರಿ ನದಿ ಪಾತ್ರದಲ್ಲಿ ಭರ್ಜರಿ ಮಳೆ- ದೇವಾಲಯ, ಜಮೀನು ಜಲಾವೃತ

ಮಂಡ್ಯ: ಕಾವೇರಿ ನದಿಪಾತ್ರದಲ್ಲಿ ಭರ್ಜರಿ ಮಳೆಯಾಗುತ್ತಿರುವುದರಿಂದ ಕೆಆರ್‍ಎಸ್ ಅಣೆಕಟ್ಟೆಗೆ ನಿರಂತರವಾಗಿ ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಕೆಆರ್‍ಎಸ್ ಅಣೆಕಟ್ಟಯಿಂದ ಅನಿವಾರ್ಯವಾಗಿ 1 ಲಕ್ಷದ 30 ಸಾವಿರ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಕಾವೇರಿ ನದಿಪಾತ್ರದ ದೇವಾಲಯ, ಜಮೀನು ಜಲಾವೃತ್ತವಾಗಿ ಪ್ರವಾಹದ ಭೀತಿ...

ಕೆಆರ್‌ಎಸ್‌ ಅಣೆಕಟ್ಟು ರುದ್ರರಮಣೀಯ ದೃಶ್ಯ ಕಣ್ತುಂಬಿಕೊಂಡ ಅಂಬರೀಶ್, ಯದುವೀರ್ ದಂಪತಿ

4 days ago

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಗೆ ಮೈಸೂರು ರಾಜ ಯದುವೀರ್ ದಂಪತಿ ಹಾಗೂ ನಟ, ಮಾಜಿ ಸಚಿವ ಅಂಬರೀಶ್ ಭೇಟಿ ನೀಡಿ ಅಣೆಕಟ್ಟೆಯ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಕೆಆರ್‌ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ ಒಂದು ಲಕ್ಷದ 20 ಸಾವಿರ...

ಮುತ್ತತ್ತಿ ಆಂಜನೇಯ ಸ್ವಾಮಿ ದೇವಸ್ಥಾನ ಬಂದ್

4 days ago

ಮಂಡ್ಯ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಳವಳ್ಳಿ ತಾಲೂಕಿನ ಪ್ರಸಿದ್ಧ ಮುತ್ತತ್ತಿ ಆಂಜನೇಯ ಸ್ವಾಮಿ ದೇವಾಲಯವನ್ನು ಬಂದ್ ಮಾಡಿರುವುದಾಗಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಅಪಾಯಮಟ್ಟ ಮೀರಿ ಹರಿಯುತ್ತಿದೆ....

ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯದ ಬಳಿ ಪೊಲೀಸ್ ಬಂದೋಬಸ್ತ್!

5 days ago

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆಯಿಂದ ಒಂದು ಲಕ್ಷದ 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುತ್ತಿರುವುದರಿಂದ ಪುರಾಣ ಪ್ರಸಿದ್ಧ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯದ ಬಳಿ ಭಕ್ತರು ಕಾವೇರಿ ನದಿಗಿಳಿದು ಸ್ನಾನ ಮಾಡದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಿಮಿಷಾಂಭ ದೇವಾಲಯ ಕಾವೇರಿ ನದಿಯ...

ಮಂಡ್ಯದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ!

6 days ago

ಮಂಡ್ಯ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸಮೀಪದಲ್ಲಿ ನಡೆದಿದ್ದು, ಸ್ಥಳೀಯರಿಂದ ಅದೃಷ್ಟವಶಾತ್ ಬದುಕುಳಿದಿದ್ದಾರೆ. ದೊಡ್ಡಬ್ಯಾಡರಹಳ್ಳಿ ಗ್ರಾಮದ ಮರೀಗೌಡ(48) ಆತನ ಪತ್ನಿ ರಜನಿ(44) ದಂಪತಿಯ ಮಕ್ಕಳಾದ ಚಂದ್ರ(13) ಹಾಗೂ ಚೇತನ್(10) ಆತ್ಮಹತ್ಯೆಗೆ ಯತ್ನಿಸಿದವರು. ಮರೀಗೌಡ ಅವರ...

ಕುಮಾರಸ್ವಾಮಿ ನಾಟಿ ಲೆಕ್ಕದ ಇನ್‍ಸೈಡ್ ಸ್ಟೋರಿ ಇಲ್ಲಿದೆ

7 days ago

ಬೆಂಗಳೂರು: ಕುಮಾರಸ್ವಾಮಿ ಮತ್ತು ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚಾದ ಬೆನ್ನಲ್ಲೇ ಎಚ್‍ಡಿಕೆ ನಾಟಿ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಗಿದೆ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈ ಪ್ರಶ್ನೆ ಏಳಲಿದೆ ಎಂದು ಮೊದಲೇ ಊಹಿಸಿದ್ದ ಕುಮಾರಸ್ವಾಮಿ ಸರ್ಕಾರದ...

ಅಮಾವಾಸ್ಯೆ ಬೆನ್ನಲ್ಲೇ ಪ್ರತ್ಯೇಕ ಅಪಘಾತಗಳಲ್ಲಿ 5 ಮಂದಿ ದುರ್ಮರಣ!

7 days ago

ಮಂಡ್ಯ: ಅಮಾವಾಸ್ಯೆ ಬೆನ್ನಲ್ಲೇ ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಒಟ್ಟು ಐದು ಮಂದಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿ ಭಾನುವಾರ ಬೆಳಗ್ಗೆ ನಡೆದ ಬೈಕ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಪ್ರವೀಣ್ ಹಾಗೂ ಪ್ರಮೋದ್ ಇಬ್ಬರು ಮೃತಪಟ್ಟಿದ್ದಾರೆ. ಈ...