Tuesday, 21st May 2019

Recent News

1 month ago

ಮಧ್ಯರಾತ್ರಿ ಬಳ್ಳಾರಿ ರೆಡ್ಡಿ ಜೊತೆ ಸಿದ್ದರಾಮಯ್ಯ ಮಾತುಕತೆ!

ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ ಗುರುವಾರ ಮಧ್ಯರಾತ್ರಿ ಬಳ್ಳಾರಿ ರೆಡ್ಡಿ ಅವರನ್ನು ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಿಡ್ ನೈಟ್‍ನಲ್ಲಿ ಮೀಟ್ ಮಾಡಿದ್ದು ಜನಾರ್ದನರೆಡ್ಡಿ ಅವರನ್ನಲ್ಲ. ಬದಲಾಗಿ ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಚುನಾವಣೆ ಘೋಷಣೆಯಾದ ದಿನದಿಂದ ಪಕ್ಷದೊಂದಿಗೆ ಮುನಿಸುಕೊಂಡಿರುವ ಸೂರ್ಯನಾರಾಯಣ ರೆಡ್ಡಿ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಿದರು. ಏನೇ ಭಿನ್ನಾಭಿಪ್ರಾಯ ಇದ್ದರೂ ಚುನಾವಣೆ ಮುಗಿದ ನಂತರ ಚರ್ಚೆ […]

1 month ago

ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ ಚುನಾವಣೆಗೆ ನಿಲ್ಲುವ ಸುಳಿವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಭಾನುವಾರ ಇಲವಾಲದ ಸಮಾವೇಶದಲ್ಲಿ ನಾನು ಇನ್ನೂ ಚುನಾವಣೆಗೆ ನಿಲ್ಲುವುದಿಲ್ಲ ಎಂಬ ಹೇಳಿಕೆಗೆ ಸ್ಪಷ್ಟಪಡಿಸಿದ ಅವರು, ಚಾಮುಂಡೇಶ್ವರಿ...

ವಿಳಾಸಕ್ಕಾಗಿ ಕಿತ್ತಾಡಿಕೊಂಡ ಮಾಜಿ ಸಿಎಂಗಳು!

1 month ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಕಿತ್ತಾಡಿಕೊಂಡಿದ್ದಾರೆ. ವಿಳಾಸದ ವಿಚಾರವಾಗಿ ಈ ಬಾರಿ ಮಾಜಿ ಮುಖ್ಯಮಂತ್ರಿಗಳು ಪರಸ್ಪರ ಟ್ವಿಟ್ಟರ್ ವಾರ್ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ...

ಪಾಪ ಸೋತು ಬಿಟ್ರು – ಇಂಟರ್‌ವಲ್‌ ಬಿಟ್ ವಿನ್ ಪಾಲಿಟಿಕ್ಸ್ ಬಗ್ಗೆ ಮಾಜಿ ಸಿಎಂ ಮಾತು

2 months ago

ಮೈಸೂರು: ಇಂಟರ್‌ವಲ್‌ ಬಿಟ್ ವಿನ್ ಪಾಲಿಟಿಕ್ಸ್ ಇರಬೇಕು. ನಿನ್ನೆ ಐಪಿಎಲ್ ಮ್ಯಾಚ್ ನೋಡಲು ಹೋಗಿದ್ದೆ. ಪಾಪ ಸೋತುಬಿಟ್ಟರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ. ನಿನ್ನೆ ಐಪಿಎಲ್ ಮ್ಯಾಚ್ ನೋಡಲು ಹೋಗಿದ್ದೆ. ಪಾಪ ಆರ್‌ಸಿಬಿ ಸೋತು ಬಿಟ್ಟಿತು. ನಾನು 11...

ನಂಗೂ ಹೊಟ್ಟೆ ಹಸೀತಾ ಇದೆ ಕುತ್ಕೊಳ್ಳಿ ಅನ್ನೋ ಸನ್ನಿವೇಶ ಬಂದಿಲ್ಲ- ಸಿದ್ದರಾಮಯ್ಯಗೆ ಮಾಜಿ ಸಚಿವ ಟಾಂಗ್

2 months ago

ಚಾಮರಾಜನಗರ: ಮಾಜಿ ಸಚಿವ ಎನ್ ಮಹೇಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಇಂದು ನಗರದಲ್ಲಿ ನಡೆಯುತ್ತಿದ್ದ ಬಹುಜನ್ ದಿವಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಚಿವ, ನನಗೂ ಹೊಟ್ಟೆ ಹಸೀತಾ ಇದೆ ಕುಳಿತುಕೊಳ್ಳಿ ಎಂದು ಹೇಳುವ ಸನ್ನಿವೇಶ...

ಕೊಡುವುದಾದ್ರೆ ಮೈಸೂರು ಬಿಟ್ಟುಕೊಡಿ- `ಕೈ’ ಹೈಕಮಾಂಡ್ ವಿರುದ್ಧ ಎಚ್‍ಡಿಡಿ ಗುಡುಗು

2 months ago

ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ದೋಸ್ತಿ ಸರ್ಕಾರದಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ತನಗೆ ಮೈಸೂರು ಕ್ಷೇತ್ರವೇ ಬೇಕು ಎಂದು ಹಠ ಹಿಡಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಕೊಡುವುದಾದ್ರೆ...

ನೀವೆಲ್ಲಾ ನನ್ನನ್ನು ಏನ್ ಅಂದುಕೊಂಡಿದ್ದೀರಿ: ಕೈ ಸಭೆಯಲ್ಲಿ ಸಿದ್ದರಾಮಯ್ಯ ಕೆಂಡಾಮಂಡಲ

2 months ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಹೌದು. ಸೋಮವಾರ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಸ್ಕ್ರಿನಿಂಗ್ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವ ಕ್ಷೇತ್ರವನ್ನು ಬಿಟ್ಟು ಕೊಡಬೇಕು...

ಚುನಾವಣಾ ನೀತಿ ಸಂಹಿತೆ ಎಫೆಕ್ಟ್ – ಸಿದ್ದರಾಮಯ್ಯ ಕಾರಿಗೆ ಡ್ರೈವರ್ ಆದ್ರು ಖಾದರ್

2 months ago

– ದೇಶಾದ್ಯಂತ ಫ್ಲೆಕ್ಸ್, ಬ್ಯಾನರ್ ರಿಮೂವ್ ಉಡುಪಿ/ಬೆಳಗಾವಿ: ಲೋಕಸಮರಕ್ಕೆ ಮುಹೂರ್ತ ನಿಗದಿಯಾಗಿದ್ದು ಭಾನುವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಉಡುಪಿಯಲ್ಲಿದ್ದ ಸಿದ್ದರಾಮಯ್ಯ ಮಂಗಳೂರಿಗೆ ವಾಪಸ್ ತೆರಳುವಾಗ ಸಚಿವ ಯು.ಟಿ. ಖಾದರ್ ಚಲಾಯಿಸುತ್ತಿದ್ದ ಕಾರಿನಲ್ಲಿ ತೆರಳಿದ್ದರು. ಕಲ್ಸಂಕದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಜಾಥಾ ಮುಗಿಯೋ...