Recent News

3 months ago

ಮಿನಿಬಸ್ ಪಲ್ಟಿ- ಇಬ್ಬರ ಕಾಲು ಮುರಿತ, 20ಕ್ಕೂ ಹೆಚ್ಚು ಜನರಿಗೆ ಗಾಯ

ರಾಮನಗರ: ಗಾರ್ಮೆಂಟ್ಸ್ ನೌಕರರನ್ನು ಕರೆ ತರುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಇಬ್ಬರಿಗೆ ಕಾಲು ಮುರಿದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಕಾಳೇಗೌಡನದೊಡ್ಡಿ ಗ್ರಾಮದ ಬಳಿ ನಡೆದಿದೆ. ಕನಕಪುರ ಹೊರ ವಲಯದ ಶಿವನೇಗೌಡನದೊಡ್ಡಿ ಗ್ರಾಮದ ಬಳಿಯ ಲಗೂನಾ ಗಾರ್ಮೆಂಟ್ಸ್ ಗೆ ಇಂದು ಬೆಳಿಗ್ಗೆ ನೌಕರರನ್ನು ಮಿನಿ ಬಸ್‍ನಲ್ಲಿ ಕರೆತರಲಾಗುತ್ತಿತ್ತು. ಸುಮಾರು 30 ಜನರಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಚಾಲಕನ […]

2 years ago

ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ 407 ಟೆಂಪೊಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನವರಂಗ್ ಸಿಗ್ನಲ್ ಬಳಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೊ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಬಸ್ ಮಲ್ಲೇಶ್ವರಂನಿಂದ ವಿಜಯನಗರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....